ವಿಶೇಷ ಮಧ್ಯಸ್ಥಿಕೆ ಅಭಿಯಾನದಡಿ 190 ಪ್ರಕರಣ ಇತ್ಯರ್ಥ: ನ್ಯಾ ನೇರಳೆ ವೀರಭದ್ರಯ್ಯ ಭವಾನಿ

Date:

ಚಿಕ್ಕಬಳ್ಳಾಪುರ: ಕಳೆದ ಜುಲೈ 1 ರಿಂದ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ “ವಿಶೇಷ ಮಧ್ಯಸ್ಥಿಕೆ ಅಭಿಯಾನದಡಿ” 190 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನೇರಳೆ ವೀರಭದ್ರಯ್ಯ ಭವಾನಿ ಅವರು ತಿಳಿಸಿದರು.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಾನ್ಯ ಸರ್ವೋಚ್ಚ ನ್ಯಾಯಾಲಯ (ಸುಪ್ರಿಂ ಕೋರ್ಟ್) ದ ನಿರ್ದೇಶನದಂತೆ ಕಳೆದ ಜುಲೈ 1 ರಿಂದ ಜಿಲ್ಲೆಯಲ್ಲಿಯೂ ವಿಶೇಷ ಮಧ್ಯಸ್ಥಿಕೆ ಅಭಿಯಾನವನ್ನು ಹಮ್ಮಿಕೊಂಡು ಜಿಲ್ಲಾ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ ಬಾಕಿ ಇದ್ದ 22339 ಪ್ರಕರಣಗಳಲ್ಲಿ ಕೆಲವು ಪ್ರಕರಣಗಳನ್ನು ಕೈಗೆತ್ತಿಕೊಂಡು 190 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಚೆಕ್ ಬೌನ್ಸ್, ವೈವಾಹಿಕ, ಅಪಘಾತ, ಕೌಟುಂಬಿಕ ದೌರ್ಜನ್ಯ, ವಾಣಿಜ್ಯ ವಿವಾದ, ಸೇವಾ ವಿಷಯ, ಸಾಲದ ವಸೂಲಾತಿ, ಕಾರ್ಮಿಕ, ಭೂ ಸ್ವಾಧೀನ ಪ್ರಕರಣಗಳು ಸೇರಿದಂತೆ ಸೂಕ್ತ ಕ್ರಿಮಿನಲ್ ಮತ್ತು ಸಿವಿಲ್ ಪ್ರಕರಣಗಳನ್ನು ಈ ಅಭಿಯಾನದಲ್ಲಿ ಇತ್ಯರ್ಥಪಡಿಸಲಾಗಿದೆ. ಮುಖ್ಯವಾಗಿ 97 ಚೆಕ್ ಪ್ರಕರಣಗಳು, 35 ವೈವಾಹಿಕ ಪ್ರಕರಣಗಳು ಹಾಗೂ 37 ವಿಭಾಗಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ತಿಳಿಸಿದರು

ಮಧ್ಯಸ್ಥಿಕೆ ಬಹಳ ಮುಖ್ಯ ಕೆಲವು ಪ್ರಕರಣಗಳಲ್ಲಿ ಮಧ್ಯಸ್ಥಿಕೆ ವಹಿಸುವವರ ಪಾತ್ರ ಹಾಗೂ ಮಧ್ಯಸ್ಥಿಕೆಯು ಬಹಳ ಮುಖ್ಯವಾಗಿರುತ್ತದೆ. ಈ ಅಭಿಯಾನದಡಿ ಕಕ್ಷಿದಾರರ ಮಧ್ಯೆ ಸೂಕ್ತ ಸಂವಹನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಕಾನೂನು ದೃಷ್ಟಿ ಸೇರಿದಂತೆ ಇತರ ದೃಷ್ಠಿಕೋನಗಳಲ್ಲಿಯೂ ಪ್ರಕರಣಗಳನ್ನು ಅವಲೋಕಿಸಿ ಇತ್ಯರ್ಥಪಡಿಸಲಾಗುತ್ತದೆ. ಈ ಮಧ್ಯಸ್ಥಿಕೆ ಅಭಿಯಾನದಲ್ಲಿ ಭಾಗವಹಿಸಿ ಪ್ರಕರಣ ಇತ್ಯರ್ಥ ಪಡಿಸಿಕೊಂಡವರು ಬಹಳ ಹರ್ಷ ಹಾಗೂ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಅಭಿಯಾನವು ಯಶಸ್ವಿಯಾಗಲು ಜಿಲ್ಲೆಯ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಜಿಲ್ಲೆಯ ವಕೀಲರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವಕೀಲರ ಸಂಘದಿಂದ ಸಂಪೂರ್ಣ ಸಹಕಾರ ನೀಡಿದ್ದಾರೆ. ಈ ಅಭಿಯಾನಕ್ಕೆ ಸಹಕಾರ ನೀಡಿದ ಸರ್ವರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.

10 ವರ್ಷದ ಹಳೆ ಪ್ರಕರಣ ಇತ್ಯರ್ಥ ಈ ವಿಶೇಷ ಅಭಿಯಾನದಲ್ಲಿ ಜಿಲ್ಲೆಯಲ್ಲಿ 5 ವರ್ಷಕ್ಕೂ ಹಳೆಯದಾದ 15 ಪ್ರಕರಣಗಳು ಹಾಗೂ 10 ವರ್ಷಕ್ಕೂ ಹಳೆಯದಾದ 1 ಪ್ರಕರಣವನ್ನು ಇತ್ಯರ್ಥಪಡಿಸಿರುವುದು ಸಂತಸ ತಂದಿದೆ. ಇತ್ಯರ್ಥವಾಗಿರುವ 190 ಪ್ರಕರಣಗಳ ಪೈಕಿ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಬಾಕಿ ಇದ್ದ 60 ಪ್ರಕರಣಗಳು, ಚಿಂತಾಮಣಿ ತಾಲ್ಲೂಕಿನ 54 ಪ್ರಕರಣಗಳು ಹಾಗೂ ಗೌರಿಬಿದನೂರು ತಾಲ್ಲೂಕಿನ 48 ಪ್ರಕರಣಗಳು ಇತ್ಯರ್ಥವಾಗಿವೆ. ಶಿಡ್ಲಘಟ್ಟ, ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲ್ಲೂಕಿನ ಕೆಲವು ಪ್ರಕರಣಗಳು ಸಹ ಇತ್ಯರ್ಥವಾಗಿವೆ ಎಂದರು.

ಇದನ್ನು ಓದಿದ್ದೀರಾ..? ನಾವು ಧರ್ಮಸ್ಥಳದ ವಿರೋಧಿ ಅಲ್ಲಾ, ದೇವರ ಹೆಸರಿನಲ್ಲಿ ನಡೆಯುತ್ತಿರುವ ಅನ್ಯಾಯದ ವಿರೋಧಿಗಳು : ವಿ.ಗೀತಾ

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ಶಿಲ್ಪ, ನ್ಯಾಯಮೂರ್ತಿಗಳಾದ ಉಮೇಶ್, ಲತಾ ಕುಮಾರಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್ ಮುಂತಾದವರು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...