ಮಹಿಳಾ ಕಾಲೇಜು, ಕೋಲಾರಮ್ಮ ದೇಗುಲದ ಜಾಗಕ್ಕೆ ಖಾತೆ: ಕೊತ್ತೂರು ಮಂಜುನಾಥ್‌

Date:

ಕೋಲಾರ: ನಗರದ ಮಹಿಳಾ ಸರ್ಕಾರಿ ಕಾಲೇಜು ಹಾಗೂ ಕೋಲಾರಮ್ಮ ದೇವಸ್ಥಾನದ ಮುಂದಿರುವ ಜಾಗಕ್ಕೆ ಖಾತೆ ಮಾಡಿಕೊಡಲಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್‌ ಹೇಳಿದರು.

ಸೋಮವಾರ ಕೋಲಾರಮ್ಮ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ದಾಖಲೆಗಳನ್ನು ಹಸ್ತಾಂತರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರಮ್ಮ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗದ ದಾಖಲೆಗಳೇ ಇರಲಿಲ್ಲ. ನಗರಸಭೆ ಜಾಗವನ್ನು ಕೋಲಾರಮ್ಮ ದೇವಸ್ಥಾನಕ್ಕೆ ನೀಡಲಾಗಿತ್ತು. ಈಗ ಅದಕ್ಕೆ ಖಾತೆ ಮಾಡಿ ಕೊಡಲಾಗಿದೆ. ದೇಗುಲದ ಮುಂದಿರುವ ಈ ಜಾಗದಲ್ಲಿ ಅನ್ನಸಂತರ್ಪಣೆ, ದೇವರ ಉತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮ ಮಾಡಬಹುದಾಗಿದೆ ಎಂದರು.

ಮಹಿಳಾ ಕಾಲೇಜಿಗೆ ಹಲವು ವರ್ಷಗಳ ಇತಿಹಾಸವಿದೆ. ಅಂಥ ಕಾಲೇಜಿನ ಆಸ್ತಿ ಸಂಬಂಧ ದಾಖಲೆಗಳೇ ಇರಲಿಲ್ಲ. ಈಗ ಹೊಸದಾಗಿ 42 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಬೇಕು. ದಾಖಲೆ ಇಲ್ಲದ ಕಾರಣ ನಿರ್ಮಾಣಕ್ಕೆ ತೊಂದರೆ ಆಗಿತ್ತು. ನಗರಸಭೆ ಅಧ್ಯಕ್ಷರಾಗಿದ್ದ ಲಕ್ಷ್ಮಿದೇವಮ್ಮ, ಉಪಾಧ್ಯಕ್ಷರಾಗಿದ್ದ ಸಂಗೀತಾ, ಪೌರಾಯುಕ್ತ, ತಹಶೀಲ್ದಾರ್‌ ಗಮನಕ್ಕೆ ತಂದು ನಾನು, ಎಂ.ಎಲ್‌.ಅನಿಲ್‌ ಕುಮಾರ್ ಹಾಗೂ ಪ್ರಾಂಶುಪಾಲರು ಪ್ರಯತ್ನ ಮಾಡಿ ಕಾಲೇಜಿಗೆ ಇ–ಖಾತೆ ಮಾಡಿಕೊಟ್ಟಿದ್ದೇವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮಗೆ ಒಳ್ಳೆಯ ಅಧಿಕಾರಿಗಳೇ ಸಿಕ್ಕಿದ್ದಾರೆ. ಹೀಗಾಗಿ, ಇಂಥ ಒಳ್ಳೆಯ ಕೆಲಸಗಳನ್ನು ಮುಂದುವರಿಸುತ್ತೇವೆ. ದೇಗುಲದ ಎದುರು ನಾವು ಈ ಮಾತು ಹೇಳಿದ್ದು, ಸುಳ್ಳು ಹೇಳುವುದಿಲ್ಲ ಎಂದರು.

ಇದನ್ನು ಓದಿದ್ದೀರಾ..? ಮಾಲೂರಿನ ಯುಕೆನ್ ಇಂಡಿಯಾ ಕಂಪನಿಯಿಂದ ಕಾರ್ಮಿಕರಿಗೆ ಕಿರುಕುಳ

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯ ಎಂ.ಎಲ್‌.ಅನಿಲ್‌ ಕುಮಾರ್‌, ತಹಶಿಲ್ದಾರ್ ನಯನ, ಕಂದಾಯ ನೀರಿಕ್ಷಕ ರಾಜೇಂದ್ರ ಪ್ರಸಾದ್, ನಗರಸಭೆ ಮಾಜಿ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಮಾಜಿ ಉಪಾಧ್ಯಕ್ಷೆ ಸಂಗೀತಾ, ಸರ್ಕಾರಿ ಮಹಿಳಾ ಕಾಲೇಜು ಪ್ರಾಂಶುಪಾಲ ಶ್ರೀನಿವಾಸಗೌಡ, ನಗರಸಭೆ ಪೌರಾಯುಕ್ತ ನವೀನ್ ಚಂದ್ರ, ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ,ನಗರ ಅಧ್ಯಕ್ಷ ಅಫ್ಸರ್, ಕಾಂಗ್ರೆಸ್ ಎಸ್ಟಿ ಘಟಕದ ಜಿಲ್ಲಾ ಅಧ್ಯಕ್ಷ ಎನ್.ಅಂಬರೀಷ್, ಮುಖಂಡರಾದ ಬೆಳಗಾನಹಳ್ಳಿ ಮುನಿವೆಂಕಟಪ್ಪ ವೀರೇಂದ್ರ ಪಾಟೀಲ್ ಯಲವಾರ ರಾಜಕುಮಾರ್, ಕುರಿಗಳ ರಮೇಶ್ ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...