ಕೋಲಾರ: ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೋಲಾರ ನಗರದ ಎನ್ ಅಂಬರೀಷ್ ಅವರನ್ನು ರಾಜ್ಯ ಘಟಕದ ಅಧ್ಯಕ್ಷ ಎಂ.ವಿಜಯ ನಾಯಕ್ ಸೋಮವಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಮೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ಕೊತ್ತೂರು ಮಂಜುನಾಥ್,.ಕೆ.ವೈ.ನಂಜೇಗೌಡ ಮತ್ತು ಎಂಎಲ್ಸಿ ಎಂ.ಎಲ್. ಅನಿಲ್ ಕುಮಾರ್ ರವರುಗಳ ಶಿಫಾರಸ್ಸಿನ ಮೇರೆಗೆ ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿದ್ದು ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶಿಸಲಾಗಿದೆ.
ಇದನ್ನು ಓದಿದ್ದೀರಾ..? ಆಹಾರಕ್ಕೆ ಬೆರೆಸಲು ವಿಷಕಾರಿ ದತ್ತೂರ ಬೀಜದ ಪುಡಿ ನೀಡಿದ್ದ ಮಾಂತ್ರಿಕ ಅರೆಸ್ಟ್
ಕೋಲಾರ ಜಿಲ್ಲೆಯ ಎಸ್ಟಿ ಘಟಕದ ಅಧ್ಯಕ್ಷರಾಗಿ ತಮಗೆ ವಹಿಸಿರುವ ಹೊಣೆಗಾರಿಕೆಯನ್ನು ನಿಷ್ಠೆಯಿಂದ ನಿರ್ವಹಿಸಿ ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸ್ಥಳೀಯ ನಾಯಕರುಗಳ ಸಹಕಾರದೊಂದಿಗೆ ನೀಡಲಾಗಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಪಕ್ಷದ ಸಂಘಟನೆಗೆ ಶ್ರಮಿಸುವಂತೆ ಸೂಚಿಸಲಾಗಿದೆ ನೇಮಕಾತಿ ಆದೇಶದ ಪ್ರತಿ ನೀಡುವ ಸಂದರ್ಭದಲ್ಲಿ ಮುಖಂಡರಾದ ಕುಡುವನಳ್ಳಿ ಆನಂದ್, ಬೈರಂಡಳ್ಳಿ ನಾಗೇಶ್, ವಾಸು ಚಾಮರಹಳ್ಳಿ ಮಂಜುನಾಥ್ ಉಪಸ್ಥಿತರಿದ್ದರು,





