ಚಿಂತಾಮಣಿ ತಾಲ್ಲೂಕಿನ ಹಿಂದೂ ಮುಸ್ಲಿಮರ ಭಾವೈಕ್ಯತೆಯ ಕೇಂದ್ರ ಹಾಗೂ ಪುಣ್ಯಕ್ಷೇತ್ರವಾಗಿರುವ ಮುರುಗಮಲ್ಲ ದರ್ಗಾ ಆವರಣದಲ್ಲಿ ಅಕ್ರಮವಾಗಿ ಪ್ಲಾಸ್ಟಿಕ್ ಕವರ್ ಗಳ ಬಳಕೆಯಾಗುತ್ತಿದ್ದು ಅಂಗಡಿಗಳ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಹಾಜಿ ಅನ್ಸರ್ ಖಾನ್ ರವರ ನೇತೃತ್ವದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಸುಮಾರು 15 ಕೆಜಿ ಯಷ್ಟು ಪ್ಲಾಸ್ಟಿಕ್ ಕವರ್ ಗಳನ್ನು ಜಪ್ತಿ ಮಾಡಿಕೊಂಡು ಅಂಗಡಿ ಮಾಲೀಕರಿಗೆ ಖಡಕ್ ವಾರ್ನಿಂಗ್ ನೀಡಿ ಬಂದಿದ್ದಾರೆ.
ಈ ವೇಳೆ ಮಾತನಾಡಿದ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಹಾಜಿ ಅನ್ಸರ್ ಖಾನ್ ಪ್ಲಾಸ್ಟಿಕ್ ಕವರ್ ಗಳು ಮಾರಾಟ ಹಾಗೂ ಅದರ ಬಳಕೆ ಮಾಡುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದ್ದರು,ಕೆಲ ಅಂಗಡಿಗಳಲ್ಲಿ ಕದ್ದು ಮುಚ್ಚಿ ಮಾರಾಟ ಹಾಗೂ ಬಳಿಕೆಯಾಗುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ತಕ್ಷಣವೇ ದಾಳಿ ನಡೆಸಿ ಜಪ್ತಿ ಮಾಡಿಕೊಳ್ಳಲಾಗಿದೆ.
ಇದನ್ನು ಓದಿದ್ದೀರಾ..? ಪೋಲಿಸ್ ಭದ್ರತೆಯಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮಾಲೂರು ಕ್ಷೇತ್ರದ ಮರುಮತ ಎಣಿಕೆ
ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರು ಯಾವುದೇ ಕಾರಣಕ್ಕೆ ಪ್ಲಾಸ್ಟಿಕ್ ಕವರ್ ಗಳನ್ನು ಬಳಸಬಾರದು.ಕದ್ದು ಮುಚ್ಚಿ ಪ್ಲಾಸ್ಟಿಕ್ ಕವರ್ ಗಳನ್ನು ಮಾರಾಟ ಮಾಡಿದರೆ ಮುಂದಿನ ದಿನಗಳಲ್ಲಿ ದಂಡ ವಿಧಿಸಿ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.





