ಖಜಾನೆ ಖಾಲಿ ಎನ್ನುವ ಆರೋಪಕ್ಕೆ ಒಂದು ಲಕ್ಷ ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರ: ಸಿ.ಎಂ ಸಿದ್ದರಾಮಯ್ಯ

Date:

ಚಿಕ್ಕಬಳ್ಳಾಪುರ (ಶಿಡ್ಲಘಟ್ಟ): ಖಜಾನೆ ಖಾಲಿ ಎನ್ನುವ ಕೆಲವರ ಅಭಿಪ್ರಾಯಕ್ಕೆ ಒಂದು ಲಕ್ಷ ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಜಿಲ್ಲೆಯ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೆಚ್.ಎನ್.ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉದ್ಘಾಟನೆಯಾದ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯಿಂದಾಗಿ ಇಡೀ ರಾಜ್ಯದ ರೇಷ್ಮೆ ಬೆಳೆಗಾರರಿಗೆ ಅನುಕೂಲ‌ ಆಗಲಿದೆ ಶಿಡ್ಲಘಟ್ಟ ಕ್ಷೇತ್ರದಲ್ಲಿ ಇಷ್ಟು ದೊಡ್ಡ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸುತ್ತಿರುವುದು ನಮ್ಮ ಸರ್ಕಾರದ ಅಭಿವೃದ್ಧಿ ಪರ್ವದ ವೇಗವನ್ನು ತೋರಿಸುತ್ತದೆ. ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ. ಗ್ಯಾರಂಟಿ ಕಾರ್ಯಕ್ರಮಗಳಿಗೆ ಒಂದು ಲಕ್ಷ ಕೋಟಿಗೂ ಅಧಿಕ ಮೊತ್ತದ ಹಣ ಇದುವರೆಗೂ ವೆಚ್ಚ ಮಾಡಿರುವುದು ಮಾತ್ರವಲ್ಲದೆ ಇಷ್ಟೇ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನೂ ನಾವು ನಡೆಸುತ್ತಿದ್ದೇವೆ. ಇದಕ್ಕೆ ಇಂದು ಇಲ್ಲಿ ಉದ್ಘಾಟನೆಗೊಂಡ ಅಭಿವೃದ್ಧಿಯೂ ಸೇರಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರದ ಬಳಿ ಹಣ ಇಲ್ಲ, ಖಜಾನೆ ಖಾಲಿ ಆಗಿದೆ ಎನ್ನುವ ಆರೋಪಗಳಿಗೆ ನಮ್ಮ‌ ಸರ್ಕಾರ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರ ಕೊಟ್ಟಿದೆ. ರಾಜ್ಯದ ಪ್ರತೀ ಕುಟುಂಬಗಳಿಗೂ ಪ್ರತೀ ತಿಂಗಳು ಸರ್ಕಾರದ ಹಣ ಮತ್ತು ಕಾರ್ಯಕ್ರಮಗಳು ತಲುಪುತ್ತಿವೆ ಎಂದರು.ನಮ್ಮ ಸರ್ಕಾರ ಅಧಿಕಾರದಲ್ಲಿ ಇರುವವರೆಗೂ ಯಾವ ಗ್ಯಾರಂಟಿ ಯೋಜನೆಗಳೂ ನಿಲ್ಲುವುದಿಲ್ಲ. ಜೊತೆಗೆ ಸಣ್ಣ ನೀರಾವರಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ಅಭಿವೃದ್ಧಿ ನಡೆಸುತ್ತಿದ್ದೇವೆ ಎನ್ನುವುದನ್ನು ಅಂಕಿ ಅಂಶಗಳ ಸಮೇತ ನಿದರ್ಶಿಸುತ್ತಿವೆ ಎಂದು ವಿವರಿಸಿದರು.

ಶಿಡ್ಲಘಟ್ಟಕ್ಕೆ ಮಿನಿ ವಿಧಾನಸೌಧ ಬೇಕು ಎನ್ನುವುದೂ ಸೇರಿದಂತೆ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ.ಸುಧಾಕರ್ ಮತ್ತು ಕ್ಷೇತ್ರದ ಶಾಸಕರು ಬೇಡಿಕೆ ಇಟ್ಟಿದ್ದಾರೆ. ಸಚಿವರ ಮನವಿಯಂತೆ ಎಲ್ಲಾ ಕಾಮಗಾರಿಗಳಿಗೂ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.

