ಕಾಂಗ್ರೆಸ್‌ ಕಛೇರಿಯಲ್ಲಿ ಇಂದಿರಾಗಾಂಧಿ ಜಯಂತಿ ಆಚರಣೆ

Date:

ಕೋಲಾರ: ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಣೆ ಮಾಡಲಾಯಿತು

ಈ ಸಂದರ್ಭದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ ದೇಶದ ಬಡತನ ನಿರ್ಮೂಲನೆ ಹಾಗೂ ಅರ್ಥಿಕ ಅಭಿವೃದ್ದಿಯಲ್ಲಿ ಮಾಜಿ ಪ್ರಧಾನಿ ಹಾಗೂ ಉಕ್ಕಿನ ಮಹಿಳೆ ಇಂದಿರಾಗಾಂಧಿ ಅವರ ಶ್ರಮ ಬಹಳಷ್ಟಿದ್ದು ದೇಶದ ಪ್ರಗತಿಯಲ್ಲಿ ನೆಹರು ಕುಟುಂಬದ ಕೊಡುಗೆ ಅಪಾರವಾಗಿದೆ ಎಂದರು

ಇಂದಿರಾ ಗಾಂಧಿ ದೇಶದ ಕಂಡ ಸಮರ್ಥ ಪ್ರಧಾನಿಗಳಲ್ಲಿ ಒಬ್ಬರು. ದೇಶವನ್ನು ಮುನ್ನಡೆಸುವ ಜೊತೆಗೆ ಇತರೆ ದೇಶಗಳೊಂದಿಗೆ ಉತ್ತಮ ಭಾಂಧವ್ಯ ಹೊಂದಿ, ಅಭಿವೃದ್ದಿಗೆ ಆದ್ಯತೆ ನೀಡಿದ್ದರು. ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ದೇಶದ ಅಭಿವೃದ್ದಿಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿದ್ದರು ಅವರು ಜಾರಿ ಮಾಡಿದ್ದ 20 ಅಂಶಗಳ ಕಾರ್ಯಕ್ರಮಗಳು ಇಂದಿಗೂ ಜನರ ಮನಸ್ಸಿನಲ್ಲಿದೆ. ಬಡತನ ನಿರ್ಮೂಲನೆಗಾಗಿ 20 ಅಂಶಗಳ ಕಾರ್ಯಕ್ರಮವನ್ನು ಅನುಷ್ಠಾನ ಮಾಡಿ, ಹಳ್ಳಿ ಹಳ್ಳಿಗಳಲ್ಲಿಯೂ ಪ್ರಚಲಿತದಲ್ಲಿದ್ದರು. ಅವರ ದಕ್ಷ ಆಡಳಿತ, ಪ್ರಾಮಾಣಿಕ ಸೇವೆ, ಬದ್ದತೆ ಇಂದಿನ ಯುವ ಪೀಳಿಗೆ ಹಾಗೂ ಕಾಂಗ್ರೆಸ್ಸಿಗರಿಗೆ ಸ್ಫೂರ್ತಿಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ಸರ್ ಮಾತನಾಡಿ ಇಂದಿರಾಗಾಂಧಿ ಅವರು ಭಾರತದ ಅಭಿವೃದ್ಧಿ ಹರಿಕಾರರು, ದೀನ ದಲಿತರು ಹಾಗೂ ಹಿಂದುಳಿದ ವರ್ಗಗಳ ಪ್ರಗತಿಗಾಗಿ ಅನೇಕ ಯೋಜನೆಗಳನ್ನು ಕೊಟ್ಟವರು. ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ್ದಾರೆ ಎಂದರು

ಇದನ್ನು ಓದಿದ್ದೀರಾ..? ಮುಖ್ಯ ಶಿಕ್ಷಕನ ವಿದ್ಯಾರ್ಥಿಗಳ ಜೊತೆ ಅಸಭ್ಯ ವರ್ತನೆ ರೊಚ್ಚಿಗೆದ್ದ ಪೋಷಕರು

ಈ ಸಂದರ್ಭದಲ್ಲಿ ಕಾಂಗ್ರೆಸ್ ವಿವಿಧ ಘಟಕಗಳ ಮುಖಂಡರಾದ ಕೆ.ಜಯದೇವ್, ಖಾದ್ರಿಪುರ ಬಾಬು, ಲಾಲ್ ಬಹಾದ್ದೂರ್ ಶಾಸ್ತ್ರಿ, ವೀರೇಂದ್ರ ಪಾಟೀಲ್, ಉಮಾಶಂಕರ್, ನವೀನ್, ಯಲವಾರ ರಾಜಕುಮಾರ್, ಗೋವಿಂದರಾಜು, ಮುನಿವೆಂಕಟಪ್ಪ ಮುಂತಾದವರು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...