ಬಾಗೇಪಲ್ಲಿ :-ತಾಲ್ಲೂಕಿನಲ್ಲಿ ಪಟ್ಟಣದ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ, ಪಾತಪಾಳ್ಯ ಹಾಗೂ ಚಾಕವೇಲು ಶಾಲೆಗಳು ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಮನವಿ ಮಾಡಿರುವ ಕಾರಣ ಮೂರು ಶಾಲೆಗಳಿಗೆ ರಾಜ್ಯ ಸರಕಾರ ಅನುಮತಿ ನೀಡಿದೆ. ಪ್ರತಿ ಶಾಲೆಗೆ 4 ಕೋಟಿ ರೂ. ವೆಚ್ಚದಲ್ಲಿ ಮೂಲ ಸೌಕರ್ಯ ಕಲ್ಪಿಸಿ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವ ಗುರಿ ಇದೆ. ಇದರಿಂದ ಮಕ್ಕಳ ಕಲಿಕಾ ಮಟ್ಟ ವೃದ್ಧಿಯಾಗಲಿದೆ. ಖಾಸಗಿ ಶಾಲೆಗಳಿಗೆ ಪರ್ಯಾಯವಾಗಿ ಈ ಶಾಲೆಗಳು ಕಾರ್ಯನಿರ್ವಹಿಸಲಿವೆ.
ಸರ್ಕಾರದಿಂದ ಮೂರು ಶಾಲೆಗಳು ಆಯ್ಕೆಯಾದ ಹಿನ್ನೆಲೆಯಲ್ಲಿ ಪಟ್ಟಣದ ಪದವಿಪೂರ್ವ ಕಾಲೇಜು
ಪ್ರಾಂಶುಪಾಲರಾದ ನಂಜಿರೆಡ್ಡಿ,ಉಪ ಪ್ರಾಂಶುಪಾಲರಾದ ವೆಂಕಟೇಶ್, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಶ್ರೀನಿವಾಸ್ ಅವರು ಪಟ್ಟಣದ ಶಾಸಕ ಗೃಹ ಕಛೇರಿಯಲ್ಲಿ ಶಾಸಕರಿಗೆ ಸನ್ಮಾನಿಸಿದರು
ತದನಂತರ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಮಾತನಾಡಿ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಮೂರು ಶಾಲೆಗಳು
ಕರ್ನಾಟಕ ಪಬ್ಲಿಕ್ ಸ್ಕೂಲ್ ಆಯ್ಕೆಗೆ ಸಂತಸ ತಂದಿದೆ. ಈ ಶಾಲೆಗಳ ಮುಖ್ಯ ಉದ್ದೇಶ ಶಾಲಾ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳಾಗಿ ಉನ್ನತೀಕರಿಸುವುದು. ಹಣಕಾಸಿನ ನೆರವು ಪ್ರತಿ ಶಾಲಗೆ ಅಂದಾಜು ₹ 4 ಕೋಟಿ ವೆಚ್ಚ ಮಾಡಲಾಗುವುದು.
ಮೂಲಸೌಕರ್ಯ ಶಾಲಾ ಕಟ್ಟಡ, ಪ್ರಯೋಗಾಲಯಗಳು, ಗ್ರಂಥಾಲಯ ಮುಂತಾದ ಮೂಲಭೂತ ಸೌಕರ್ಯಗಳನ್ನು ಸುಧಾರಿಸಲಾಗುವುದು. ಶೈಕ್ಷಣಿಕ ಹಂತ ಪೂರ್ವ ಪ್ರಾಥಮಿಕದಿಂದ ದ್ವಿತೀಯ ಪಿಯುಸಿ ತನಕ ಒಂದೇ ಶಾಲೆಯಲ್ಲಿ ಶಿಕ್ಷಣ ನೀಡಲಾಗುತ್ತದೆ ಎಂದು ಹೇಳಿದರು.
