ಚಿಕ್ಕಹಸಾಳ-ದೊಡ್ಡಹಸಾಳಕ್ಕೆ 60 ಲಕ್ಷ ರೂ. ಕಾಮಗಾರಿ: ಶಾಸಕ ಕೊತ್ತೂರು ಮಂಜುನಾಥ್

Date:

ಕೋಲಾರ: ಚಿಕ್ಕಹಸಾಳ ಮತ್ತು ದೊಡ್ಡಹಸಾಳ ಗ್ರಾಮದಲ್ಲಿ ಶೀಘ್ರವೇ 60 ಲಕ್ಷ ರೂ.ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಮ ಕೈಗೊಳ್ಳಲಾಗುತ್ತದೆಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.

ತಾಲೂಕಿನ ದೊಡ್ಡಹಸಾಳ ಗ್ರಾಮ ಪಂಚಾಯಿತಿಯಿಂದ ನರೇಗಾದಲ್ಲಿ ಚಿಕ್ಕಹಸಾಳ ಗ್ರಾಮದಲ್ಲಿ ನಿರ್ಮಿಸಿರುವ ಸ್ವಚ್ಛ ಸಂಕೀರ್ಣ ಘಟಕ ಉದ್ಘಾಟನೆ, ಅಂಗನವಾಡಿ ಕೇಂದ್ರ ಉದ್ಘಾಟನೆ ಮತ್ತು ಶಾಲಾ ಕಟ್ಟಡ ಉದ್ಘಾಟಿಸಿ ಮಾತನಾಡಿ, ಕಳೆದ ಎರಡೂವರೆ ವರ್ಷದಲ್ಲಿ ಕೋಲಾರ ಕ್ಷೇತ್ರದಲ್ಲಿ 1041 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು ಅನುಮಾನ ಇರುವವರು ದಾಖಲೆಗಳನ್ನು ಪರಿಶೀಲಿಸಬಹುದೆಂದು ಶಾಸಕರು ಸವಾಲು ಹಾಕಿದರಲ್ಲದೆ ಸರ್ಕಾರದಿಂದ ಅನುದಾನ ಬರುತ್ತಿಲ್ಲವೆಂದು ಅಪಪ್ರಚಾರ ಮಾಡುವುದು ಸರಿಯಲ್ಲ ಎಂದರು.

ಎಂಎಲ್‌ಸಿ ಅನಿಲ್ ಕುಮಾರ್ ಮಾತನಾಡಿ, 19 ಕೋಟಿ ರೂ.ವೆಚ್ಚದಲ್ಲಿ ಮೂರಾಂಡಹಳ್ಳಿ ಕ್ರಾಸ್‌ನಿಂದ ಡಿಂಬ ಗೇಟ್‌ವರೆಗೆ ಚತುಷ್ಪಥ ರಸ್ತೆ ಮಾಡಲಾಗುತ್ತಿದ್ದು ಈ ಸಂಬಂಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಚಿಕ್ಕಹಸಾಳದಿಂದ ಗಾಜಲದಿನ್ನೆ ಹಾಗೂ ಛತ್ರಕೋಡಳ್ಳಿ ಯಿಂದ ಚಿಕ್ಕಹಸಾಳವರೆಗೆ 3 ಕೋಟಿ ರೂ.ವೆಚ್ಚದಲ್ಲಿ ರಸ್ತೆ ನಿರ್ಮಾಣ ಮಾಡಲಾಗುತ್ತಿದ್ದು ಶೀಘ್ರವೇ ವರ್ಕ್ ಆರ್ಡರ್ ನೀಡಲಾಗುತ್ತದೆಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಳಪತಿ ಸಿಎಂಆರ್ ಶ್ರೀನಾಥ್ ಮಾತನಾಡಿ, ದೊಡ್ಡಹಸಾಳ ಪಂಚಾಯತಿಗೆ ಎರಡು ಬಾರಿ ಗಾಂಧಿಗ್ರಾಮ ಪುರಸ್ಕಾರ ಸಿಕ್ಕಿರುವುದು ಅಭಿವೃದ್ಧಿ ಪರ ಚಿಂತನೆಗೆ ಸಾಕ್ಷಿಯಾಗಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಮೂಲಕ ದೇಶದ ಆರ್ಥಿಕ ಅಭಿವೃದ್ಧಿಗೆ ಕೈ ಜೋಡಿಸಬೇಕೆಂದು ನುಡಿದರು.

ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್ ಮಾತನಾಡಿ, ನರೇಗಾ ಯೋಜನೆಯನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಅಭಿವೃದ್ಧಿ ಸಾಧಿಸಿರುವ ದೊಡ್ಡಹಸಾಳ ಗ್ರಾಮಪಂಚಾಯತಿ ಆಡಳಿತ ಮಂಡಳಿ ಅಭಿನಂದನಾರ್ಹ ಎಂದು ಶ್ಲಾಘಿಸಿದರು.

ಇದನ್ನು ಓದಿದ್ದೀರಾ..? ರಸ್ತೆಗೆ ಚರಂಡಿಯ ಕೊಳಚೆ ನೀರು ವಿಜಯನಗರ ಬಡಾವಣೆಯ ಸ್ಥಳೀಯರ ಆಕ್ರೋಶ

ಎಂಎಲ್‌ಸಿ ಇಂಚರಗೋವಿಂದರಾಜು, ಪಂಚಾಯತಿ ಅಧ್ಯಕ್ಷೆ ಆಂಜಿನಮ್ಮ, ಉಪಾಧ್ಯಕ್ಷ ಚಲಪತಿ, ಪಿಡಿಓ ಮೋಹನ್ ಕುಮಾರ್, ಬೆಳಮಾರನಹಳ್ಳಿಆನಂದ್ ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...