ಬೀದರ್‌ | ಲೋಕಸಭಾ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ: ಸಚಿವ ಭಗವಂತ ಖೂಬಾ

Date:

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟದ ಎಲ್ಲ 28 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸಲಿದೆ, ಕಾಂಗ್ರೆಸ್‌ ಶೂನ್ಯ ಸಾಧನೆ ಮಾಡಲಿದೆ ಎಂದು ಕೇಂದ್ರ ಸಚಿವ, ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಹೇಳಿದ್ದಾರೆ.

ಬೀದರ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಳೆದ ಹತ್ತು ತಿಂಗಳಿಂದ ಕಾಂಗ್ರೆಸ್‌ ಶಾಸಕರು ಅಸಮಧಾನಗೊಂಡಿದ್ದು, ಲೋಕಸಭಾ ಚುನಾವಣೆ ಬಳಿಕ ಅಸಮಾಧಾನ ಸ್ಫೋಟಗೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನಗೊಳ್ಳುತ್ತದೆ” ಎಂದು ಹೇಳಿದರು.

“ಕೇಂದ್ರ ಸರ್ಕಾರ ಪದ್ಧತಿ ಪ್ರಕಾರ ರಾಜ್ಯಕ್ಕೆ ಕೊಡಬೇಕಾದ ಪರಿಹಾರ ಕೊಟ್ಟಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯನವರ ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳುವ ಕೆಟ್ಟ ಚಾಳಿಯಿಂದ ಮೋದಿ ಕಡೆಗೆ ಬೊಟ್ಟು ಮಾಡುತ್ತಿದ್ದಾರೆ. ಆ ಮೂಲಕ ತಾವು ಬಚಾವ್‌ ಆಗ್ತೇವೆ ಎಂಬ ಭ್ರಮೆಯಲ್ಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ದೇಶದ ಬಡವರಿಗೆ 4 ಕೋಟಿ ಮನೆಗಳನ್ನು ಕೊಟ್ಟಿದ್ದೇವೆ, ಕಾಂಗ್ರೆಸ್‌ ಸರ್ಕಾರ ವರ್ಷಕ್ಕೆ 7 ಲಕ್ಷ ಮನೆಗಳು ಕೊಟ್ಟಿತ್ತು, ನಾವು ವರ್ಷಕ್ಕೆ 40 ಲಕ್ಷ ಮನೆ ಕೊಟ್ಟಿದ್ದೇವೆ. ದೇಶದ 10.5 ಕೋಟಿ ಜನ ಬಡ ಹೆಣ್ಣು ಮಕ್ಕಳಿಗೆ ಉಚಿತ ಗ್ಯಾಸ್‌ ವಿತರಣೆ, ಹತ್ತು ವರ್ಷಗಳಲ್ಲಿ ಜೆಜೆಎಂ ಯೋಜನೆಯಡಿ 14 ಕೋಟಿ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, 12 ಕೋಟಿ ಮನೆಗಳಿಗೆ ಶೌಚಾಲಯ ನಿರ್ಮಾಣ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...