ಕೇಂದ್ರದ ವಿರುದ್ಧ ಹಳ್ಳಿಗಳಲ್ಲಿ‌ ಆಂದೋಲನ ನಡೆಯಲಿ: ಎಐಸಿಸಿ ಕಾರ್ಯದರ್ಶಿ ಅಭಿಷೇಕ ದತ್ತ

Date:

ಕೋಲಾರ: ಗ್ರಾಮೀಣ ಪ್ರದೇಶದ ಜನರ ಏಳಿಗೆಗಾಗಿ ಕಾಂಗ್ರೆಸ್ ನೇತೃತ್ವದ ಯುಪಿಎ‌ ಸರ್ಕಾರ ಜಾರಿ ‌ಮಾಡಿದ್ದ ಮನರೇಗಾ‌ ಯೋಜನೆಯನ್ನು ಬಿಜೆಪಿ ನೇತೃತ್ವದ ಸರ್ಕಾರ‌ ನಾಶ ‌ಮಾಡುತ್ತಿದೆ ಎಂದು ಎಐಸಿಸಿ ಕಾರ್ಯದರ್ಶಿ‌ ಅಭಿಷೇಕ ದತ್ತ ವಾಗ್ದಾಳಿ‌ ನಡೆಸಿದರು.

ನಗರದ ಕಾಂಗ್ರೆಸ್ ‌ಭವನದಲ್ಲಿ‌ ಬುಧವಾರ ಜಿಲ್ಲಾ‌ ಕಿಸಾನ್ ಕಾಂಗ್ರೆಸ್ ಘಟಕ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದ ಅವರು ಮನರೇಗಾ‌ ಎಂಬ‌ ಹೆಸರು ಬದಲಾಯಿಸಿ ಜಿ ರಾಮ್ ಜಿ ತಂದಿದ್ದಾರೆ‌‌. ಯೋಜನೆಯ ಹಣ ಕಡಿಮೆ ಮಾಡಿದ್ದಾರೆ. ಬಡವರ ಹೊಟ್ಟೆ ‌ಮೇಲೆ ಹೊಡೆಯುತ್ತಿದ್ದಾರೆ. ಈ ಅಂಶಗಳನ್ನು ಜನರಿಗೆ ಮುಟ್ಟಿಸಬೇಕು. ಪ್ರತಿ ಹಳ್ಳಿಗೆ ಹೋಗಿ ಬಿಜೆಪಿಯ ಜನ ವಿರೋಧಿ ನೀತಿಗಳ ಬಗ್ಗೆ ಹೇಳಬೇಕು ಎಂದರು.

ಕಿಸಾನ್ ಕಾಂಗ್ರೆಸ್ ನಿಂದ ಹೋರಾಟ ಹಮ್ಮಿಕೊಳ್ಳಬೇಕು ಆಂದೋಲನ ರೂಪಿಸಬೇಕು‌ ಸಭೆ ನಡೆಸಿ ಏನೆಲ್ಲಾ ಸಮಸ್ಯೆ ಇದೆ ಎಂಬುದನ್ನು ಹೇಳಬೇಕು. ವಿಧಾನಸಭೆವಾರು, ತಾಲ್ಲೂಕುವಾರು ಸಭೆ ನಡೆಸಬೇಕು ಕಿಸಾನ್‌ ಕಾಂಗ್ರೆಸ್ ನಿಂದ ‌ಏನೇನು ಕಾರ್ಯಕ್ರಮ ಮಾಡಿದ್ದೀರಿ‌ ಎಂದು ‌ಪ್ರಶ್ನಿಸಿದರು. ಮುಂದೆ ಸಕ್ರಿಯವಾಗಿ ಕಾರ್ಯಕ್ರಮ ರೂಪಿಸಬೇಕು ಎಂದು‌ ನಿರ್ದೇಶನ‌ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆ ನಡುವೆ ಬಣಗಳ ವಾಗ್ವಾದಕ್ಕೆ ಸಂಬಂಧಿಸಿದಂತೆ‌ ಮಾತನಾಡಿ ಈ ಸಂಬಂಧ ಪರಿಶೀಲನೆ‌ ನಡೆಸಿ‌‌ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಜಗಳ ಜೋರಾಗುತ್ತಿದ್ದಂತೆ ಸಭೆ‌‌ ಮುಕ್ತಾಯಗೊಳಿಸಿದರು ಅವರ ಜೊತೆ ಕಿಸಾನ್ ಕಾಂಗ್ರೆಸ್ ಘಟಕದ ರಾಜ್ಯ ಅಧ್ಯಕ್ಷ ಸಚಿನ್ ಮಿಗಾ‌ ಪಾಲ್ಗೊಂಡಿದ್ದರು.

ಬಣಗಳ‌ ನಡುವೆ ವಾಗ್ವಾದ

ಜಿಲ್ಲಾ ಕಿಸಾನ್ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೀತಿಹೊಸೂರು ಮುರಳಿಗೌಡ ನೇಮಕ ಸಂಬಂಧ ಎರಡು ಬಣಗಳ ನಡುವೆ ವಾಗ್ವಾದ ‌ನಡೆಯಿತು.

ಶಾಸಕರ ಅಭಿವೃದ್ಧಿ ಕಾಮಗಾರಿ‌ ಉದ್ಘಾಟನೆ ಅಡ್ಡಿಪಡಿಸಿದವರನ್ನು ಕಿಸಾನ್ ಘಟಕದ‌ ಅಧ್ಯಕ್ಷರನ್ನಾಗಿ ಮಾಡಲಾಗಿದೆ ‌ಎಂದು ಶಾಸಕರ ಬೆಂಬಲಿಗರು‌ ಆಕ್ರೋಶ ವ್ಯಕ್ತಪಡಿಸಿದರು.

ನಾವೂ ಕಾಂಗ್ರೆಸ್ ಗೆ ದುಡಿದಿದ್ದೇವೆ. ತಪ್ಪು ಮಾಡಿದಾಗ ಪ್ರಶ್ನೆ ಮಾಡಬಾರದೇ? ಹೊರಗೆ ಹೋಗಿ‌ ಎಂದರೆ ಹೋಗುತ್ತೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪಕ್ಷಕ್ಕೆ 30 ವರ್ಷಗಳಿಂದ ದುಡಿದವರನ್ನು‌ ದೂರವಿಡಲಾಗುತ್ತಿದೆ ಎಂದು ಕೆ.ಎಚ್. ಮುನಿಯಪ್ಪ ಬೆಂಬಲಿಗರು‌ ವಾಗ್ದಾಳಿ‌ ನಡೆಸಿದರು.

ಇದನ್ನು ಓದಿದ್ದೀರಾ..? ಪುಷ್ಪ ಶೈಲಿಯಲ್ಲಿ ಶ್ರೀಗಂಧ ಮರಗಳನ್ನು ಕದ್ದಿದ್ದ 8 ಜನರು ಅರೆಸ್ಟ್

ಸಭೆಯಲ್ಲಿ ಕಿಸಾನ್ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸೀತಿಹೊಸೂರು ಮುರಳಿ, ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ, ಮುಖಂಡರಾದ ಖಾದ್ರಿಪುರ ಬಾಬು, ‌ಕಿಸಾನ್ ಕಾಂಗ್ರೆಸ್ ರಾಜ್ಯ ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಇದ್ದರು‌.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...