ಕೋಲಾರ: ಅನಾಮಧೇಯ ಇ-ಮೇಲ್ ಮೂಲಕ ಕೋಲಾರ ಹಾಗೂ ಬೀದರ್ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಹಿನ್ನಲೆಯಲ್ಲಿ ಕೋಲಾರ ಜಿಲ್ಲಾಡಳಿತ ಭವನದಲ್ಲಿ ಕೊಂಚ ಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.
ಕೋಲಾರ ಹೊರ ವಲಯದ ಟಮಕದಲ್ಲಿರುವ ಕೋಲಾರ ಜಿಲ್ಲಾಧಿಕಾರಿ ಕಚೇರಿಯನ್ನು ಕೋಲಾರ ಗ್ರಾಮಾಂತರ ಠಾಣಾ ಪೊಲೀಸರಿಂದ ಪರಿಶೀಲನೆ ನಡೆಸಲಾಯಿತು. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಪತ್ತೆ ಕಾರ್ಯದಲ್ಲಿ ಜಿಲ್ಲಾಡಳಿತ ಕಚೇರಿ ಸಿಬ್ಬಂದಿ ಗಳನ್ನು ಹೊರ ಕಳುಹಿಸಿ ಬಾಂಬ್ ಪತ್ತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂಚಿಂಚು ಪರಿಶೀಲನೆ ನಡೆಸಿ, ಇಲಾಖಾವಾರು ಕೊಠಡಿಗಳಲ್ಲಿ ಪರಿಶೀಲನೆ ನಡೆಸುತ್ತಿರುವ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ.
ಸ್ಥಳದಲ್ಲಿ ಹೆಚ್ಚಿನ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಹಾಜರಿದ್ದರು.
ಬೆಳಗ್ಗೆ ೬ ಗಂಟೆಗೆ ಬಂದಿರುವ ಬೆದರಿಕೆ ಮೇಲ್. ೨ ಗಂಟೆಗೆ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಎಚ್ಚರಿಕೆ.
ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಗೆ ಬಾಂಬ್ ಬೆದರಿಕೆ ಹಿನ್ನಲೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ಜಿಲ್ಲಾಧಿಕಾರಿ ಕಚೇರಿಯಿಂದ ಹೊರ ಬಂದು ಆವರಣದಲ್ಲಿ ಸಭೆ ನಡೆಸಿದರು.
ಇದನ್ನು ಓದಿದ್ದೀರಾ..? ರಾಷ್ಟ್ರೀಯ ಪಲ್ಸ್ ಪೋಲಿಯೊ ಪೂರ್ವಭಾವಿ ಸಭೆ
ಡಿಸಿ ಕಚೇರಿಯಲ್ಲಿದ್ದ ಸಿಬ್ಬಂದಿ ಹೊರ ಕಳುಹಿಸಿದ್ದ ಪೊಲೀಸರು ಈಗಾಗಲೇ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ,ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಪರಿಶೀಲನೆ.
ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ.
ಪೋಸ್ಟ್ ಹಂಚಿಕೊಳ್ಳಿ:




