ಮತಗಳ್ಳತನ ವಿರುದ್ಧ ಕಾಂಗ್ರೆಸ್‌ನಿಂದ ಸಹಿ ಸಂಗ್ರಹ ಅಭಿಯಾನ

Date:

ಚಿಕ್ಕಬಳ್ಳಾಪುರ: ಮತಗಳ್ಳತನ (ವೋಟ್ ಚೋರಿ) ಕುರಿತು ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯವ್ಯಾಪಿಯಾಗಿ ಸಾರ್ವಜನಿಕ ಮಟ್ದದಲ್ಲಿ ಸಹಿ ಸಂಗ್ರಹ ಅಭಿಯಾನವನ್ನು ನಡೆಸುತ್ತಿದೆ.ಅದರ ಭಾಗವಾಗಿ ಇಂದು ಚಿಕ್ಕಬಳ್ಳಾಪುರದಲ್ಲಿ ಅಭಿಯಾನ ಜೋರಾಗಿ ನಡೆಯಿತು.ನಗರದ ಗಾಂಧಿ ಭವನದ ಎದುರು ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು,ಯುವ ಕಾಂಗ್ರೆಸ್,ಮಹಿಳಾ ಘಟಕ ಹಾಗೂ ಸ್ಥಳೀಯ ಕಾರ್ಯಕರ್ತರು ಭಾಗವಹಿಸಿದರು.ನೂರಾರು ನಾಗರಿಕರು ಸಹಿ ಮಾಡಿ ಮತದಾನದ ಪವಿತ್ರತೆಗೆ ಬೆಂಬಲ ವ್ಯಕ್ತಪಡಿಸಿದರು.

ಈ ವೇಳೆಚಿಕ್ಕಬಳ್ಳಾಪುರ–ಕೋಲಾರ ಅವಿಭಜಿತ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಗಂಗರೇ ಕಾಲವೇ ನಾರಾಯಣಸ್ವಾಮಿ ಸಹಿ ಮಾಡಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮತಪಟ್ಟಿಯಿಂದ ನಿಜವಾದ ಮತದಾರರ ಹೆಸರು ತೆಗೆದು ಹಾಕುವ ಹಾಗೂ ನಕಲಿ ಹೆಸರು ಸೇರಿಸುವ ಮೂಲಕ ಪ್ರಜಾ ಪ್ರಭುತ್ವವನ್ನು ದುರ್ಬಲಗೊಳಿಸುವ ಯತ್ನಗಳು ನಡೆಯುತ್ತಿವೆ.ಇದರ ವಿರುದ್ಧ ಕಾಂಗ್ರೆಸ್ ಹೋರಾಟ ಆರಂಭಿಸಿದೆ.ಪ್ರತಿ ಬೂತ್ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರು ಕಣ್ಗಾವಲು ಇಡುವರು ಈ ಅಭಿಯಾನದ ಉದ್ದೇಶ ಜನರಲ್ಲಿ ಮತದಾನದ ಹಕ್ಕಿನ ಬಗ್ಗೆ ಅರಿವು ಮೂಡಿಸುವುದು.ಪ್ರತಿಯೊಬ್ಬ ಮತದಾರನೂ ಎಚ್ಚರಿಕೆಯಿಂದ ಇರಬೇಕು ಮತ್ತು ಯಾವುದೇ ಅಕ್ರಮ ಕಂಡುಬಂದರೆ ತಕ್ಷಣ ಪಕ್ಷದವರಿಗೂ,ಚುನಾವಣಾ ಆಯೋಗಕ್ಕೂ ಮಾಹಿತಿ ನೀಡಬೇಕು,ಎಂದು ಮನವಿ ಮಾಡಿದರು.

