ಚಿಕ್ಕಬಳ್ಳಾಪುರ : ಇಂದಿನಿಂದ ಏಪ್ರಿಲ್ ವರೆಗೆ 90 ದಿನಗಳ ಕಾಲ ವಿಶೇಷ ಮಧ್ಯಸ್ಥಿಕೆ ಅಭಿಯಾನ 2.0ನ್ನು ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಮಲಿಂಗೇಗೌಡ ಅವರು ತಿಳಿಸಿದರು.
ಕಳೆದ ವರ್ಷ ಜುಲೈ 1ರಿಂದ ನವೆಂಬರ್ ವರೆಗೆ ಮಧ್ಯಸ್ಥಿಕೆ ಅಭಿಯಾನ ನಡೆದಿತ್ತು. ಆಗ 2092 ಪ್ರಕರಣಗಳು ಮಧ್ಯಸ್ಥಿಕೆಗೆ ನೋಂದಣಿಯಾಗಿತ್ತು ಈ ಪೈಕಿ 1069 ಪ್ರಕರಣಗಳನ್ನು ಮಧ್ಯಸ್ಥಿಕೆ ಅಭಿಯಾನ ಪ್ರಕ್ರಿಯೆಗೆ ಒಳಪಡಿಸಿ 190 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿತ್ತು. ಈ ವರ್ಷದ ಆರಂಭದಲ್ಲೇ ಎರಡನೇ ಹಂತದ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದನ್ನು ಸದುಪಯೋಗಪಡೆದುಕೊಳ್ಳಬೇಕು ಎಂದರು.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಾನ್ಯ ಸರ್ವೋಚ್ಚ ನ್ಯಾಯಾಲಯ ದ ನಿರ್ದೇಶನದಂತೆ ಜನವರಿ 02 ರಿಂದ ಏಪ್ರಿಲ್ ಮಾಹೇಯವರೆಗೆ 90 ದಿನಗಳ ಕಾಲ ಜಿಲ್ಲೆಯಲ್ಲಿಯೂ ವಿಶೇಷ ಮಧ್ಯಸ್ಥಿಕೆ 2.0 ಅಭಿಯಾನವನ್ನು ಹಮ್ಮಿಕೊಂಡು ಜಿಲ್ಲಾ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುತ್ತಿದೆ . ಚೆಕ್ ಬೌನ್ಸ್, ವೈವಾಹಿಕ, ಅಪಘಾತ, ಕೌಟುಂಬಿಕ ದೌರ್ಜನ್ಯ, ವಾಣಿಜ್ಯ ವಿವಾದ, ಸೇವಾ ವಿಷಯ, ಸಾಲದ ವಸೂಲಾತಿ, ಕಾರ್ಮಿಕ, ಭೂ ಸ್ವಾಧೀನ ಪ್ರಕರಣಗಳು ಸೇರಿದಂತೆ ಸೂಕ್ತ ಕ್ರಿಮಿನಲ್ ಮತ್ತು ಸಿವಿಲ್ ಪ್ರಕರಣಗಳನ್ನು ಈ ಅಭಿಯಾನದಲ್ಲಿ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು.
ಕೆಲವು ಪ್ರಕರಣಗಳಲ್ಲಿ ಮಧ್ಯಸ್ಥಿಕೆ ವಹಿಸುವವರ ಪಾತ್ರ ಹಾಗೂ ಮಧ್ಯಸ್ಥಿಕೆಯು ಬಹಳ ಮುಖ್ಯವಾಗಿರುತ್ತದೆ. ಈ ಅಭಿಯಾನದಡಿ ಕಕ್ಷಿದಾರ ಹಾಗೂ ಎದುರು ದಾರರ ಮಧ್ಯೆ ಸೂಕ್ತ ಸಂವಹನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ,ಪರಸ್ಪರರು ತಮ್ಮ ಸಮ್ಮತಿ ಮತ್ತು ಒಪ್ಪಿಗೆಯ ಮೂಲಕ ವಿವಾದಗಳನ್ನು ಪರಿಹರಿಸಿಕೊಳ್ಳುವುದರಿಂದ ಉನ್ನತ ನ್ಯಾಯಾಲಯಗಳಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಕಾನೂನು ದೃಷ್ಟಿ ಸೇರಿದಂತೆ ಇತರ ದೃಷ್ಠಿಕೋನಗಳಲ್ಲಿಯೂ ಪ್ರಕರಣಗಳನ್ನು ಅವಲೋಕಿಸಿ ಅಭಿಯಾನದಲ್ಲಿ ಇತ್ಯರ್ಥಪಡಿಸಲಾಗುತ್ತದೆ. ಈ ಮಧ್ಯಸ್ಥಿಕೆ ಅಭಿಯಾನದಲ್ಲಿ ಭಾಗವಹಿಸಿ ಪ್ರಕರಣ ಇತ್ಯರ್ಥ ಪಡಿಸಿಕೊಂಡವರು ಬಹಳ ಹರ್ಷ ಹಾಗೂ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಅಭಿಯಾನವು ಯಶಸ್ವಿಯಾಗಲು ಜಿಲ್ಲೆಯ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಅಗತ್ಯ. ಜಿಲ್ಲೆಯ ವಕೀಲರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವಕೀಲರ ಸಂಘದಿಂದ ಸಂಪೂರ್ಣ ಸಹಕಾರ ನೀಡಲಿದ್ದಾರೆ ಎಂದರು.
ಇದನ್ನು ಓದಿದ್ದೀರಾ...? ಬಿಜೆಪಿಯಿಂದ ಆದಿವಾಸಿಗಳ ಕಡೆಗಣನೆ: ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ: ಶೋಭನ್ ಬಾಬು
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ ಪ್ರಭು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ಶಿಲ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್ ಹಾಗೂ ವಕೀಲರು ಉಪಸ್ಥಿತರಿದ್ದರು.
ಏಪ್ರಿಲ್ ವರೆಗೆ ವಿಶೇಷ ಮಧ್ಯಸ್ಥಿಕೆ ಅಭಿಯಾನ: ನ್ಯಾ ರಾಮಲಿಂಗೇಗೌಡ
Date:
ಪೋಸ್ಟ್ ಹಂಚಿಕೊಳ್ಳಿ:




