ಜನಸ್ಪಂದನ ಸಭೆಯಲ್ಲಿ ಸಮಸ್ಯೆಗಳ ಅನಾವರಣ

Date:

ಬಾಗೇಪಲ್ಲಿ:ತಾಲ್ಲೂಕು ಕಂದಾಯ ಇಲಾಖೆ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಯಲ್ಲಂಪಲ್ಲಿ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕಿನ ಆಚೇಪಲ್ಲಿ ಗ್ರಾಮದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಜನಸ್ಪಂದನಾ ಕಾರ್ಯಕ್ರಮ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನೇತೃತ್ವದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ 4,000 ಕ್ಕೂ ಹೆಚ್ಚು ಫಲಾನುಭವಿಗಳಿಗೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರು ಸರ್ಕಾರದ ಯೋಜನೆಗಳನ್ನು ವಿತರಿಸಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬ್ಯಾಗು, ಪುಸ್ತಕ, ಪೆನ್ ಲೇಖನಿ ಸಾಮಗ್ರಿಗಳು, ಟಾರ್ಪಲ್ ವಿತರಿಸಲಾಯಿತು. ಕೈಗಾರಿಕಾ ಇಲಾಖೆಯಿಂದ ಸವಿತಾ ಸಮಾಜದವರಿಗೆ ವೃತ್ತಿ ಸುಧಾರಿತ ಯಂತ್ರೋಪಕರಣಗಳು, ತೋಟಗಾರಿಕೆ ಇಲಾಖೆಯಿಂದ ಸೋಲಾರ್ ಪಂಪ್‍ಸೆಟ್, ಈರುಳ್ಳಿ ಶೇಖರಣೆ ಘಟಕ, ಕೃಷಿಹೊಂಡ, ಬ್ಲೋವರ್, ಮಾವು ಪುನಃಶ್ಚೇತನ, ಮಾವು ಹೊಸ ಪ್ರದೇಶ ವಿಸ್ತರಣೆ, ಪಾಲಿಹೌಸ್, ಪಶು ಇಲಾಖೆಯಿಂದ ಔಷಧಗಳಿಗೆ ಆದೇಶ ಪತ್ರ ಹಾಗೂ ಆರೋಗ್ಯ ಇಲಾಖೆಯಿಂದ ಜಂತುನಾಶಕ ಔಷಧಗಳು ಮತ್ತು 100 ಮಂದಿಗೆ ಸ್ಟೆಕ್ಟರ್ ಆರೋಗ್ಯ ಚೀಟಿಗಳನ್ನು ನೀಡಲಾಯಿತು.

ಸರ್ವೆ ಇಲಾಖೆಯಿಂದ 250 ಮಂದಿಗೆ ಪೋಡಿ ಮುಕ್ತ ಪ್ರಕರಣಗಳು, 1600 ಮಂದಿಗೆ ಪಿಂಚಿಣಿ, ಸಾಗುವಳಿ ಚೀಟಿಯ ಖಾತೆ, ದುರಸ್ತಿ ಪೋಡಿ, ಹಕ್ಕುಪತ್ರಗಳು, ಗೂಳೂರು, ಶಂಖಂವಾರಿಪಲ್ಲಿ, ಲಗುಮದ್ದೇಪಲ್ಲಿ, ಬಿಳ್ಳೂರು ಗ್ರಾಮಗಳಲ್ಲಿ ಸ್ಮಶಾನಕ್ಕೆ ಭೂಮಿ ಮಂಜೂರಾತಿ, ಕುಂಬಾರ ಸಮುದಾಯದ ಭವನಕ್ಕೆ ಜಮೀನು ಮಂಜೂರಾತಿ, ನೀರಗಂಟಿಪಲ್ಲಿ, ಕಾನಗಮಾಕಲಪಲ್ಲಿ, ನಾರಾಯಣಸ್ವಾಮಿ ಕೋಟೆ, ಸಜ್ಜುಪಲ್ಲಿ, ಯಲ್ಲಂಪಲ್ಲಿ ನಲ್ಲಪರೆಡ್ಡಿಪಲ್ಲಿ, ಪರಗೋಡು ಆಶ್ರಯ ಭೂಮಿ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ಪಂಚಾಯಿತಿವಾರು ಜನಸ್ಪಂದನಾ ಕಾರ್ಯಕ್ರಮಗಳಲ್ಲಿ ಸರ್ಕಾರಗಳ ಯೋಜನೆಗಳನ್ನು ನೇರವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸಲಾಗಿದೆ. ಸರ್ಕಾರದ ಯಾವುದೇ ಯೋಜನೆಗಳ ಫಲಾನುಭವಿಯಾಗಲು ಮಧ್ಯವರ್ತಿಗಳ ಮೊರೆ ಹೋಗಬಾರದು ಎಂದು ಸಲಹೆ ನೀಡಿದರು.

ತಹಶೀಲ್ದಾರ್ ಮನೀಷಾ ಎಸ್. ಪತ್ರಿ,ಮಾತನಾಡಿ ತಾಲೂಕು ಕೇಂದ್ರ ಸ್ಥಾನದಲ್ಲಿ ಜನಸ್ಪಂದನ ಕಾರ್ಯಕ್ರಮಕ್ಕೆ ಬರಲು ಗ್ರಾಮೀಣರಿಗೆ ಆಗುವ ತೊಂದರೆಗಳನ್ನು ಮನಗಂಡು ಹೋಬಳಿ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಮಾಡಲಾಗುತ್ತಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು. ನಾಗರಿಕರ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಆಲಿಸಿ, ತಕ್ಷಣವೇ ಪರಿಹಾರ ನೀಡಲು ಜನ ಸ್ಪಂದನೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಕಾಂಗ್ರೆಸ್‌ ಕಛೇರಿಯಲ್ಲಿ ಇಂದಿರಾಗಾಂಧಿ ಜಯಂತಿ ಆಚರಣೆ

ಕಾರ್ಯಕ್ರಮದಲ್ಲಿ ಇಒ ಜಿ.ವಿ.ರಮೇಶ್, ಸರ್ಕಲ್ ಇನ್‌ಸ್ಪೆಕ್ಟರ್ ಪ್ರಶಾಂತ್ ವರ್ಣಿ, ಎನ್.ವೆಂಕಟೇಶಪ್ಪ, ಡಾ.ಟಿ.ಎನ್.ಸತ್ಯನಾರಾಯಣರೆಡ್ಡಿ, ಸರಸ್ವತಮ್ಮ, ಪಿಡಿಒ ನಾರಾಯಣಸ್ವಾಮಿ, ಮಂಜುನಾಥರೆಡ್ಡಿ, ಲಕ್ಷ್ಮಿನರಸಿಂಹಪ್ಪ ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...