ಸಮಾಜದ ಪ್ರತಿಯೊಬ್ಬರಿಗೂ ಆರ್ಥಿಕ ಶಕ್ತಿ ಬರಬೇಕು, ಜಾತಿ ವ್ಯವಸ್ಥೆ ಮತ್ತು ವರ್ಗ ವ್ಯವಸ್ಥೆ ಹೋಗಬೇಕು ಆಗ ಮಾತ್ರ ದೇಶಕ್ಕೆ ಬಂದಿರುವ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ, ಹೀಗಾಗಿ ನಮ್ಮ ಸರ್ಕಾರ ಎಲ್ಲಾ ವರ್ಗದ ಬಡವರಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದೆ. ನಮ್ಮದು ಸರ್ವ ಧರ್ಮ ಮತ್ತು ಸರ್ವ ಜಾತಿಯವರನ್ನು ಒಳಗೊಳ್ಳುವ ಸರ್ಕಾರ ಎಂದರು.

ಈಗ ನಾವು ರಾಜ್ಯದ ಜನರ ಮನೆ ಬಾಗಿಲಿಗೆ ಅಭಿವೃದ್ಧಿ ಕಾರ್ಯಕ್ರಮಗಳನ್ನು, ಕಲ್ಯಾಣ ಕಾರ್ಯಕ್ರಮಗಳನ್ನು ತಲುಪಿಸುತ್ತಿದ್ದೇವೆ. ಇದನ್ನು ಸಹಿಸದವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಶಿಡ್ಲಘಟ್ಟದ ನೇಕಾರ ಸಮುದಾಯಕ್ಕೂ ಅನುಕೂಲ ಮಾಡಿಕೊಡಲಾಗುವುದು. ನಾವು ನುಡಿದಂತೆ ನಡೆಯುತ್ತಿದ್ದೇವೆ. ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂದರು.

ಇದನ್ನು ಓದಿದ್ದೀರಾ..? ನ. 26 ರಂದು ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಮಾಲೂರಿನಲ್ಲಿ ಸಂವಿಧಾನ ರಥಸಂಚಲನ

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಸಚಿವರಾದ ಕೆ.ಹೆಚ್.ಮುನಿಯಪ್ಪ.ದಿನೇಶ್ ಗುಂಡೂರಾವ್, ಹೆಚ್.ಸಿ.ಮಹದೇವಪ್ಪ,ಕೃಷ್ಣಬೈರೇಗೌಡ, ಬೈರತಿಸುರೇಶ್,ಜಮೀರ್ ಅಹಮದ್, ವೆಂಕಟೇಶ್, ರಹೀಂ ಖಾನ್, ಲಕ್ಷ್ಮೀ ಆರ್.ಹೆಬ್ಬಾಳ್ಕರ್, ಎನ್.ಎಸ್.ಭೋಸರಾಜು,ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸಂಸದ ಎಂ.ಮಲ್ಲೇಶ್ ಬಾಬು, ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಪ್ರದೀಪ್ ಈಶ್ವರ್ , ಕೆ.ಹೆಚ್. ಪುಟ್ಟಸ್ವಾಮಿಗೌಡ, ವಿಧಾನ ಪರಿಷತ್ತು ಸದಸ್ಯರಾದ ಚಿದಾನಂದ ಎಂ. ಗೌಡ, ಎಂ.ಎಲ್.ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ, ಡಾ. ಹೆಚ್.ನರಸಿಂಹಯ್ಯ ವಿಜ್ಞಾನ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಹೆಚ್ ಶಿವಶಂಕರರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತದ ಅಧ್ಯಕ್ಷ ಡಾ. ಬಿ.ಸಿ. ಮುದ್ದುಗಂಗಾಧರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಹಳ್ಳಿ ಎನ್. ರಮೇಶ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಗಮದ ಅಧ್ಯಕ್ಷ ಬಿ.ಜಿ. ಗಣೇಶ್, ಹಂಡಿಗನಾಳ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ವೆಂಕಟಲಕ್ಷ್ಮಮ್ಮ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್.ಮಂಜುಳ ಹಾಗೂ ಎಲ್ಲಾ ಇಲಾಖೆಗಳ ಸರ್ಕಾರದ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈ.ನವೀನ್ ಭಟ್, ಪೋಲಿಸ್ ವರಿಷ್ಟಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು. ಸಾರ್ವಜನಿಕರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...