ಹಳ್ಳಿಗಳ ಸಂಪರ್ಕ ರಸ್ತೆಗಳಿಗೆ 200 ಕೋಟಿ ಅನುದಾನದಲ್ಲಿ ಅಭಿವೃದ್ಧಿ: ಕೊತ್ತೂರು ಮಂಜುನಾಥ್

Date:

ಕೋಲಾರ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಹಳ್ಳಿಗಳ ರಸ್ತೆಗಳ ಅಭಿವೃದ್ಧಿಗಾಗಿಯೇ ಸುಮಾರು 200 ಕೋಟಿ ಅನುದಾನವನ್ನು ತಂದಿದ್ದು ಪ್ರತಿಯೊಂದು ಹಳ್ಳಿಗಳಿಗೂ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಮೊದಲ ಅಧ್ಯತೆ ನೀಡಲಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

ತಾಲೂಕಿನ ಸೂಲೂರು ಗ್ರಾಮ ಪಂಚಾಯತಿಯ ಮೊದಲ ಮಹಡಿಯ ಕಟ್ಟಡವನ್ನು ಉದ್ಘಾಟನೆ ಹಾಗೂ ತಾಲೂಕಿನ ವಿವಿಧ ಭಾಗಗಳಲ್ಲಿ 4.35 ಕೋಟಿ ಅನುದಾನದ ಗುದ್ದಲಿ ಪೊಜೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ ಸಿಎಂ.ಡಿಸಿಎಂ, ಉಸ್ತುವಾರಿ ಸಚಿವರು ಅಭಿವೃದ್ಧಿಯ ವಿಚಾರದಲ್ಲಿ ಹಿಂದೆ ಹೋಗಲ್ಲ ಎಷ್ಟು ಅನುದಾನ ಕೇಳಿದರು ಕೊಡಲಿಕ್ಕೆ ಸಿದ್ದವಿದ್ದಾರೆ ಅವರನ್ನು ಬಳಸಿಕೊಂಡು ಮಾದರಿ ತಾಲೂಕು ಮಾಡುವುದು ನಮ್ಮ ಗುರಿಯಾಗಿದೆ ಎಂದರು.

ಗ್ರಾಮ ಪಂಚಾಯತಿಗಳ ಆಡಳಿತವು ರಾಷ್ಟ್ರಪತಿಗಳಿಗೆ ಇರುವ ಅಧಿಕಾರ ಇದ್ದಂತೆ ಅವಕಾಶವಿದ್ದಾಗ ಒಳ್ಳೆಯ ಕೆಲಸಗಳನ್ನು ಮಾಡಿ ಮತ್ತೆ ಸದಸ್ಯರು ಎಲ್ಲರೂ ಮರು ಆಯ್ಕೆಯಾಗುವಂತೆ ಮಾಡಬೇಕು ಗ್ರಾಮಗಳಲ್ಲಿ ಯಾವುದೇ ಸಮಸ್ಯೆಗಳು ಸೇರಿದಂತೆ ಅಭಿವೃದ್ಧಿ ಕೆಲಸವಾಗಬೇಕಾದರೂ ಸಂಬಂಧಿಸಿದ ಗ್ರಾಪಂ ಮೂಲಕವಾಗಲಿ ಅಥವಾ ನೇರವಾಗಿ ನಮ್ಮಗಳ ಗಮನಕ್ಕೆ ತಂದರೆ ಪರಿಹಾರ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಕೇಂದ್ರದಲ್ಲಿ ಯುಪಿಎ ಸರ್ಕಾರವು 2004 ರಿಂದ 2014ರ ಅವಧಿಯಲ್ಲಿ ಮನಮೋಹನ್ ಸಿಂಗ್ ಅವರು ದೂರದೃಷ್ಟಿಯಿಂದ ಗ್ರಾಮ ಪಂಚಾಯತಿಗಳಿಗೆ ವಿಶೇಷ ಅನುದಾನವನ್ನು ನೀಡುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಆಧ್ಯತೆ ನೀಡಲಾಗಿತ್ತು ಅದರ ಭಾಗವಾಗಿಯೇ ನರೇಗಾ ಯೋಜನೆಯನ್ನು ಮಾಡಲಾಗಿತ್ತು ಪ್ರತಿಯೊಬ್ಬ ಖಾತೆಗೆ ಹಣ ಬರುವಂತೆ ಮಾಡಿದ್ದಾರೆ ಇದು ಗ್ರಾಪಂ ಮೂಲಕ ಬಡವರ ಪರವಾದ ಯೋಜನೆಯಾಗಿತ್ತು ಎಂದರು

