ಪೋಷಕರು ತಮ್ಮಮಕ್ಕಳು ಭವಿಷ್ಯತ್ತನಲ್ಲಿ ಏನಾಗಬೇಕು ಎಂಬ ನಿರ್ಣಯ ಮಕ್ಕಳಿಗೆ ಬಿಡಿ:- ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ

Date:

ಬಾಗೇಪಲ್ಲಿ:- ಆಸ್ತಿ–ಅಂತಸ್ತು ಮನುಷ್ಯರನ್ನು ಉತ್ತಮರನ್ನಾಗಿಸಲು ಸಾಧ್ಯವಿಲ್ಲ. ಗುಣಮಟ್ಟದ ಶಿಕ್ಷಣದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯುತ್ತದೆ. ಈ ನಿಟ್ಟಿನಲ್ಲಿ ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲೆಯ ಅದ್ಯಕ್ಷ ಹಾಗೂ ಸಂಸ್ಥಾಪಕ ವಿ.ಗೋವಿಂದರಾಜಲು ಹಾಗೂ ಕಾರ್ಯದರ್ಶಿ ಶ್ರೀಮತಿ ಅಶ್ವಿನಿ ಅವರು ವಿದ್ಯಾಸಂಸ್ಥೆಗಳನ್ನು ಸ್ಥಾಪನೆ ಮಾಡಿ ಸಾವಿರಾರು ಮಂದಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಯಶಸ್ಸು ಕಂಡಿದ್ದಾರೆ’ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಹೇಳಿದರು.

ಪಟ್ಟಣದ ಹೊರವಲಯದ ಶನಿವಾರ ಏರ್ಪಡಿಸಿದ್ದ ಕಾರಕೂರು ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲಾ ವಾರ್ಷಿಕೋತ್ಸವ ಹಾಗೂ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯಾರು ಶಿಕ್ಷಣವನ್ನು ಯಶಸ್ವಿಯಾಗಿ ಪಡೆದು ಉನ್ನತ ಶಿಕ್ಷಣ ಪಡೆಯುತ್ತಾರೋ ಅವರಿಗೆ ಉತ್ತಮ ಭವಿಷ್ಯವಿದೆ. ಶಿಕ್ಷಣ ಸಂಸ್ಥೆ ನಿರ್ವಹಣೆ ಕಠಿಣವಾಗಿರುವ ಸಂದರ್ಭದಲ್ಲಿ ಉತ್ತಮ ಶಿಕ್ಷಕರ ತಂಡದೊಂದಿಗೆ ಸಂಸ್ಕಾರಯುತ ಮೌಲ್ಯದೊಂದಿಗೆ ಮಕ್ಕಳಿಗೆ ಬೋಧನೆ ಮಾಡುತ್ತಿರುವ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯವಾದದ್ದು ಎಂದರು. ಮಕ್ಕಳು ತಮ್ಮ ಜೀವನದ ಭವಿಷ್ಯತ್ ನಲ್ಲಿ ಯಾವು ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುತ್ತಾರೋ ಏನನ್ನು ಮಾಡಲು ಇಷ್ಟಪಡುತ್ತಾರೋ ಪೋಷಕರು ಮಕ್ಕಳ ಆಸಕ್ತಿಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಪೋಷಕರಿಗೆ ತಮ್ಮ ಮಕ್ಕಳು ಒಬ್ಬ ಒಳ್ಳೆಯ ಡಾಕ್ಟರ್ ಆಗಬೇಕು ಇಂಜನಿಯರ್ ಆಗಬೇಕು, ವಿಜ್ಞಾನಿ ಆಗಬೇಕು ಅನ್ನುವ ಆಸೆ ಇರುತ್ತದೆ ಆದರೆ ಮಕ್ಕಳೇ ಭವಿಷ್ಯತ್ತನಲ್ಲಿ ಏನಾಗಬೇಕು ಎಂಬ ನಿರ್ಣಯ ಮಕ್ಕಳಿಗೆ ಬಿಡಬೇಕು ಎಂದು ಹೇಳಿದರು.

ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲೆಯ ಅದ್ಯಕ್ಷ ಹಾಗೂ ಸಂಸ್ಥಾಪಕ ವಿ.ಗೋವಿಂದರಾಜಲು ಮಾತನಾಡಿ ವಿ.ಗೋಪಾಲ ಗೌಡರ
ಕಠಿಣ ಪರಿಶ್ರಮ ಪ್ರಾಮಾಣಿಕತೆ ಮತ್ತು ಬದ್ಧತೆ ಮೂಲಕ ಜೀವನದಲ್ಲಿ ಉನ್ನತ ಸ್ಥಾನಕ್ಕೇರಿದ ವಿ.ಗೋಪಾಲಗೌಡ ಅವರ ಸಾಧನೆ ಇತರರಿಗೆ ಮಾದರಿ ಎ.ಗೋಪಾಲ ಗೌಡರು ವಕೀಲರಾಗಿ, ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಮತ್ತು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸಿರುವ ಅವರು, ಧ್ವನಿ ಇಲ್ಲದವರಿಗೆ ಧ್ವನಿಯಾಗಿ. ಅವರು ಸ್ಫೂರ್ತಿದಾಯಕ ವ್ಯಕ್ತಿ ಮಾತ್ರವಲ್ಲ, ನನಗೆ ಮಾರ್ಗದರ್ಶಕರು. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಆಗಿದ್ದಾಗ ಹಲವು ವ್ಯಾಜ್ಯಗಳನ್ನು ಇತ್ಯರ್ಥಪಡಿಸಿ, ಉತ್ತಮ ತೀರ್ಪು ನೀಡಿದ್ದಾರೆ. ಅಳವಾಗಿ ಕಾನೂನು ಅಧ್ಯಯನ ಮಾಡಿರುವ ಅವರು, ಸಂವಿಧಾನದ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡಿದ್ದಾರೆ’ ಎಂದರು.

ಇದನ್ನು ಓದಿದ್ದೀರಾ..? ರಸ್ತೆಯಲ್ಲಿ ನಡೆಯುತ್ತಿರುವ ಅವರೆಕಾಯಿ ವ್ಯಾಪಾರದಿಂದ ಸಾರ್ವಜನಿಕರಿಗೆ ಹಾಗೂ ಟ್ರಾಫಿಕ್‌ಗೆ ತೀವ್ರ ತೊಂದರೆಯಾಗುತ್ತಿದೆ

ಈ ಸಂದರ್ಭದಲ್ಲಿ ಪಿ.ಎನ್.ಶ್ರೀನಿವಾಸಚಾರಿ,ಪಿ.ಬಿ.ಕಾನಿರಾಮ್, ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲೆಯ ಕಾರ್ಯದರ್ಶಿ ಜಿ.ಅಶ್ವಿನಿ, ಬ್ಲೂಮ್ಸ್ ಪಿ.ಯು.ಕಾಲೇಜು ಪ್ರಾಂಶುಪಾಲರಾದ ಉಮಾಶಶಿ,ಇಂಟರ್ನ್ಯಾಷನಲ್ ಶಾಲೆಯ ಪ್ರಾಂಶುಪಾಲರಾದ ವೈ.ಎಚ್.ಮಂಜುಳಾ, ಹಿರಿಯ ವಕೀಲರಾದ ಎ.ಜಿ.ಸುಧಾಕರ್ ಹಾಗೂ ಪೋಷಕರು ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...