ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ ವಿಷಯವಾರು ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ

Date:

ಬಾಗೇಪಲ್ಲಿ:- ಪ್ರಸಕ್ತ ವರ್ಷ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ದಿಟ್ಟ ಹೆಜ್ಜೆ ಕೈಗೊಂಡಿದ್ದು, ಅದಕ್ಕೆ ಪೂರಕವಾಗಿ ಶಿಕ್ಷಕರು ಅದನ್ನು ಅನುಷ್ಠಾನ ಮಾಡಬೇಕಾದ ಅಗತ್ಯವಿದೆ ಎಂದು ಬಿಇಓ ಎನ್. ವೆಂಕಟೇಶಪ್ಪ ಹೇಳಿದರು.
ಬುಧವಾರ ತಾಲ್ಲೂಕಿನ ಪಟ್ಟಣದ ಬಾಲಕಿಯರ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ಆಯೋಜಿಸಲಾದ ವಿಷಯವಾರು ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕಳೆದ ವರ್ಷ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಸುಧಾರಣೆ ಕಂಡಿತು.


ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ತಾಲ್ಲೂಕು ಈ ಬಾರಿ ನೂರಕ್ಕೆ ನೂರರಷ್ಟು ಫಲಿತಾಂಶ ಬರುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಹೆಚ್ಚಿನ ಒತ್ತು ನೀಡಬೇಕು. ಸಿ ಹಾಗೂ ಎನ್‍ಸಿ ವಿದ್ಯಾರ್ಥಿಗಳಿಗೆ 40 ಅಂಕಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗಿದ್ದು, ಅದನ್ನು ತಮ್ಮ ಶಾಲೆಯಲ್ಲಿ ಅನುಷ್ಠಾನಗೊಳಿಸಿದರೆ ಶೇ.100 ಫಲಿತಾಂಶ ಬರಲು ಸಾಧ್ಯವಾಗಲಿದೆ ಎಂದರು.

ಇಸಿಓ ಪಿ.ಎನ್.ನಾರಾಯಣ ಸ್ವಾಮಿ, ಮಾತನಾಡಿ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಪಟ್ಟಿ ಮಾಡಿ ಅಂತಹ ವಿದ್ಯಾರ್ಥಿಗಳಿಗೆ ವಿಶೇಷಗಮನ ಹರಿಸಬೇಕು. ಪರೀಕ್ಷೆಯಲ್ಲಿ ಬರಬಹುದಾದ ಸಂಭಾವ್ಯ ಪ್ರಶ್ನೆಗಳ ಬಗ್ಗೆ ತಿಳಿ ಹೇಳಬೇಕು. ಹಳೆ ಪ್ರಶ್ನೆಪತ್ರಿಕೆಗಳನ್ನು ಬಿಡಿಸಿ ವಿವರಿಸಬೇಕು ಮತ್ರು ವಿದ್ಯಾರ್ಥಿಗಳು ಸಲಭವಾಗಿ ಕಲಿಯುವಂತೆ ಮತ್ತು ಅರ್ಥವಾಗುವಂತೆ ಕಲಿಕಾ ವಿಧಾನದಲ್ಲಿ ತಿಳಿಸಬೇಕು. ಹೀಗೆ ಮಾಡುವ ಮೂಲಕ ಈ ಬಾರಿ ನೂರಕ್ಕೆ ನೂರರಷ್ಟು ಫಲಿತಾಂಶ ತರುವ ನಿಟ್ಟಿನಲ್ಲಿ ಎಲ್ಲಾ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದು ಕರೆ ನೀಡಿದರು.

ಕಾರ್ಯಾಗಾರದಲ್ಲಿ ಭಾಗವಹಿಸಿದ ಸಂಪನ್ಮೂಲ ವ್ಯಕ್ತಿಗಳು, ಆರು ವಿಷಯಗಳ ಕುರಿತು ಶಿಕ್ಷಕರಿಗೆ ಪ್ರೊಜೆಕ್ಟರ್ ಸ್ಕ್ರೀನ್ ಮೂಲಕ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಲಾಯಿತು.

ಇದನ್ನು ಓದಿದ್ದೀರಾ..? ಸಿಎಂ ಗೊಂದಲ ನಿವಾರಣೆ | ಹೈಕಮಾಂಡ್ ನಿರ್ಧಾರಕ್ಕೆ ನಾವು ಎಲ್ಲರೂ ಬದ್ಧ: ಸಚಿವ ಕೆ.ಎಚ್‌. ಮುನಿಯಪ್ಪ

ಈ ಸಂದರ್ಭದಲ್ಲಿ ಶಿಕ್ಷಕರಾದ ಆರ್.ಹನುಮಂತ ರೆಡ್ಡಿ ಸುಧಾಕರ್,ಬಾಲರಾಜು,ಈಶ್ವರಪ್ಪ,ಕೆ.ವಿ.ಶ್ರೀನಿವಾಸ್,ರಾಜರಾಜೇಶ್ವರಿ, ಕೆ.ವಿ.ಆದಿನಾರಾಯಣ, ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...