ಕೋಲಾರ ತಾಲೂಕಿನ ವ್ಯಾಪ್ತಿಯಲ್ಲಿ ರಿಂಗ್ ರಸ್ತೆ ನಿರ್ಮಾಣಕ್ಕೆ 2.84 ಕೋಟಿ ಮಂಜೂರು ಮಾಡಿ ಈಗಾಗಲೇ ಡಿಪಿಆರ್ ಗೆ ಕಳಸಲಾಗಿದೆ, ಕೋರಗಂಡಹಳ್ಳಿ ಮತ್ತು ಕೋನೇಪುರ ಭಾಗದಲ್ಲಿ 60 ಎಕರೆ ಜಾಗದಲ್ಲಿ ಎಪಿಎಂಸಿಗೆ ಜಾಗವು ಮಂಜೂರು ಮಾಡಲು ಸರ್ಕಾರಕ್ಕೆ ಅನುಮೋದನೆಗೆ ಕಳಸಲಾಗಿದ್ದು ಆದಷ್ಟು ಬೇಗ ಪ್ರಾರಂಭವಾಗಲಿದ್ದು ಹಿಂದೆ ದಿವಂಗತ ಸಿ.ಬೈರೇಗೌಡರ ಕಾಲದಲ್ಲಿನ ಆಡಳಿತವನ್ನು ಮತ್ತೊಮ್ಮೆ ನೋಡುವ ಸೌಭಾಗ್ಯವನ್ನು ಈ ಕಾಂಗ್ರೆಸ್ ಸರ್ಕಾರದಲ್ಲಿ ನೋಡಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಸೂಲೂರು ಗ್ರಾಪಂ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್ ಮಾತನಾಡಿ ಈಗಾಗಲೇ ಗ್ರಾಪಂಗೆ ಗಾಂಧಿ ಪುರಸ್ಕಾರ ಪ್ರಶಸ್ತಿ ಬಂದಿದೆ ಇವತ್ತು 5 ಕೋಟಿ ಅನುದಾನದಲ್ಲಿ ಸೂಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಳ್ಳಿಗಳ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಜಿಲ್ಲೆಯಲ್ಲಿ ಮಾದರಿ ಗ್ರಾಪಂ ಮಾಡಲು ಎಲ್ಲರೂ ಸಹಕಾರ ಮಾಡಿದ್ದು ಎಲ್ಲರಿಗೂ ಧನ್ಯವಾದಗಳು ಎಂದರು.

ತಾಲೂಕಿನ ಚೌಡೇನಹಳ್ಳಿ- ದೊಡ್ಡವಲಬ್ಬಿ- ಕಲ್ಕೆರೆ ಮಾರ್ಗವಾಗಿ ಬೆಳಮಾರನಹಳ್ಳಿ ಮುಖ್ಯರಸ್ತೆಗೆ 175ಲಕ್ಷ, ತಲಗುಂದ- ಚಲ್ಲಹಳ್ಳಿ ಮಾರ್ಗವಾಗಿ ನುಗ್ಗಲಪುರವರೆಗೆ ರಸ್ತೆಗೆ 150 ಲಕ್ಷ, ಬೆತ್ತನಿ-ಚೌಡದೇನಹಳ್ಳಿ ಮಾರ್ಗವಾಗಿ ಮಾಲೂರು ಮುಖ್ಯ ರಸ್ತೆಯವರಗೆ ರಸ್ತೆಗೆ 60 ಲಕ್ಷ, ಅರಾಭಿಕೊತ್ತನೂರು ಗ್ರಾಮ ಪಂಚಾಯಿತಿ ವೆಂಕಟಾಪುರ ಗ್ರಾಮದಲ್ಲಿ ಸಿಸಿ ರಸ್ತೆಗೆ 25 ಲಕ್ಷ, ವಕ್ಕಲೇರಿ ಗ್ರಾಮ ಪಂಚಾಯಿತಿ ಗುರಗಂಜಿಗುರ್ಕಿ ಗ್ರಾಮದಲ್ಲಿ ಸಿಸಿ ರಸ್ತೆಗೆ 25 ಲಕ್ಷ ಸೇರಿದಂತೆ ಒಟ್ಟು 435 ಲಕ್ಷಗಳ ಗುದ್ದಲಿ ಪೂಜೆಗೆ ಚಾಲನೆ ನೀಡಲಾಯಿತು.

ಇದನ್ನು ಓದಿದ್ದೀರಾ..? ಸಿಎಂ ಗೊಂದಲ ನಿವಾರಣೆ | ಹೈಕಮಾಂಡ್ ನಿರ್ಧಾರಕ್ಕೆ ನಾವು ಎಲ್ಲರೂ ಬದ್ಧ: ಸಚಿವ ಕೆ.ಎಚ್‌. ಮುನಿಯಪ್ಪ

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ.ಶಿವಕುಮಾರ್, ತಾಲೂಕು ಅಧ್ಯಕ್ಷ ವೇಮಗಲ್ ಮುನಿಯಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ವೇಮಗಲ್ ನರಸಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಉರಟ ಅಗ್ರಹಾರ ಚೌಡರೆಡ್ಡಿ, ಪಿಡಿಒ ಬಾಲಾಜಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಕಾರ್ಯದರ್ಶಿ ವೀರೇಂದ್ರ ಪಾಟೀಲ್ ಮುಖಂಡರಾದ ರಾಮಸಂದ್ರ ಕುಮಾರ್, ಚಿನ್ನಾಪುರ ನಾರಾಯಣಸ್ವಾಮಿ ಎಇಇ ಗೋವಿಂದಪ್ಪ ತಾಪಂ ಇಒ ಮಂಜುನಾಥ್ ಸೇರಿದಂತೆ ಗ್ರಾಪಂ ಸದಸ್ಯರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...