ವೆರ್ಗಾ ಕಾರ್ಮಿಕರ ಪಾದಯಾತ್ರೆಗೆ ಪೊಲೀಸರ ತಡೆ : ಸಿಐಟಿಯು ಖಂಡನೆ

Date:

ಕೋಲಾರ :ಲಾಭದಲ್ಲಿದ್ದ ಕೈಗಾರಿಕೆಯನ್ನು ಮುಚ್ಚಿದ್ದರಿಂದ ಕೆಲಸ ಕಳೆದುಕೊಂಡಿರುವ 81 ಕಾರ್ಮಿಕರಿಗೆ ಕೆಲಸ ನೀಡಲು ಒತ್ತಾಯಿಸಿ ಮಾಲೂರಿನಿಂದ ಬೆಂಗಳೂರಿಗೆ ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತಿದ್ದ ಕಾರ್ಮಿಕರನ್ನು ಹೊಸಕೋಟೆ ಬಳಿ ಬಂಧಿಸಿರುವುದನ್ನು ಸಿಐಟಿಯು ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.

ಮಾಲೂರು ಕೈಗಾರಿಕಾ ಪ್ರಾಂಗಣದಲ್ಲಿರುವ ವೆರ್ಗಾ ಅಟ್ಯಾಚ್‌ಮೆಂಟ್ ಲಿಮಿಟೆಡ್ ಕೈಗಾರಿಕೆಯು ಲಾಭದಾಯಕವಾಗಿ ನಡೆಯುತ್ತಿದ್ದರೂ, ಕೈಗಾರಿಕೆಯು ನಷ್ಠದಲ್ಲಿದೆ ಎಂದು ಸುಳ್ಳು ದಾಖಲೆಗಳನ್ನು ಸೃಷ್ಠಿಸಿ ಕೈಗಾರಿಕೆಯನ್ನು ಮುಚ್ಚಿದ್ದರಿಂದ 81 ಕಾರ್ಮಿಕರು ಕೆಲಸ ಕಳೆದುಕೊಂಡು ಬೀದಿಪಾಲಾಗಿದ್ದಾರೆ.

20 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಈ ಕಾರ್ಮಿಕರಿಗೆ ಕೆಲಸ ನೀಡುವಂತೆ ಒತ್ತಾಯಿಸಿ 21 ಆಗಸ್ಟ್ 2025 ರಿಂದ ಅಂದರೆ ಅಂದಾಜು 142 ದಿನಗಳಿಂದ ಕೈಗಾರಿಕೆಯ ಮುಂಭಾಗದಲ್ಲಿ ಶಾಂತಿಯುತವಾಗಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರೂ, ಬೇಡಿಕೆಗಳನ್ನು ಈಡೇರಿಸಲು ಯಾವುದೇ ಕೈಗೊಂಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ರಾಜ್ಯದಲ್ಲಿ ಜಾರಿಯಲ್ಲಿರುವ ಕಾನೂನುಗಳನ್ನು ನಿರಂತರವಾಗಿ ಉಲ್ಲಂಘನೆ ಮಾಡಿ, ಕಾರ್ಮಿಕರಿಗೆ ವಿನಾಕಾರಣ ತೊಂದರೆ ನೀಡುತ್ತಿರುವ ಮಾಲೀಕರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮೌನವಾಗಿರುವುದು ಸರಿಯಲ್ಲ. 81 ಕಾರ್ಮಿಕರಿಗೆ ಖಾಯಂ ಕೆಲಸ ನೀಡಬೇಕು ಮತ್ತು ಇತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಮಾಲೂರಿನಿಂದ ಬೆಂಗಳೂರಿಗೆ ಪಾದಯಾತ್ರೆಯನ್ನು ಹೋಗುತ್ತಿದ್ದ ಕಾರ್ಮಿಕರನ್ನು ವಿನಾಕಾರಣ ಬಂಧಿಸಿರುವುದು ಖಂಡನೀಯ. 

ಇದನ್ನು ಓದಿದ್ದೀರಾ..? ಕೇಂದ್ರ ಸರ್ಕಾರ ಕರಾಳ ಕಾಯ್ದೆ ರದ್ದು ಮಾಡುವವರೆಗೆ ಹೋರಾಟ : ಸಚಿವ ಬೈರತಿ ಸುರೇಶ್ 

ಕಾರ್ಮಿಕರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು, ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಿಐಟಿಯು ಜಿಲ್ಲಾ ಅಧ್ಯಕ್ಷರಾದ ಪಿ.ಶ್ರೀನಿವಾಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...