ಕೋಲಾರ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವ್ಯಕ್ತಿಯನ್ನು ಸಮರ್ಥಿಸಿಕೊಂಡ ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ವಕ್ತಾರ ಭಾಸ್ಕರ್ ರಾವ್ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಬೇಕು ಎಂದು ಕೋಲಾರ ರಕ್ಷಣಾಧಿಕಾರಿಗಳಿಗೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ದೂರು ನೀಡಲಾಯಿತು.
ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಹಾಗೂ ಕೋಲಾರ ಜಿಲ್ಲಾ ಅಧ್ಯಕ್ಷರಾದ ಸೈಯದ್ ಆಫ್ರಿದ್ ರವರ ಆದೇಶದ ಮೇರೆಗೆ ಕೋಲಾರದಲ್ಲಿ ಯುವ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಕಾನೂನು ಘಟಕದ ವತಿಯಿಂದ ಕೋಲಾರ ರಕ್ಷಣಾಧಿಕಾರಿ ಗಳಿಗೆ ದೂರು ನೀಡಿ ಗೌರವಾನ್ವಿತ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆದ ವಕೀಲನನ್ನು ವೈಭವಿಕರಿಸಿದ ಹಾಗೂ ಬೆಂಬಲ ನೀಡಿ ಭಾರತೀಯ ನ್ಯಾಯ ಸಂಹಿತೆಯನ್ನು ಉಲ್ಲಂಘನೆ ಮಾಡಿಲುವುದರಿಂದ ಕೂಡಲೇ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ವಕ್ತಾರರಾಗಿರುವ ಭಾಸ್ಕರ್ ರಾವ್ ವಿರುದ್ಧ ಕಠಿಣ ಕ್ರಮ ದಾಖಲಿಸಬೇಕು ಎಂದು ಕೋಲಾರ ಯುವ ಕಾಂಗ್ರೆಸ್ ಮುಖಂಡರು ಮನವಿ ಮಾಡಿದರು.
ಇದನ್ನು ಓದಿದ್ದೀರಾ..? ನಷ್ಟ ಆದಂತಹ ರೈತರ ಬೆಳೆಗಳಿಗೆ ಪರಿಹಾರಕ್ಕೆ ಒತ್ತಾಯ
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾನೂನು ಘಟಕದ ಅಧ್ಯಕ್ಷರಾದ ನರೇಂದ್ರ.ಎನ್. ಕೋಲಾರ ಯುವ ಕಾಂಗ್ರೆಸ್ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಸುಹೈಲ್, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಬಾಜ್ ಹಾಗೂ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಹಾಜರಿದ್ದರು