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೇಶವರೆಡ್ಡಿ ಮಾತನಾಡಿ ಮತಗಳ್ಳತನ ಕುರಿತು ಜನರಲ್ಲಿ ಅರಿವು ಮೂಡಿಸಲು ಕಾಂಗ್ರೆಸ್ ಪಕ್ಷವು ರಾಜ್ಯದಾದ್ಯಾಂತ ಸಹಿ ಸಂಗ್ರಹ ಅಭಿಯಾನವನ್ನು ನಡೆಸುತ್ತಿದೆ. ಮತ ಪ್ರತಿಯೊಬ್ಬ ವ್ಯಕ್ತಿಯ ಸಂವಿಧಾನಿಕ ಹಕ್ಕಾಗಿದ್ದು,ಅಂತಹ ಹಕ್ಕನ್ನು ಕುಸಿಯಲು ಯಾರಿಗೂ ಅವಕಾಶವಿಲ್ಲ ಇತ್ತೀಚಿನ ದಿನಗಳಲ್ಲಿ ದೇಶಾದ್ಯಾಂತ ವ್ಯಾಪಕವಾಗಿ ನಡೆಯುತ್ತಿರುವ ಮತಗಳ್ಳತನ ಪ್ರಕರಣಗಳು ಗಂಭೀರವಾಗಿದ್ದು,ಇದನ್ನು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಬಯಲಿಗೆ
ತಂದಿದ್ದಾರೆ.ವಿಶೇಷವಾಗಿ ಬೆಂಗಳೂರು ಮಹದೇವಪುರ ಕ್ಷೇತ್ರದಲ್ಲಿ ನಡೆದ ಮತಗಳ್ಳತನ ಪ್ರಕರಣವು ದೇಶದ ಗಮನ ಸೆಳೆದಿದ್ದು,ಇತರ ಭಾಗಗಳಲ್ಲಿಯೂ ಇದೇ ರೀತಿಯ ಅಕ್ರಮಗಳು ನಡೆಯುತ್ತಿರುವುದು ಆತಂಕಕಾರಿಯಾಗಿದೆ.

ಮತಪಟ್ಟಿಯಿಂದ ಉದ್ದೇಶಪೂರ್ವಕವಾಗಿ ನಿಜವಾದ ಮತದಾರರ ಹೆಸರು ತೆಗೆಯುವುದು ಅಥವಾ ಚುನಾವಣೆಯ ಮುನ್ನ ನಕಲಿ ಹೆಸರು ಸೇರಿಸುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಕೆಲಸ.ಯಾವುದೇ ಲೋಪದೋಷ ಕಂಡುಬಂದರೆ ಹೊಣೆಗಾರ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.ಜನರ ಮತ ಹಕ್ಕು ಪವಿತ್ರವಾಗಿದೆ ಮತ್ತು ಮತಗಳ್ಳತನದಿಂದ ಪ್ರಜಾಪ್ರಭುತ್ವ ದುರ್ಬಲಗೊಳ್ಳಬಾರದು ಎಂದರು.ಕಾಂಗ್ರೆಸ್ ಪಕ್ಷ ಪ್ರತಿ ಬೂತ್ ಮಟ್ಟದಲ್ಲಿಯೂ ನಿಗಾ ಇಡಲಿದೆ. ಜನರು ಸಹ ಎಚ್ಚರಿಕೆಯಿಂದ ಇರಬೇಕು ನಾವು ಮಾಧ್ಯಮ ಸಾರ್ವಜನಿಕ ಸಂಘಟನೆಗಳ ಮೂಲಕ ಜನರ ಹಕ್ಕುಗಳ ಬಗ್ಗೆ ಅರಿವು ಮೂಡಿಸುತ್ತೇವೆ ಮತ್ತು ಯಾವುದೇ ಅನೈತಿಕ ಕಾರ್ಯಕ್ಕೆ ತಡೆ ನೀಡುತ್ತೇವೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..?ಅಕ್ಟೋಬರ್ 17ರ ಕೋಲಾರ್ ಬಂದ್ ಗೆ ದಲಿತ ಸಮಾಜಸೇನೆ ರಾಜ್ಯಾಧ್ಯಕ್ಷ ಸೂಲಿಕೂಂಟೆ ಆನಂದ್ ಬೆಂಬಲ

ಈ ಸಂದರ್ಭದಲ್ಲಿ ಮಂಡಿಕಲ್–ಮಂಚೇನಹಳ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಭೂಷಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಕ್ಷಿತ್ ರೆಡ್ಡಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಯಾಸ್ಮೀನ್ ತಾಜ್,ನಂದಿ ಆಂಜಿನಪ್ಪ,ನಾರಾಯಣಮ್ಮ, ವಕೀಲ ಮುನೇಗೌಡ,ಬಾಬಾ ಜಾನ್,ಕೊನಪಳ್ಳಿ ಕೋದಂಡ,ಮಂಗಳಪ್ರಕಾಶ್,ನಜೀರಾ ಬೇಗಂ ಮತ್ತು ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅನೇಕ ಸ್ಥಳೀಯ ನಾಯಕರೂ ಹಾಜರಾಗಿ ಅಭಿಯಾನಕ್ಕೆ ಬೆಂಬಲ ನೀಡಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...