ವಿಶ್ವಕರ್ಮ ಸಮುದಾಯದ ಯುವಕರು ಜಾಗೃತರಾಗಬೇಕು; ಶ್ರೀ ನೀಲಕಂಠಾಚಾರ್ಯ ಸ್ವಾಮೀಜಿ ಕರೆ

Date:

“ವಿಶ್ವಕರ್ಮ ಸಮುದಾಯದ ಯುವಕರು ಜಾಗೃತರಾಗುವ ಮೂಲಕ ಸಮಾಜದಲ್ಲಿ ಗುರುತಿಸಿಕೊಳ್ಳುವ ಕೆಲಸವಾಗಬೇಕು” ಎಂದು ವಿಶ್ವಕರ್ಮ ಸಂಪನ್ಮೂಲ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ನೀಲಕಂಠಾಚಾರ್ಯ ಸ್ವಾಮೀಜಿಗಳು ಯುವಕರಿಗೆ ಕಿವಿ ಮಾತು ಹೇಳಿದರು.

ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ ರಾಜ್ಯಮಟ್ಟದ ಸಮಾವೇಶ ಹಾಗು ಎಸ್ ಎಸ್ ಎಲ್ ಸಿ, ಪಿಯುಸಿಯಲ್ಲಿ ಅಧಿಕ ಅಂಕಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ವಿಶ್ವಕರ್ಮ ಸಮುದಾಯದಲ್ಲಿ ಮಕ್ಕಳು 90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುವ ಮೂಲಕ ಸಮುದಾಯಕ್ಕೆ ಉತ್ತಮ ಸಂದೇಶವನ್ನು ನೀಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದರು. ಮುಂದಿನ ದಿನಗಳಲ್ಲಿ ಶೈಕ್ಷಣಿಕವಾಗಿ ಮಕ್ಕಳು ಹೆಚ್ಚು ಮುಂದೆ ಬರಬೇಕು ಎಂದು ಹೇಳಿದರು.

ವಿಶ್ವಕರ್ಮ ಸಮಾಜ ಒಳ್ಳೆಯ ಚಿಂತನೆಗಳನ್ನು ಇಟ್ಟುಕೊಂಡು ಬೆಳೆದು ಬಂದಿದೆ. ಸಮುದಾಯ ಜಾಗೃತ ವಾಗಬೇಕಾದರೆ ಮಠಾಧಿಪತಿಗಳು, ಸ್ವಾಮಿಜಿಗಳು ಮುನ್ನೆಲೆಗೆ ಬರಬೇಕು. ಪ್ರತಿ ಜಿಲ್ಲೆಗಳಲ್ಲೂ ಧರ್ಮದ ಉದ್ದಾರ, ಸಮಾಜ ಬೆಳೆಸುವ ಕೆಲಸವನ್ನು ಸ್ವಾಮೀಜಿಗಳು ಮಾಡಿಕೊಂಡು ಬರುತ್ತಿದ್ದಾರೆ. ನಮ್ಮ ಸಮಾಜದಲ್ಲಿ ಯಾರ ಮೇಲೂ ದ್ವೇಷವಿಲ್ಲ, ತಾರತಮ್ಯ ಮಾಡುವುದಿಲ್ಲ. ವಿಶ್ವಕರ್ಮ ಸಮಾಜದವರು ನಾವೆಲ್ಲ ಒಂದೇ ಎಂಬ ಭಾವನೆಯಿಂದ ಕೂಡಿ ಸಮಾಜದ ಚಿಂತನೆಗಳ ಬಗ್ಗೆ ಗಮನಹರಿಸಬೇಕು ಎಂದು ಸಮುದಾಯಕ್ಕೆ ಸಂದೇಶವನ್ನು ಸಾರಿದರು.

ಅಖಿಲ ಕರ್ನಾಟಕ ವಿಶ್ವಕರ್ಮ ಸಮುದಾಯದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರಳಿ ಮಾತನಾಡಿ, ಸಮುದಾಯದಲ್ಲಿ ದುಡಿಯುತ್ತಿರುವ ಹಾಗೂ ಶೈಕ್ಷಣಿಕವಾಗಿ ಮುಂದೆ ಬರುವ ನಿಟ್ಟಿನಲ್ಲಿ ಮಕ್ಕಳಿಗೆ ಪ್ರತಿ ವರ್ಷವೂ ಸಹ ಪ್ರತಿಭಾ ಪುರಸ್ಕಾರ ಹಾಗೂ ವಿಶ್ವಕರ್ಮ ಪ್ರಶಸ್ತಿಯನ್ನು ನೀಡುತ್ತಾ ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದೇವೆ. ನಾವು ಯಾವತ್ತೂ ಸಹ ಸಮಾಜದ ಸುಧಾರಣೆಗೆ, ಅಭಿವೃದ್ಧಿಗೆ ಸದಾ ಮುಂದೆ ಇರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 06 21 at 18.50.15

ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದಿರುವ ಜಯಸೂರ್ಯ ಹಾಗೂ ಪಿಯುಸಿಯಲ್ಲಿ ಆದಿತ್ಯ ಅವರು ಶೇಕಡ 99 ಅಂಕಗಳನ್ನು ಪಡೆಯುವ ಮೂಲಕ ಸಮುದಾಯಕ್ಕೆ ಹೆಮ್ಮೆ ತಂದಿದ್ದಾರೆ. ಇನ್ನು ಇದೇ ವೇಳೆ ಸಮುದಾಯದ ನೂರಾರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ 10 ಜನ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು‌.

ಸಮಾವೇಶದಲ್ಲಿ ಲೋಹಿಯಾ ವಿಚಾರ ವೇದಿಕೆಯ ಅಧ್ಯಕ್ಷ ಬಿಎಸ್ ಶಿವಣ್ಣ, ಸಮುದಾಯದ ಮಠಾಧೀಶರು, ಸ್ವಾಮೀಜಿಗಳು, ವಿವಿಧ ಜಿಲ್ಲೆಗಳಿಂದ ಆಗಮಿಸಿದ ವಿಶ್ವಕರ್ಮ ಸಮುದಾಯದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...