ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ (DIG) ಯಾಗಿ ನೇಮಕ ಮಾಡಲಾಗಿದೆ. ಸಿ ಕೆ ಬಾಬಾ ವರ್ಗಾವಣೆಗೊಂಡ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ (SP) ಆಗಿ ಚಂದ್ರಕಾಂತ್ ಎಂ.ವಿ ಅವರು ನೇಮಕಗೊಂಡಿದ್ದಾರೆ.
ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಮತ್ತು ವಿವಿಧ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಹಾಗೂ ಬೆಂಗಳೂರು ನಗರದ ಡಿಸಿಪಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನು ಓದಿದ್ದೀರಾ..? ಕಲೆ ಮತ್ತು ವಾಸ್ತುಶಿಲ್ಪದಿಂದ ಇತಿಹಾಸವನ್ನು ಶ್ರೀಮಂತಗೊಳಿಸಿದ ಅಮರ ಶಿಲ್ಪಿ ಜಕಣಾಚಾರಿ
ಆಡಳಿತಾತ್ಮಕ ಬದಲಾವಣೆಯಲ್ಲಿ ಒಟ್ಟು 23 ಅಧಿಕಾರಿಗಳಿಗೆ ಡಿಐಜಿಪಿ ಹುದ್ದೆಗೆ ಮುಂಬಡ್ತಿ ಮತ್ತು ನೇಮಕಾತಿ ನೀಡಲಾಗಿದ್ದರೆ, ಇಬ್ಬರು ಅಧಿಕಾರಿಗಳಿಗೆ ಐಜಿಪಿ ಹುದ್ದೆಗೆ ಪದೋನ್ನತಿ ನೀಡಲಾಗಿದೆ. ಇದಲ್ಲದೆ, ಬೆಂಗಳೂರು ನಗರ, ಬೆಳಗಾವಿ, ಮೈಸೂರು, ಶಿವಮೊಗ್ಗ, ಕೊಡಗು ಸೇರಿದಂತೆ ಪ್ರಮುಖ ಜಿಲ್ಲೆಗಳ ಎಸ್‌ಪಿ ಮತ್ತು ಡಿಸಿಪಿಗಳನ್ನು ಬದಲಾಯಿಸಲಾಗಿದೆ.