ಬಾಗೇಪಲ್ಲಿ ತಾಲ್ಲೂಕಿನಲ್ಲಿ ಮೂರು ಶಾಲೆಗಳಿಗೆ ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ರಾಜ್ಯ ಸರಕಾರ ಅನುಮತಿ ನೀಡಿದೆ. ಪ್ರತಿ ಶಾಲೆಗೆ 4 ಕೋಟಿ ರೂ. ವೆಚ್ಚದಲ್ಲಿ ಮೂಲ ಸೌಕರ್ಯ ಕಲ್ಪಿಸಲಾಗುವುದು. ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವ ಗುರಿ ಇದೆ. ಇದರಿಂದ ಮಕ್ಕಳ ಕಲಿಕಾ ಮಟ್ಟ ವೃದ್ಧಿಯಾಗಲಿದೆ. ಖಾಸಗಿ ಶಾಲೆಗಳಿಗೆ ಪರ್ಯಾಯವಾಗಿ ಈ ಶಾಲೆಗಳು ಕಾರ್ಯನಿರ್ವಹಿಸಲಿವೆ ಎಂದು ಹೇಳಿದರು.
ಪೂರ್ವ ಪ್ರಾಥಮಿಕದಿಂದ ಪಿಯುಸಿವರೆಗೆ ಒಂದೇ ಸೂರಿನಡಿ ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಿಕೊಡುವ ಮೂಲಕ ಸರಕಾರಿ ಶಾಲೆಗಳಲ್ಲಿದಾಖಲಾತಿ ಪ್ರಮಾಣ ಹೆಚ್ಚಿಸಲು ರಾಜ್ಯ ಸರಕಾರ ಮೈಸೂರು ಜಿಲ್ಲೆಯಲ್ಲಿಹೊಸದಾಗಿ 3 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್ ) ತೆರೆಯಲು ಅನುಮತಿ ನೀಡಿದೆ.
ಸರಕಾರಿ ಶಾಲೆಗಳ ಕಡೆಗೆ ವಿದ್ಯಾರ್ಥಿಗಳನ್ನು ಆಕರ್ಷಿಸುವ ಜತೆಗೆ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿಸಿಗುವ ಗುಣಮಟ್ಟದ ಶಿಕ್ಷಣವನ್ನು ಸರಕಾರಿ ಶಾಲೆಗಳಲ್ಲಿಯೂ ನೀಡಬೇಕೆಂಬ ಉದ್ದೇಶದಿಂದ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗಿದೆ.
ಇಲ್ಲಿಎಲ್ ಕೆಜಿಯಿಂದ 12ನೇ ತರಗತಿವರೆಗೂ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿಮಕ್ಕಳು ವ್ಯಾಸಂಗ ಮಾಡಬಹುದು. ಕೆಪಿಎಸ್ ಶಾಲೆಯಲ್ಲಿಮಕ್ಕಳ ಬೋಧನೆಗೆ ಸುಸಜ್ಜಿತ ಕೊಠಡಿಗಳು, ವ್ಯವಸ್ಥಿತ ಪ್ರಯೋಗಾಲಯ, ಪ್ರತ್ಯೇಕ ಕಂಪ್ಯೂಟರ್ ಲ್ಯಾಬ್ , ಉತ್ತಮ ಗ್ರಂಥಾಲಯ, ಶುದ್ಧ ಕುಡಿಯುವ ನೀರು, ವಿಶಾಲ ಆಟದ ಮೈದಾನ, ಶೌಚಗೃಹ ಒದಗಿಸಲಾಗಿರುತ್ತದೆ.
ಇದನ್ನು ಓದಿದ್ದೀರಾ..? ರಾಷ್ಟ್ರೀಯ ಯುವ ಅಧ್ಯಕ್ಷರಾಗಿ ಡಾ.ಎಸ್ ಅಫ್ತಾಬ್ ಹುಸೇನ್ ನೇಮಕ
‘‘ಪ್ರತಿ ಕೆಪಿಎಸ್ ಶಾಲೆಯಲ್ಲಿ 30 ಮಕ್ಕಳು ಪ್ರವೇಶಾತಿ ಪಡೆಯಲು ಅವಕಾಶ ಕಲ್ಪಿಸಲಾಗುತ್ತದೆ. ಅದಕ್ಕಿಂತ ಹೆಚ್ಚು ಅರ್ಜಿಗಳು ಬಂದರೆ ಲಾಟರಿ ಮೂಲಕ ಮಕ್ಕಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿಕ್ಷಕರು ಸಾರ್ವಜನಿಕರು ಪೋಷಕರು ಹಾಜರಿದ್ದರು.





