ಗ್ಯಾರಂಟಿ ಯೋಜನೆ, ಆರ್ಹ ಫಲಾನುಭವಿಗಳಿಗೆ ತಲುಪಿಸಿ : ಅಧ್ಯಕ್ಷ ವಿ.ಎಂ ಮುನಿಯಪ್ಪ ಸೂಚನೆ

Date:

ಕೋಲಾರ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಪಂಚ ಗ್ಯಾರಂಟಿಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಯಾವುದೇ ಕಾರಣದಿಂದ ಫಲಾನುಭವಿಗಳು ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ಸೂಚಿಸಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರ್ಕಾರ ಬಂದು ಎರಡು ವರ್ಷಗಳಾಗಿದೆ ಅಂದಿನಿಂದಲೂ ಯೋಜನೆಗಳು ಜಾರಿಯಾಗಿದೆ ಇನ್ನೂ ಗುರಿ ಸಾಧಿಸಲು ಸಾಧ್ಯವಾಗಿಲ್ಲ ಎಂದರೆ ಅಧಿಕಾರಿಗಳು ಸೇರಿದಂತೆ ಸಮಿತಿ ಅಧ್ಯಕ್ಷರು ಸದಸ್ಯರಿಗೆ ಅವಮಾನವಾದಂತೆ ಕೂಡಲೇ ಫಲಾನುಭವಿಗಳಿಗೆ ಉಳಿದ ಅವಧಿಯಲ್ಲಿ ತಲುಪುವಂತೆ ಮಾಡಬೇಕು ಎಂದರು

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರ ಜೀವನಮಟ್ಟವನ್ನು ಸುಧಾರಿಸುತ್ತಿವೆ. ಬೇರೆ ರಾಜ್ಯಗಳಲ್ಲಿ ಪ್ರಶಂಸೆಗೆ ಪಾತ್ರವಾಗಿವೆ ಇದೇ ಮಾದರಿಯಲ್ಲಿ ಸಹ ಬೇರೆ ರಾಜ್ಯಗಳಲ್ಲಿ ಜಾರಿ ಮಾಡಲು ಮುಂದಾಗಿದೆ ಯುವನಿಧಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾಲೇಜು, ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ಮಾಹಿತಿ ನೀಡಲು ಶಿಬಿರಗಳನ್ನು ಆಯೋಜಿಸಬೇಕು ಪ್ರತಿಯೊಂದು ಪಡಿತರ ವಿತರಣಾ ಕೇಂದ್ರದಲ್ಲಿ ಕಡ್ಡಾಯವಾಗಿ ಸೂಚನಾ ಫಲಕ ಪ್ರದರ್ಶನ ಮಾಡಬೇಕು ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಸದಸ್ಯರು ಮಾತನಾಡಿ ಪಡಿತರ ಅಂಗಡಿಗಳು ಹಣ ಪಡೆಯುವುದು ಕಡಿಮೆ ಅಕ್ಕಿ ರಾಗಿ ವಿತರಣೆ ಸೇರಿದಂತೆ ಯೋಜನೆಗಳ ಬಗ್ಗೆ ಫಲಾನುಭವಿಗಳಿಗೆ ಅಗೌರವ ತರುವ ನಿಟ್ಟಿನಲ್ಲಿ ದೂರುಗಳು ಬಂದಿವೆ ಕೂಡಲೇ ಅಂತಹವರ ವಿರುದ್ದ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸೂಚನೆ ನೀಡಿದರು.

ಕೋಲಾರ ತಾಲೂಕಿನಲ್ಲಿ ಯೋಜನೆ ಪ್ರಾರಂಭದಿಂದ ಯುವನಿಧಿಯಲ್ಲಿ ಸುಮಾರು 1227 ಫಲಾನುಭವಿ ಗಳಿಗೆ 5.16 ಕೋಟಿ ಹಣ ಬಿಡುಗಡೆ ಮಾಡಲಾಗಿದೆ, ಗೃಹಲಕ್ಷ್ಮೀ ಯೋಜನೆಯಲ್ಲಿ 80234 ಫಲಾನುಭವಿಗಳಿಗೆ 340 ಕೋಟಿ, ಗೃಹ ಜ್ಯೋತಿಯಲ್ಲಿ 1.9 ಲಕ್ಷ ಫಲಾನುಭವಿಗಳಿಗೆ 83 ಕೋಟಿ ಶಕ್ತಿ ಯೋಜನೆಯಲ್ಲಿ ತಿಂಗಳಿಗೆ 13 ಲಕ್ಷ ಪ್ರಯಾಣಿಕರು ಸೌಲಭ್ಯ ಬಳಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ..? ೧.೫೦ ಲಕ್ಷ ಬಹುಮಾನ ಗೆದ್ದು ಬೀಗಿದ ತಮಿಳುನಾಡು, ಲಕ್ನೋ, ಪುಣೆ ತಂಡಗಳು

ಸಭೆಯಲ್ಲಿ ತಾಪಂ ಇಒ ಮಂಜುನಾಥ್ ಸಹಾಯಕ ನಿರ್ದೇಶಕ ಮಂಜುನಾಥ್ ಪ್ರಸಾದ್, ಸಮಿತಿ ಸದಸ್ಯರಾದ ನದಂಬಳ್ಳಿ ವಿಜಯಕುಮಾರ್, ನವೀನ್, ಭರತ್, ವಿನೋದ್, ಅಯೂಬ್ ಖಾನ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...