ಜಾತಿ ವ್ಯವಸ್ಥೆಯ ವಿರುದ್ದ ಕನಕದಾಸರು ಕೆಲಸ ಮಾಡಿದ್ದಾರೆ: ಕೆ.ವಿ ಪ್ರಭಾಕರ್

Date:

ಕೋಲಾರ: ಕನಕದಾಸರು ಜಾತಿ ವ್ಯವಸ್ಥೆ ಹಾಗೂ ಮೌಢ್ಯದ ವಿರುದ್ಧ ಧ್ವನಿಯಾಗಿದ್ದುಕೊಂಡು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿರುವ ಅಂಕು ಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ತಿಳಿಸಿದರು

ನಗರದ ಕೆ.ಎಸ್.ಆರ್.ಟಿ.ಸಿ ಘಟಕದಲ್ಲಿ ಶನಿವಾರ ನಡೆದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕುರುಬ ಜನಾಂಗಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ ಅ ಸಮಾಜದ ಕನಕದಾಸರು ಮಹಾನ್ ದಾರ್ಶನಿಕರಾಗಿದ್ದು ಜನರ ಉತ್ತಮ ಜೀವನಕ್ಕೆ ಪೂರಕವಾದ ಸಂದೇಶಗಳನ್ನು ತಮ್ಮ ಕೀರ್ತನೆಗಳ ಮೂಲಕ ನೀಡಿದ್ದರು. ಕನಕದಾಸರ ಕೀರ್ತನೆಗಳನ್ನು ಓದುವ ಕಾರ್ಯವನ್ನು ಪ್ರತಿಯೊಬ್ಬರು ಮಾಡಬೇಕು ಎಂದು ಸಲಹೆ ನೀಡಿದರು.

ರಾಜ್ಯದಲ್ಲಿ ಅಹಿಂದ ನಾಯಕ ಸಿದ್ದರಾಮಯ್ಯ ಅವರು 16 ಬಜೆಟ್ ಮಂಡನೆ ಮಾಡಿದ್ದಾರೆ ಶೋಷಿತ ಜನರ ಧ್ವನಿಯಾಗಿದ್ದು ಬಡವರಿಗೆ ಅನುಕೂಲವಾಗುವಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಕುರುಬ ಸಮಾಜವು ಎಲ್ಲರನ್ನೂ ಜೊತೆಯಲ್ಲಿ ಸೇರಿಕೊಂಡು ಕನಕದಾಸರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಹೋಗಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಜೀವನದಲ್ಲಿ ಕನಕದಾಸರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಉತ್ತಮ ಸಮಾಜವನ್ನು ನಿರ್ಮಾಣ ಮಾಡಬೇಕಾಗಿದೆ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಜಾತಿ ವ್ಯವಸ್ಥೆ, ಅಸ್ಪೃಶ್ಯತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದರು. ಕನಕದಾಸರ ರೀತಿಯಲ್ಲಿಯೇ ಸಾಕಷ್ಟು ನಾಯಕರು, ಚಿಂತಕರು ದೇಶದಲ್ಲಿನ ಜಾತಿ ವ್ಯವಸ್ಥೆಯನ್ನು ಬುಡಸಮೇತಕಿತ್ತೊಗೆಯಬೇಕು ಎನ್ನುವ ಸಾಕಷ್ಟು ಪ್ರಯತ್ನಿಸಿದಾದರು ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ..? ಕನಕದಾಸರು ಯಾವುದೇ ಜಾತಿಗೆ ಸೀಮಿತವಲ್ಲ: ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ಎಂಎಲ್ಸಿಗಳಾದ ಇಂಚರ ಗೋವಿಂದರಾಜು, ಎಂ.ಎಲ್ ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಕುರಿಗಳ ರಮೇಶ್, ಎಸ್ಪಿ ಬಿ.ನಿಖಿಲ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಮುಲ್ ನಿರ್ದೇಶಕ ಷಂಷೀರ್, ಬ್ಲಾಕ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಸಾರಿಗೆ ಇಲಾಖೆಯ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಾಥ್ ಸೇರಿದಂತೆ ಅಧಿಕಾರಿಗಳು ಸಿಬ್ಬಂದಿ ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...