ರೈತರ ಜಮೀನಿಗೆ ಅರಣ್ಯ ಇಲಾಖೆ ಅಕ್ರಮ ಪ್ರವೇಶ ಎಸ್ಐಟಿ ನಿಯಮಗಳ ಉಲ್ಲಂಘನೆ ವಿರುದ್ದ ಕ್ರಮಕ್ಕೆ ಒತ್ತಾಯ

Date:

ಕೋಲಾರ: ಜಿಲ್ಲೆಯಲ್ಲಿ ಅರಣ್ಯ ಒತ್ತುವರಿ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನ ಆದೇಶದ ಪ್ರಕಾರ ಎಸ್.ಐ.ಟಿ. ರಚನೆಯಾಗಿದ್ದು ಅರಣ್ಯ ಇಲಾಖೆಯ ವತಿಯಿಂದ ನಿಯಮಗಳು ಉಲ್ಲಂಘನೆಯಾಗಿದ್ದು ಕೂಡಲೇ ಸಂಬಂಧಿಸಿದ ಅರಣ್ಯ ಅಧಿಕಾರಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರೈತರು ಹಾಗೂ ರೈತ ಸಂಘದ ಮುಖಂಡರು ನಗರದ ಜಿಪಂ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಐಕೆಎಸ್ ರಾಜ್ಯ ಮುಖಂಡ ಗೋಪಾಲ್ ಮಾತನಾಡಿ ಸುಪ್ರೀಂಕೋರ್ಟ್‌ನ ಆದೇಶದ ಪ್ರಕಾರ ಎಸ್.ಐ.ಟಿ. ರಚನೆಯಾಗಿದ್ದು, ಕೋಲಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಎಸ್.ಐ.ಟಿ. ನಿಯಮಾವಳಿ ಪ್ರಕಾರ ಅರಣ್ಯ ಜಮೀನು, ರೈತರ ಜಮೀನು, ಕಂದಾಯ ಇಲಾಖೆ ಜಮೀನು, ಇತರೆ ಜಮೀನುಗಳನ್ನು ತನಿಖೆ ಮಾಡಿ ರಾಜ್ಯ ಮಟ್ಟದ ಎಸ್.ಐ.ಟಿ. ಗೆ ವರದಿ ಮಾಡಲು ಸುಪ್ರೀಂಕೋರ್ಟ್‌ನ ಆದೇಶ ಆಗಿದ್ದು ಜಿಲ್ಲಾಧಿಕಾರಿಗಳ ತಂಡ ಪರಿಶೀಲನೆ ಮಾಡುವುದಕ್ಕೂ ಮೊದಲೇ ದೌರ್ಜನ್ಯದಿಂದ ರೈತರ ಜಮೀನುಗಳಿಗೆ ಬೌಂಡರಿಗಳು ಹಾಕುವುದು, ಬೆಳೆ ನಾಶ ಮಾಡುವುದು ಸುಪ್ರೀಂಕೋರ್ಟ್‌ನ ಆದೇಶದ ಪ್ರಕಾರ ಅರಣ್ಯ ಇಲಾಖೆಯ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಬೇಕೆಂದು ಒತ್ತಾಯ ಮಾಡಿದರು

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ರೈತರನ್ನು ಕಳ್ಳರ ರೀತಿಯಲ್ಲಿ ನೋಡುವ ಅರಣ್ಯ ಇಲಾಖೆಯ ಅಧಿಕಾರಿಗಳು ರೈತರು ಬೆಳೆದ ಬೆಳೆಗಳನ್ನು ಸಂಪೂರ್ಣವಾಗಿ ನಾಶ ಮಾಡಿದ್ದಾರೆ ಸಾಲ ಮಾಡಿ ಕಟಾವಿಗೆ ಬಂದ ಬೆಳೆಗಳನ್ನು ನಾಶ ಮಾಡಲು ಅವರಿಗೆ ಯಾವ ಅಧಿಕಾರವಿದೆ ತಕ್ಷಣದಿಂದಲೇ ಅರಣ್ಯ ಇಲಾಖೆಯ ದೌರ್ಜನ್ಯವನ್ನು ಎಸ್.ಐ.ಟಿ. ತನಿಖೆ ಆಗುವವರೆಗೂ ನಿಲ್ಲಿಸಬೇಕು ಯಾವುದೇ ಕಾರಣಕ್ಕೂ ಇತ್ಯರ್ಥವಾಗುವ ತನಕ ರೈತರಿಗೆ ತೊಂದರೆ ಕೊಡಬಾರದು ಎಂದು ಒತ್ತಾಯ ಮಾಡಿದರು.

ಇದನ್ನು ಓದಿದ್ದೀರಾ..? ಗುಣಮಟ್ಟದ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ರೈತರಿಗೆ ವಿತರಿಸಲು ಕ್ರಮ ಕೈಗೊಳ್ಳಬೇಕು : ಸಂಸದ ಎಂ. ಮಲ್ಲೇಶ್ ಬಾಬು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾತಕೋಟೆ ನವೀನ್ ಕುಮಾರ್, ರೈತರಾದ ಶಿಳ್ಳೆಂಗೆರೆ ಶ್ರೀನಿವಾಸ್, ಗಂಗಮ್ಮ, ಜಿ.ಮಂಜುಳ, ಬಿ.ಎ.ಸೈಯದ್ ಪಾರುಕ್, ಚಲಪತಿ, ಹನುಮಪ್ಪ, ಚಂದ್ರಾರೆಡ್ಡಿ, ವೆಂಕಟರಾಮರೆಡ್ಡಿ, ಮಂಜುನಾಥ್ ಮುಂತಾದವರಿದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...