ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಪದವೀಧರರು ನೋಂದಣಿ ಮಾಡಿಕೊಳ್ಳಲು ತೋಪಲ್ಲಿ ಚೌಡರೆಡ್ಡಿ ಮನವಿ

Date:

ಬಾಗೇಪಲ್ಲಿ:-ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆ ಆರಂಭವಾಗಿದ್ದು ಕೂಡಲೇ ಪದವೀಧರರು ಸೂಕ್ತ ದಾಖಲಾತಿಗಳನ್ನು ನೀಡಿ ನೋಂದಣಿ ಮಾಡಿಕೊಳ್ಳಲು ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಎನ್.ಡಿ.ಎ. ಸಂಭವನೀಯ ಅಭ್ಯರ್ಥಿ ತೋಪಲ್ಲಿ ಚೌಡರೆಡ್ಡಿ ಸಲಹೆ ನೀಡಿದರು.
ಪಕ್ಷದಿಂದ ಅಗತ್ಯ ಸಲಹೆ ಮಾರ್ಗದರ್ಶನ ನೀಡಲಾಗುತ್ತಿದ್ದು ಇದರ ಸದುಪಯೋಗ ಪಡಿಸಿಕೊಂಡು ಪ್ರತಿಯೊಬ್ಬರೂ ನೋಂದಣಿ ಮಾಡಿಸುವಂತೆ ಆಗ್ನೇಯ ಪದವೀಧರ ಕ್ಷೇತ್ರದ ಸಂಭವನೀಯ ಅಭ್ಯರ್ಥಿ ತೋಪಲ್ಲಿ ಚೌಡರೆಡ್ಡಿ ಶಿಕ್ಷಕರು ಹಾಗೂ ಪದವೀಧರರ ಮತದಾರರಲ್ಲಿ ಮನವಿ ಮಾಡಿದರು.

ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿ ಹಾಗೂ ಪದವೀಧರಿಗೆ ಅರ್ಜಿಗಳನ್ನು ವಿತರಿಸಿ ಮಾತನಾಡಿದ ಅವರು ಆಗ್ನೇಯ ಪದವೀಧರರ ಕ್ಷೇತ್ರದ ವ್ಯಾಪ್ತಿಯ ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಮತ್ತು ದಾವಣಗೆರೆ (ಹರಿಹರ, ಜಗಳೂರು ದಾವಣಗೆರೆ ತಾಲ್ಲೂಕುಗಳು) ಐದು ಜಿಲ್ಲೆಗಳು ಒಳಪಟ್ಟಿದ್ದು ಮತದಾರರರ ಪಟ್ಟಿಯಲ್ಲಿ ಹೆಸರನ್ನು ಸೇರಿಸುವ ಸಲುವಾಗಿ ಮತದಾರರರ ನೋಂದಣಿಗಾಗಿ ನಮೂನೆ ೧೮ ರಲ್ಲಿನ ಅರ್ಜಿಯನ್ನು ಭರ್ತಿಮಾಡಿ ನ.೬ ಒಳಗಾಗಿ ಸಂಬಂದಪಟ್ಟ ತಾಲೂಕು ತಹಶಿಲ್ದಾರ್ ಕಛೇರಿಯಲ್ಲಿನ ಅಧಿಕಾರಿಗಳಿಗೆ ತಲುಪಿಸಲು ಮನವಿ ಮಾಡಿದರು.

