ಬಾಗೇಪಲ್ಲಿ:-ಮೆಕ್ಕೆಜೋಳದ ಬೆಲೆ ಕುಸಿತದಿಂದ ತಾಲೂಕಿನಾದ್ಯಂತ ರೈತರು ಸಂಕಷ್ಟದಲ್ಲಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರ ತೆರೆಯುವಂತೆ ಕರ್ನಾಟಕ ಪ್ರಾಂತ್ಯ ರೈತ ಸಂಘ ತಾಲ್ಲೂಕು ಸಮಿತಿ ತಹಶಿಲ್ದಾರ್ ಮನೀಷಾ ಎನ್ ಪತ್ರಿ ಅವರಿಗೆ ಬಾಗೇಪಲ್ಲಿ ಅವರ ಮುಖಾಂತರ ಸಿ.ಎಂ. ಮನವಿ ಪತ್ರ ಸಲ್ಲಿಸಿದರು.
ಸಿಪಿಐಎಂ ಪಕ್ಷದ ಮುಖಂಡರಾದ ಚನ್ನರಾಯಪ್ಪ ಮಾತನಾಡಿ ಮಾರುಕಟ್ಟೆಯಲ್ಲಿ ಪ್ರತಿ ಕ್ರಿಂಟಾಲ್ ಮೆಕ್ಕೆಜೋಳಕ್ಕೆ ಕೇವಲ 1500 ರಿಂದ 1800 ರೂ. ರವರೆಗೆ ಮಾತ್ರ ಬೆಲೆ ದೊರೆಯುತ್ತಿರುವ ಹಿನ್ನೆಲೆಯಲ್ಲಿ ರೈತರ ಜೀವನೋಪಾಯಕ್ಕೆ ಸಮಸ್ಯೆಯಾಗುತ್ತಿದೆ. ತಾಲ್ಲೂಕಿನಲ್ಲಿ ಜೋಳ ಖರೀದಿ ಕೇಂದ್ರ ತೆರೆಯಲು ಸರ್ಕಾರ ಮುಂದಾಗಿಲ್ಲ. ಸರ್ಕಾರವು ರೈತರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಮೆಕ್ಕೆಜೋಳದ ಪ್ರತಿ ಕ್ವಿಂಟಲ್ಗೆ ₹2,400 ಬೆಂಬಲ ಬೆಲೆ ಘೋಷಣೆ ಮಾಡಬೇಕು. ಅಲ್ಲದೆ, ರಾಜ್ಯ ಸರ್ಕಾರವು ₹600 ಸೇರಿಸಿ ಒಟ್ಟು ₹3,000 ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.
ಕಾರ್ಯದರ್ಶಿ ಡಿ.ಟಿ.ಮುನಿಸ್ವಾಮಿ ಮಾತನಾಡಿ ತಾಲೂಕಿನಲ್ಲಿ ಮೆಕ್ಕೆಜೋಳದ ಬೆಲೆ ತೀವ್ರ ಕುಸಿದಿದೆ. ರೈತರಿಗೆ ನ್ಯಾಯಯುತ ಬೆಲೆ ದೊರಕುತ್ತಿಲ್ಲ. ಇದರಿಂದಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಕರ್ನಾಟಕ ಪ್ರಾಂತ್ಯ ರೈತ ಸಂಘ ಸರಕಾರಕ್ಕೆ ಮನವಿ ಸಲ್ಲಿಸಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಒತ್ತಾಯಿಸಿದೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಇದನ್ನು ಓದಿದ್ದೀರಾ..? ಖಜಾನೆ ಖಾಲಿ ಎನ್ನುವ ಆರೋಪಕ್ಕೆ ಒಂದು ಲಕ್ಷ ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರ: ಸಿ.ಎಂ ಸಿದ್ದರಾಮಯ್ಯ
ಈ ಸಂದರ್ಭದಲ್ಲಿ ಕೆ.ಪಿ.ಆರ್.ಎಸ್ ತಾಲ್ಲೂಕು ಅದ್ಯಕ್ಷ ಡಿ.ಸಿ.ಶ್ರೀನಿವಾಸ್, ರಘುರಾಮ ರೆಡ್ಡಿ ,ಜಿ.ಕೃಷ್ಣಪ್ಪ,ವಾಲ್ಮೀಕಿ ಅಶ್ವಥಪ್ಪ ಹಾಗೂ ಇತರೆ ಸಂಘದ ಪದಾಧಿಕಾರಿಗಳು ಹಾಜರಿದ್ದರು.




