ಮುಖ್ಯ ಶಿಕ್ಷಕನ ವಿದ್ಯಾರ್ಥಿಗಳ ಜೊತೆ ಅಸಭ್ಯ ವರ್ತನೆ ರೊಚ್ಚಿಗೆದ್ದ ಪೋಷಕರು

Date:

ಚಿಂತಾಮಣಿ:ವಿದ್ಯಾರ್ಥಿನಿಯರ ಜೊತೆ ಮುಖ್ಯ ಶಿಕ್ಷಕ ಅಸಭ್ಯವಾಗಿ ವರ್ತನೆ ಮಾಡಿದ್ದಾನೆ ಎಂದು ಆರೋಪಿಸಿ ವಿದ್ಯಾರ್ಥಿನಿಯರು ಹಾಗೂ ಪೋಷಕರು ಶಾಲೆ ಮುಂಭಾಗ ಪ್ರತಿಭಟನೆಗೆ ಕುಳಿತ ಘಟನೆ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಎದುರುಗಡೆ ನಡೆದಿದೆ.

ಸದರಿ ಶಾಲೆಯ ಹತನೇ ತರಗತಿಯಲ್ಲಿ 57 ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಮಾಡುತ್ತಿದ್ದು ಶಾಲಾ ಆವರಣದಲ್ಲಿರುವ ಇರುವ ಹೆಣ್ಣು ಮಕ್ಕಳ ವಸತಿ ನಿಲಯದಲ್ಲಿ ಹತ್ತನೇ ತರಗತಿಯ ಸುಮಾರು 50 ವಿದ್ಯಾರ್ಥಿನಿಯರು ವಸತಿ ನಿಲಯದಲ್ಲಿ ಉಳಿದುಕೊಳ್ಳುತ್ತಿದ್ದು.

ಶಾಲೆಯ ಮುಖ್ಯ ಶಿಕ್ಷಕ ಓಬಯ್ಯ ಕೆ,ಎಂಬುವವರು ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿ ಪ್ರತಿಭಟನೆ ನಡೆಸಿದ್ದಲ್ಲದೆ,ಕೂಡಲೇ ಮುಖ್ಯ ಶಿಕ್ಷಕನನ್ನು ವರ್ಗಾವಣೆ ಮಾಡದೇ ಇದ್ದರೆ,ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದು ರಸ್ತೆ ತಡೆ ನಡೆಸಲು ಮುಂದಾದರು,ಕೂಡಲೇ ಪೊಲೀಸರು ಮಧ್ಯಪ್ರವೇಶಿಸಿ ರಸ್ತೆ ತಡೆ ನಡೆಸಲು ಅವಕಾಶ ಮಾಡಿಕೊಡಲಿಲ್ಲ,ನಂತರ ವಿದ್ಯಾರ್ಥಿನಿಯರು ಕಣ್ಣಲ್ಲಿ ನೀರು ಹಾಕುತ್ತಾ ಶಾಲೆಯ ಎದುರುಗಡೆ ಪ್ರತಿಭಟನೆಗೆ ಕುಳಿತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಶಾಲೆಯ ಶಾಲೆಯ ಮುಖ್ಯ ಶಿಕ್ಷಕನ ಶಿಕ್ಷಕನ ಅಸಭ್ಯ ವರ್ತನೆ ಬಗ್ಗೆ ಡಿಡಿಪಿಓ ಗಮನಕ್ಕೆ ತಂದು ಮೇಲಾಧಿಕಾರಿಗಳಿಂದ ವರದಿ ಬಂದ ತಕ್ಷಣ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದಾಗ,ಪೋಷಕರು ಬಿಇಓ ಮಾತಿಗೆ ಜಗ್ಗಲಿಲ್ಲ ನಂತರ ಬಿ ಇ ಓ ರವರು ಮುಖ್ಯ ಶಿಕ್ಷಕನಿಗೆ ಒಂದು ತಿಂಗಳ ಕಾಲ ರಜಾ ನೀಡಿ ಕಳುಹಿಸಿ ಕೊಟ್ಟ ನಂತರ ಪೋಷಕರು ಹಾಗೂ ವಿದ್ಯಾರ್ಥಿನಿಯರು ಪ್ರತಿಭಟನೆಯನ್ನು ಹಿಂಪಡೆದರು.

ಇದನ್ನು ಓದಿದ್ದೀರಾ..? ಅಂಬೇಡ್ಕರ್ ಸಮತಾ ದಳ ಸಂಘಟನೆಯಿಂದ ನ.23ಕ್ಕೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಪ್ರತಿಭಟನೆಯಲ್ಲಿ ಚೌಡರೆಡ್ಡಿ,ಪ್ರಭಾವತಿ, ಗಂಗಾಧರಪ್ಪ,ಸುಜಾತ,ಶ್ರೀನಾಥ್, ಬೈರಮ್ಮ,ಶೋಭಾ,ಪವಿತ್ರ,ಅಶ್ವಿನಿ, ಶಾಂತಮ್ಮ,ರವಿ,ದೇವರಾಜ್,ಗೋಕುಲ್,ವೆಂಕಟ್ ಶಿವ,ಸೇರಿದಂತೆ ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...