ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಖಾಜಿಕಲ್ಲಹಳ್ಳಿ ಮುನಿರಾಜು ಆಯ್ಕೆ

Date:

ಕೋಲಾರ: ಕೋಲಾರ ಹಾಗೂ ಚಿಕ್ಕಬಳ್ಳಾಪುರ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಖಾಜಿಕಲ್ಲಹಳ್ಳಿ ಮುನಿರಾಜು ಆಯ್ಕೆಯಾದರು.

ಮುನಿರಾಜು ಕೋಲಾರ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಕ್ಷೇತ್ರದ ನಿರ್ದೇಶನ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಬ್ಯಾಂಕ್‌ನ 12 ನಿರ್ದೇಶಕರ ಸ್ಥಾನಕ್ಕೆ (ಒಟ್ಟು 18 ನಿರ್ದೇಶಕರ ಪೈಕಿ 6 ಮಂದಿ ಅವಿರೋಧ ಆಯ್ಕೆ) ಮೇ 28ರಂದು ಚುನಾವಣೆ ನಡೆದಿತ್ತು. ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 12 ಮತಗಳು ಇದ್ದವು. ಅದರಲ್ಲಿ ಆಗ ಮುನಿರಾಜು 5 ಮತ ಹಾಗೂ ಮೈತ್ರಿಕೂಟದ ಆನಂದ್‌ 6 ಮತ ಪಡೆದಿದ್ದರು. ಕ್ಯಾಲನೂರು ಸೊಸೈಟಿಗೆ ಸಂಬಂಧಿಸಿದ ಒಂದು ಮತದ ಹಕ್ಕಿನ ವಿಚಾರದಲ್ಲಿ ನ್ಯಾಯಾಲಯ ಮೊರೆ ಹೋಗಲಾಗಿತ್ತು.

ಕ್ಯಾಲನೂರು ಸೊಸೈಟಿ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯು ಇತ್ಯರ್ಥಗೊಂಡಿದ್ದು, ಎಣಿಕೆ ನಡೆಸಲು ನ್ಯಾಯಾಲಯ ಆದೇಶಿಸಿತ್ತು. ಡಿಸಿಸಿ ಬ್ಯಾಂಕ್‌ ಚುನಾವಣಾಧಿಕಾರಿಯೂ ಆಗಿರುವ ಉಪವಿಭಾಗಾಧಿಕಾರಿ ಡಾ.ಎಚ್‌.ಪಿ.ಎಸ್‌.ಮೈತ್ರಿ ಅವರು ಉಭಯ ಅಭ್ಯರ್ಥಿಗಳ ಸಮ್ಮುಖದಲ್ಲಿ ಬುಧವಾರ ಮತ ಪೆಟ್ಟಿಗೆ ತೆಗೆದು ಎಣಿಕೆ ನಡೆಸಿದರು.
ಆ ಮತ ಮುನಿರಾಜು ಅವರ ಪರವಾಗಿತ್ತು. ಇದರಿಂದ ಇಬ್ಬರಿಗೂ ತಲಾ ಆರು ಮತಗಳು ಬಂದಂತಾಗಿ ಸಮಬಲವಾಯಿತು. ಫಲಿತಾಂಶ ನಿರ್ಧರಿಸಲು ಡಾ.ಮೈತ್ರಿ ಅವರು ಲಾಟರಿ ಮೊರೆ ಹೋದರು. ಇಬ್ಬರ ಹೆಸರನ್ನು ಪೆಟ್ಟಿಗೆಗೆ ಬರೆದು ಹಾಕಿ ಲಾಟರಿ ಎತ್ತಿದರು. ಅದರಲ್ಲೂ ಮುನಿರಾಜು ಅವರಿಗೆ ಅದೃಷ್ಟ ಒಲಿಯಿತು. ಅವರು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಮುನಿರಾಜು ಅವರು ಬೆಂಬಲಿಗರೊಂದಿಗೆ ಸಂಭ್ರಮಿಸಿದರು. ಶಾಸಕ ಕೆ.ವೈ.ನಂಜೇಗೌಡ, ವಿಧಾನ ಪರಿಷತ್‌ ಸದಸ್ಯ ಎಂ.ಎಲ್‌.ಅನಿಲ್‌ ಕುಮಾರ್‌, ಕೋಲಾರ ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಸಿಂಡಿಕೇಟ್‌ ಸದಸ್ಯ ಸೀಸಂದ್ರ ಗೋಪಾಲಗೌಡ, ಮುಖಂಡ ನಂದಿನಿ ಪ್ರವೀಣ್‌ ಸೇರಿದಂತೆ ಹಲವರು ಹೂಮಾಲೆ ಹಾಕಿ ಅಭಿನಂದಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿರಾಜು, ಈ ಗೆಲುವಿಗೆ ಕೋಲಾರ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್‌, ಎಂಎಲ್‌ಸಿಗಳಾದ ಅನಿಲ್‌ ಕುಮಾರ್‌, ನಸೀರ್‌ ಅಹ್ಮದ್‌, ಸಚಿವರಾದ ಬೈರತಿ ಸುರೇಶ್‌, ಡಾ.ಎಂ.ಸಿ.ಸುಧಾಕರ್‌, ಕೃಷ್ಣಬೈರೇಗೌಡ, ಶಾಸಕ ನಂಜೇಗೌಡ, ಮಾಜಿ ಸ್ಪೀಕರ್‌ ಕೆ.ಆರ್‌.ರಮೇಶ್‌ ಕುಮಾರ್‌ ಕಾರಣ ಎಂದರು.

ಇದನ್ನು ಓದಿದ್ದೀರಾ..?ಮಾತಿನ ಭರವಸೆಯಲ್ಲಿಯೇ ಉಳಿದ ಕಂಪನಿಗಳಿಂದ ರಸ್ತೆ ದುರಸ್ಥಿ

ನಾನು ಈ ಹಿಂದೆ ಡಿಸಿಸಿ ಬ್ಯಾಂಕ್‌ನಲ್ಲಿ 15 ವರ್ಷ ಉದ್ಯೋಗಿಯಾಗಿ ಕೆಲಸ ಮಾಡಿದ್ದೆ. 2013ರಲ್ಲಿ ವಿಆರ್‌ಎಸ್‌ ತೆಗೆದುಕೊಂಡಿದ್ದೆ. ಈಗ ನಿರ್ದೇಶಕನಾಗಿ ಬಂದಿದ್ದೇನೆ. ಐದು ವರ್ಷಗಳ ಹಿಂದೆ ಇದ್ದ ರೀತಿ ಬ್ಯಾಂಕ್‌ ಅನ್ನು ಸದೃಢಗೊಳಿಸುವುದು ನಮ್ಮ ಗುರಿ. ಮಹಿಳೆಯರು, ರೈತರಿಗೆ ಶೂನ್ಯ ದರದಲ್ಲಿ ಸಾಲಕೊಡಿಸಿ ಬ್ಯಾಂಕ್‌ ಅನ್ನು ಉತ್ತಮ ಸ್ಥಿತಿಗೆ ತಲುಪಿಸುವ ಉದ್ದೇಶ ಹೊಂದಿದ್ದೇವೆ ಎಂದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...