ಪದವೀಧರ ಕ್ಷೇತ್ರದ ಮತದಾರರರ ಪಟ್ಟಿಯನ್ನು ಪ್ರತಿ ಚುನಾವಣೆಯಲ್ಲಿ ಮೊದಲು ಹೊಸದಾಗಿ ತಯಾರಿಸಬೇಕಾಗಿದ್ದು ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ಮತದಾರರರ ಪಟ್ಟಿಯಲ್ಲಿರುವ ಎಲ್ಲಾ ವ್ಯಕ್ತಿಗಳೂ ಸಹ ನಿಗದಿತ ನಮೂನೆಯಲ್ಲಿ ಹೊಸದಾಗಿ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಮತದಾರರಾಗಿ ನೋಂದಣಿಯಾಗಲು ಭಾರತದಲ್ಲಿರುವ ಯಾವುದಾದರೊಂದು ವಿಶ್ವವಿದ್ಯಾಲಯದ ಪದವೀಧರನಾಗಿರುವ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಯೂ ಮತದಾರರರ ಪಟ್ಟಿಯಲ್ಲಿ ತನ್ನ ಹೆಸರು ಸೇರಿಸಲು ಅರ್ಹನಾಗಿರುತ್ತಾನೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿ ಸುಮಾರು ನಾಲ್ಕು ಲಕ್ಷ ಪದವೀಧರ ಮತದಾರರ ನೋಂದಣಿ ಗುರಿ ಹೊಂದಲಾಗಿದೆ ಅರ್ಹ ಪದವೀಧರ ವ್ಯಕ್ತಿಗಳು ತಮ್ಮ ಹೆಸರುಗಳನ್ನು ನೋಂದಾಯಿಸಲು ನಿಗದಿತ ನಮೂನೆ-೧೮ರ ಅರ್ಜಿಯೊಂದಿಗೆ ಪದವಿ ಪ್ರಮಾಣ ಪತ್ರದ ಪ್ರತಿ, ಅಂಕ ಪಟ್ಟಿಯ ಪ್ರತಿಯನ್ನು ಸ್ವಯಂ ದೃಢೀಕರಿಸಿ ಮತ್ತು ಗೆಜೆಟೇಡ್ ಅಧಿಕಾರಿಗಳಿಂದ ದೃಢೀಕರಿಸಿ ಅಡಕದೊಂದಿಗೆ ಸಲ್ಲಿಸಬೇಕು ಮಾಹಿತಿ ಮತ್ತು ಮಾರ್ಗದರ್ಶನ ನೀಡಲು ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಶಿಕ್ಷಕರು ಮಾಡಬೇಕು ಎಂದು ತಿಳಿಸಿದರು

ಅಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ೨೦೨೬ ರ ಜೂನ್ ನಲ್ಲಿ ನಡೆಯಲಿದ್ದು ಬಹುತೇಕವಾಗಿ ಎನ್ ಡಿ.ಎ ಅಭ್ಯರ್ಥಿಯಾಗಿ ನನ್ನನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ ಈಗಾಗಲೇ ಎನ್.ಡಿ.ಎ ಮಿತ್ರ ಪಕ್ಷಗಳಾದ ಜೆಡಿಎಸ್ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಬಿಜೆಪಿ ಪಕ್ಷದ ಜೆ.ಪಿ ನಡ್ಡಾ ಸೇರಿದಂತೆ ಎರಡು ಪಕ್ಷಗಳ ರಾಜ್ಯ ಮುಖಂಡರನ್ನು ಭೇಟಿ ಮಾಡಿ ಬೆಂಬಲ ಕೇಳಲಾಗಿದೆ ಅವಕಾಶ ಕೊಡಲಿ ಬಿಡಲಿ ಅಂತಿಮವಾಗಿ ಕಣದಲ್ಲಿ ಇದ್ದೇ ಇರುತ್ತೇನೆ ಬೆಂಬಲಿಸುವಂತೆ ಮನವಿ ಮಾಡಿದರು.

ಇದನ್ನು ಓದಿದ್ದೀರಾ..? ಜಿಲ್ಲೆಯ ಪ್ರವಾಸಿತಾಣಗಳ ವೀಕ್ಷಿಸಲು ಒಂದು ದಿನದ ಟೂರ್ ಪ್ಯಾಕೇಜ್ ತಯಾರಿಕೆಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚನೆ

ಈ ಸಂದರ್ಭದಲ್ಲಿ ಮುಖಂಡರಾದ ಸೂರ್ಯನಾರಾಯಣ ರೆಡ್ಡಿ ಪ್ರಾಥಮಿಕ, ಹಾಗೂ ಪ್ರೌಢಶಾಲಾ ಶಿಕ್ಷಕರು ನಿವೃತ್ತ ಶಿಕ್ಷಕರು ಪ್ರಾಧ್ಯಾಪಕರು ಹಾಗೂ ಪದವೀಧರರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...