ಅನ್ಯ ಭಾಷಿಕರ ಹಾವಳಿ, ಕನ್ನಡ ಮೊದಲ ಆಧ್ಯತೆಯಾಗಲಿ: ಕೊತ್ತೂರು ಮಂಜುನಾಥ್

Date:

ಕೋಲಾರ: ಕರ್ನಾಟಕ ರಾಜ್ಯದಲ್ಲಿ ಅನ್ಯ ಭಾಷಿಕರ ಹಾವಳಿ ಹೆಚ್ಚಾಗಿದೆ. ಮುಂದೊಂದು ದಿನ ಕನ್ನಡ ಹುಡುಕುವ ಸಂದರ್ಭ ಬಂದರೂ ಆಶ್ಚರ್ಯವಿಲ್ಲ. ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಿ ನಾವೆಲ್ಲರೂ ಕನ್ನಡವನ್ನು ಉಳಿಸಿ ಬೆಳೆಸಬೇಕಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ತಾಲೂಕಿನ ನರಸಾಪುರ ಗ್ರಾಮದಲ್ಲಿ ಭಾನುವಾರ ಕನ್ನಡಸೇನೆ ಕರ್ನಾಟಕ ವತಿಯಿಂದ 70 ನೆಯ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಕನ್ನಡ ಮಾತಾಡುವ ಮೂಲ ಜನರನ್ನು ಹುಡುಕುವ ಬದಲು ಅನ್ಯ ಭಾಷಿಕರಿಗೆ ತಿಳಿವಳಿಕೆ ಕೊಟ್ಟು ಕನ್ನಡದ ಬಗ್ಗೆ ಅಭಿಮಾನ ಗೌರವ ಕೊಡುವ ಕೆಲಸವನ್ನು ನಾವು ಎಲ್ಲರನ್ನೂ ಮಾಡಬೇಕಾಗಿದೆ ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಅದರದ್ದೇ ಆದ ಇತಿಹಾಸವಿದೆ ಅದನ್ನು ಉಳಿಸಿ ಬಳಸೋಣ ಎಂದರು.

ಕೋಲಾರ ಜಿಲ್ಲೆಯು ಎರಡು ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಗಡಿ ಭಾಗದಿಂದ ಕೂಡಿದ್ದು ಭಾಷೆ ಮಿಶ್ರಿತಗೊಂಡಿದೆ ಜಿಲ್ಲೆಯು ವಿಶ್ವದಾದ್ಯಂತ ಹೆಸರು ಮಾಡಿರುವ ಚಿನ್ನ, ರೇಷ್ಮೆ, ಹಾಲಿಗೆ ಹೆಸರಾಗಿವೆ ಅಷ್ಟೇ ಅಲ್ಲದೇ ರಾಜ್ಯಕ್ಕೆ ಮೊದಲ ಮುಖ್ಯಮಂತ್ರಿ ಕೊಟ್ಟ ಜಿಲ್ಲೆಯಾಗಿದೆ ಇಲ್ಲಿ ಕನ್ನಡಿಗರ ಅಭಿಮಾನಕ್ಕೆ ಯಾವುದರಲ್ಲೂ ಕಡಿಮೆ ಇಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನರಸಾಪುರ ವ್ಯಾಪ್ತಿಯಲ್ಲಿ ಅಭಿವೃದ್ಧಿಗಾಗಿ ಈಗಾಗಲೇ 35 ಕೋಟಿ ಅನುದಾನ ಬಿಡುಗಡೆ ಮಾಡಿ ಕಾಮಗಾರಿಗಳು ನಡೆಯುತ್ತಿವೆ ಈ ಭಾಗದಲ್ಲಿ ಸರ್ಕಾರಿ ರಾಜಕಾಲುವೆ, ಕೆರೆ, ಜಾಗಗಳನ್ನು ಒತ್ತುವರಿಯಾಗಿ ಅನ್ಯ ಕಾರ್ಯಗಳಿಗೆ, ಸರ್ಕಾರಿ ಕಛೇರಿಗಳಿಗೆ ಜಾಗವಿಲ್ಲವಾಗಿದೆ ಸ್ಮಶಾನಕ್ಕೆ ಕೂಡಲೇ ಜಾಗ ಗುರುತಿಸಿ ಜಾಗ ಮಂಜೂರು ಮಾಡಿಸುವ ಜವಾಬ್ದಾರಿ ನಮ್ಮದು ಎಂದರು.

ಇದನ್ನು ಓದಿದ್ದೀರಾ..? ವಿದ್ಯುತ್ ಶಾರ್ಟ್ ಸರ್ಕ್ಯೂಟ್,ಮನೆ ಸುಟ್ಟು ಭಸ್ಮ

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು ಸೂಲೂರು ಗ್ರಾಪಂ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಕಾರ್ಯದರ್ಶಿ ವೀರೇಂದ್ರ ಪಾಟೀಲ್, ವೈದ್ಯ ಡಾ.ನಾರಾಯಣಸ್ವಾಮಿ ಲಕ್ಷ್ಮೀಸಾಗರ ಸುನಿಲ್ ಕುಮಾರ್, ಮುಖಂಡರಾದ ನರಸಾಪುರ ನವೀನ್, ಜಾಲಿ ಬಾಬು, ಎಂ.ಟಿ.ಬಿ ಶ್ರೀನಿವಾಸ್, ಕನ್ನಡಸೇನೆಯ ಚಂದ್ರು ಸೇರಿದಂತೆ ಪದಾಧಿಕಾರಿಗಳು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...