ಎಸ್.ಎನ್ ಗೆ ಮಂತ್ರಿ ಸ್ಥಾನಕ್ಕೆ ಒತ್ತಾಯ, ಕೋಲಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ

Date:

ಕೋಲಾರ: ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಸಚಿವ ಸಂಪುಟದ ಪುನಃರಚನೆಯ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಹುತ್ತೂರು ಹೋಬಳಿಯ ಕಾಂಗ್ರೆಸ್ ಮುಖಂಡರು ನಗರದ ಕೋಲಾರಮ್ಮ ದೇವಸ್ಥಾನದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿದರು,

ಈ ಸಂದರ್ಭದಲ್ಲಿ ಹುತ್ತೂರು ಗ್ರಾಪಂ ಮಾಜಿ ಅಧ್ಯಕ್ಷ ವಿಟ್ಟಪ್ಪನಹಳ್ಳಿ ಕೋಟೆ ನಾರಾಯಣಸ್ವಾಮಿ ಮಾತನಾಡಿ ಎಸ್‌.ಎನ್ ನಾರಾಯಣಸ್ವಾಮಿ ಅವರು ಬಂಗಾರಪೇಟೆ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಸತತವಾಗಿ ಮೂರನೇ ಬಾರಿಗೆ ಶಾಸಕರಾಗಿ ಜಿಲ್ಲೆಯಲ್ಲಿ ಗೆದ್ದಿರುವ ನಾಲ್ಕು ಶಾಸಕರಲ್ಲಿ ಹಿರಿಯ ಶಾಸಕರಾಗಿದ್ದಾರೆ ಈ ಹಿಂದೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಪ್ರಸ್ತುತ ಹಣಕಾಸು ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಅನುಭವವಿರುವ ರಾಜಕಾರಣಿಯಾಗಿದ್ದು ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಗೆ ಅವಕಾಶ ದೊರಕಿಸಿ ಕೊಡಬೇಕೆಂದು ಮನವಿ ಮಾಡಿದರು.

ಹರಟಿ ಗ್ರಾಪಂ ಮಾಜಿ ಅಧ್ಯಕ್ಷ ಮಲ್ಲಂಡಹಳ್ಳಿ ನಾಗಭೂಷಣ ಬಾಬು ಮಾತನಾಡಿ ಕೋಲಾರ ಜಿಲ್ಲೆಯಲ್ಲಿ ಎಲ್ಲಾ ಶಾಸಕರನ್ನು ಹಾಗೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಮಾಡುವಂತಹ ಅನುಭವಿಗೆ ಅವಕಾಶ ಕೊಟ್ಟರೆ ಜಿಲ್ಲೆಯಲ್ಲಿನ ಹಿಂದುಳಿದ ವರ್ಗ, ಶೋಷಿತ ಸಮುದಾಯಗಳು, ಬಡವರ ಜನಾನುರಾಗಿ ಕೆಲಸ ಮಾಡಲಿದ್ದಾರೆ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಮುಖಂಡ ಹೊಳಲಿ ಚಲಪತಿ ಮಾತನಾಡಿ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜನ ಮೆಚ್ಚುವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರಿಂದಾಗಿ ಸತತವಾಗಿ ಮೂರನೇ ಬಾರಿಗೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದ ಮಟ್ಟದಲ್ಲಿ ಒತ್ತಡ ತಂದು ಜಿಲ್ಲೆಯಲ್ಲಿ ಅಭಿವೃದ್ಧಿ ಹರಿಕಾರ ಎನಿಸಿಕೊಂಡಿದ್ದಾರೆ ಯಾವುದೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಾ ಮುಖಂಡರು ಹಾಗೂ ಕಾರ್ಯಕರ್ತರಿಗೆ ದೊಡ್ಡ ಶಕ್ತಿಯಾಗಿ ನಿಂತಿದ್ದು ಪಕ್ಷದ ಹೈಕಮಾಂಡ್‌ ರಾಜ್ಯ ಸಿಎಮನ.ಡಿಸಿಎಂ ಅವರು ಜನಪರ ಸೇವೆ ಗುರುತಿಸಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? ಹಳ್ಳಿಗಳ ಸಂಪರ್ಕ ರಸ್ತೆಗಳಿಗೆ 200 ಕೋಟಿ ಅನುದಾನದಲ್ಲಿ ಅಭಿವೃದ್ಧಿ: ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ಹುತ್ತೂರು ಗ್ರಾಪಂ ಅಧ್ಯಕ್ಷ ವರಲಕ್ಷ್ಮೀ ಚಂದ್ರಪ್ಪ, ಮುಖಂಡರಾದ ಬೆಳಗಾನಹಳ್ಳಿ ಬಿಎಂಟಿಸಿ ಮಂಜುನಾಥ್, ಶ್ರೀರಾಮ್, ಅರಳಕುಂಟೆ ವೆಂಕಟೇಶ್, ಅಬ್ಬಣಿ ನಾಗರಾಜ್, ಯಾರಂಗಟ್ಟ ಮುನಿರಾಜು, ಪಟ್ನ ನಾರಾಯಣಸ್ವಾಮಿ, ಸಿರೇಸಂದ್ರ ಜ್ಯೋತಿಕುಮಾರ್, ಮೇಡತಂಬಿಹಳ್ಳಿ ರಮೇಶ್, ಬೆಳಗಾನಹಳ್ಳಿ ಬಿ ಪಿ ವೆಂಕಟೇಶ್, ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...