ರಾಯಚೂರು | ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರ ಬೃಹತ್ ಪ್ರತಿಭಟನೆ

Date:

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಬೃಹತ್ ಪ್ರತಿಭಟನಾ‌ ಮೆರವಣಿಗೆ ನಡೆಸಲಾಯಿತು.

ಇದಕ್ಕೂ ಮೊದಲು ಕೌಶಲ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹಾಗೂ ಸಚಿವ ಎನ್ ಎಸ್ ಬೋಸರಾಜು ನೇತೃತ್ವದಲ್ಲಿ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಧರಣಿ ನಡೆಸಿ ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ನಗರದ ಬಸವೇಶ್ವರ ವೃತ್ತದಿಂದ ಕೇಂದ್ರ ಬಸ್ ನಿಲ್ದಾಣಕ್ಕೆ ಹೋಗುವ ಮಾರ್ಗವನ್ನು ಬಂದ್ ಮಾಡಿ ಟಿಪ್ಪುಸುಲ್ತಾನ್ ಉದ್ಯಾನದ ಪಕ್ಕದ ಗಾಲಿಬ್ ರಸ್ತೆಯ ಮೂಲಕ ವಾಹನ ಸಂಚಾರಕ್ಕೆ ಅನುಮತಿ ನೀಡಿದ್ದರಿಂದ ಕೆಲಕಾಲ ಸಂಚಾರಕ್ಕೆ ವ್ಯತ್ಯಯವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ಯಾರಂಟಿ ಗಳನ್ನು ಸಹಿಸದ ಕೇಂದ್ರ ಸರ್ಕಾರ: ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ‌, ಎನ್ ಎಸ್ ಬೋಸರಾಜು, ಸಂಸದ ಜಿ.ಕುಮಾರ ನಾಯಕ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರು 5 ಗ್ಯಾರಂಟಿಗಳ‌ ಮೂಲಕ ರಾಜ್ಯದ ಬಡ,ಮಧ್ಯಮ ವರ್ಗದ ಪರ ಆಡಳಿತ ನಡೆಸುತ್ತಿದೆ ಇದನ್ನು ಸಹಿಸದ ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಮುಖ್ಯಮಂತ್ರಿ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದೆವೆಂದು ದೂರಿದರು.

ಪ್ರತಿಭಟನೆಯಲ್ಲಿ ಶಾಸಕರಾದ ಹಂಪಯ್ಯ ನಾಯಕ, ಹಂಪನಗೌಡ ಬಾದರ್ಲಿ, ಬಸನಗೌಡ ತುರ್ವಿಹಾಳ, ವಿಧಾನ ಪರಿಷತ್ ಸದಸ್ಯರಾದ ಎ. ವಸಂತ ಕುಮಾರ, ಶರಣೇಗೌಡ ಬಯ್ಯಾಪೂರು, ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿ, ರುಡಾ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಮಹಮ್ಮದ್ ಶಾಲಂ, ಯುಸೂಫ್ ಖಾನ್, ರಾಣಿ ರಿಚರ್ಡ್, ಮಂಜುಳಾ, ನಾಗವೇಣಿ ಪಾಟಿಲ, ಅಸ್ಲಂ ಪಾಶ, ರಸೂಲ್ ಸಾಬ್, ಮಾಲಾ ಭಜಂತ್ರಿ, ಖಾಜಾಬಿ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...