ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

Date:

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಕೆಲವೆಡೆ ಶುಕ್ರವಾರವೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಕೆಲವು ಕಡೆ, ಕೊಡಗು, ತುಮಕೂರು, ಚಿಕ್ಕಮಗಳೂರು, ಮೈಸೂರು, ಹಾಸನ, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಯ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಇದೇ 17ರಿಂದ ಬೆಂಗಳೂರು, ಚಿಕ್ಕಮಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ತುಮಕೂರು ಸೇರಿ ವಿವಿಧ ಜಿಲ್ಲೆಗಳ ಕೆಲವಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮಿಳುನಾಡಿನ ಹಲವೆಡೆ ಭಾರಿ ಮಳೆ

ತಮಿಳುನಾಡಿನ ಹಲವೆಡೆ ಗುರುವಾರ ಭಾರಿ ಮಳೆಯಾಗಿದ್ದು, ಚೆನ್ನೈ ಮತ್ತಿತರ ಪ್ರಮುಖ ಜಿಲ್ಲೆಗಳಲ್ಲಿ ಶಾಲೆಗಳಿಗೆ ಒಂದು ದಿನ ರಜೆ ಘೋಷಿಸಲಾಗಿದೆ. ಅಣೆಕಟ್ಟೆಗಳಲ್ಲಿ ನೀರಿನ ಪ್ರಮಾಣ ವೇಗವಾಗಿ ಏರಿಕೆಯಾಗುತ್ತಿದ್ದು, ಚೆನ್ನೈನ ಉಪನಗರದಲ್ಲಿರುವ ಎರಡು ಅಣೆಕಟ್ಟುಗಳು ಮತ್ತು ತಿರುವಣ್ಣಾಮಲ್ಲೆ ಜಿಲ್ಲೆಯಲ್ಲಿರುವ ಒಂದು ಅಣೆಕಟ್ಟೆಯ ಶಟರ್‌ಗಳನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತೆರೆದು ನೀರನ್ನು ಹೊರಬಿಟ್ಟಿದ್ದಾರೆ.

ಸಾತನೂರು ಅಣೆಕಟ್ಟೆಯಿಂದ 13,000 ಕ್ಯುಸೆಕ್ಸ್‌ ನೀರನ್ನು ಹೊರ ಬಿಡಲಾಗಿದೆ. ಚೆಂಬರಂಬಕ್ಕಂನಿಂದ 3,500 ಕ್ಯುಸೆಕ್ಸ್ ಮತ್ತು ಪೋಂಡಿ ಅಣೆಕಟ್ಟೆಯಿಂದ 1,000 ಕ್ಯುಸೆಕ್ಸ್‌ ನೀರನ್ನು ಹೊರಬಿಡಲಾಗಿದೆ.

ಬುಧವಾರ ರಾತ್ರಿ ಮತ್ತು ಗುರುವಾರ ಚೆನ್ನೈ, ತಿರುವಳ್ಳೂರು, ಚೆಂಗಲ್‌ಪೇಟ್‌, ಕಾಂಚೀಪುರಂ, ವಿಲ್ಲುಪುರಂ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸುರಿದಿದೆ. ಈ ಪ್ರದೇಶಗಳೂ ಸೇರಿದಂತೆ ಕಲ್ಲಕುರಿಚಿ, ತಿರುವರೂರು, ತಾಂಜಾವೂರು ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಸ್ಥಳೀಯ ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಮುಡಾ ಹಗರಣ | ಕರ್ನಾಟಕ ಹೈಕೋರ್ಟ್ ದೋಷಪೂರಿತ ತೀರ್ಪು ನೀಡಿತೆ?

ತಿರುವರೂರು ಮತ್ತು ನಾಗಪಟ್ಟಣಂ ಜಿಲ್ಲೆಗಳಲ್ಲಿ ಕಟಾವಿಗೆ ಬಂದಿದ್ದ ಭತ್ತದ ಬೆಳೆಯು ನೀರಿನಲ್ಲಿ ಮುಳುಗಿದೆ. ಮನ್ನಾರ್‌ಗುಡಿಯಲ್ಲಿ ಮೂರು ವಿದ್ಯುತ್‌ ಕಂಬಗಳು ಉರುಳಿಬಿದ್ದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಚೆನ್ನೈನಲ್ಲಿ ಕನಿಷ್ಠ ಮೂರು ಸುರಂಗ ಮಾರ್ಗಗಳು ನೀರಿನಲ್ಲಿ ಮುಳುಗಿದ್ದು, ಈ ಮಾರ್ಗವಾಗಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ನೀರು ಹೊರಹಾಕುವ ಪ್ರಯತ್ನ ಮುಂದುವರಿದಿದೆ. ತುರ್ತುಸ್ಥಿತಿ ನಿರ್ಮಾಣವಾದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್‌ ಆರು ತಂಡಗಳು ಸನ್ನದ್ಧವಾಗಿವೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ತಗ್ಗು ಪ್ರದೇಶಗಳ ಜನರು ಎಚ್ಚರಿಕೆಯಿಂದ ಇರುವಂತೆ ಸರ್ಕಾರ ತಿಳಿಸಿದೆ.

ಕೇರಳದ 3 ಜಿಲ್ಲೆಗಳಿಗೆ ರೆಡ್ ಅಲರ್ಟ್‌

ಕೇರಳದ ಹಲವೆಡೆ ಗುರುವಾರ ಬೆಳಿಗ್ಗೆ ಭಾರಿ ಮಳೆಯಾಗಿದ್ದು, ಮೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಪಟ್ಟಣಂತಿಟ್ಟು, ಎರ್ನಾಕುಲಂ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಐಎಂಡಿ ‘ರೆಡ್‌ ಅಲರ್ಟ್‌’ ಘೋಷಣೆ ಮಾಡಲಾಗಿದೆ. ತಿರುವನಂತಪುರ, ಕೊಲ್ಲಂ, ಅಲಪ್ಪುಳ, ಕೊಟ್ಟಾಯಂ ಮತ್ತು ತ್ರಿಶೂರ್ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ಘೋಷಿಸಿದೆ. ಪಾಲಕ್ಕಾಡ್‌, ಮಲಪ್ಪುರಂ, ಕೋಯಿಕೋಡ್, ವಯನಾಡ್‌ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಘೋಷಣೆ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...