ಹೊನ್ನೇನಹಳ್ಳಿ ಪಿಡಿಒ ಹರೀಶ್ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಕೆ.ಆರ್.ಎಸ್ ಸಂಘಟನೆಯಿಂದ ಪ್ರತಿಭಟನೆ

Date:

ಕೋಲಾರ: ರಾಜಕೀಯ ಪಕ್ಷಗಳ ಏಜೆಂಟ್ ನಂತೆ ವರ್ತಿಸುವ ಹಾಗೂ ಅಕ್ರಮವಾಗಿ ಲೂಟಿಯಲ್ಲಿ ತೊಡಗಿರುವ ಹೊನ್ನೇನಹಳ್ಳಿ ಗ್ರಾಪಂ ಪಿಡಿಒ ಹರೀಶ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಿಪಬ್ಲಿಕನ್ ಸಂಘಟನೆಯ ನೇತೃತ್ವದಲ್ಲಿ ಗುರುವಾರ ಹೊನ್ನೇನಹಳ್ಳಿ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಸಿ ತಾಪಂ ಇಒ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಅಧ್ಯಕ್ಷ ಚಿಕ್ಕನಾರಾಯಣ ಮಾತನಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ರಮವಾಗಿ ರಾಜಕಾಲುವೆ ಒತ್ತುವರಿ, ಇ ಖಾತೆಗಳ ಹೆಸರಲ್ಲಿ ಭ್ರಷ್ಟಾಚಾರ, ಭೂಪರಿವರ್ತನೆ, ನರೇಗಾದಲ್ಲಿ ಭ್ರಷ್ಟಾಚಾರ, ಸರ್ಕಾರಿ ಗುಂಡು ತೋಪುಗಳನ್ನು ಬಲಾಢ್ಯರಿಗೆ ಮಾಡಿಕೊಟ್ಟಿದ್ದಾರೆ ದಲಿತರ ಭೂಮಿ ವಂಚನೆ ಮಾಡಿರುವ ಪಿಡಿಒ ವಿರುದ್ದ ಲೋಕಾಯುಕ್ತ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಕೂಡಲೇ ಅವರನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿದರು.

ತಾಲೂಕಿನ ಹೊನ್ನೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಡುಪಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಜಲ್ಲಿ ಕ್ರಷರ್ ಗೆ ಅನುಮತಿ ನೀಡಿದ್ದಾರೆ ಕೂಡಲೇ ಪಂಚಾಯತಿಯಲ್ಲಿ ನಡೆದಿರುವ ಅಕ್ರಮ ಜಮೀನುಗಳ ಬಗ್ಗೆ ಸರ್ವೆ ಮಾಡಿಸಿ ಸರ್ಕಾರಿ ಜಮೀನು ಉಳಿಸಿ ಜಾನುವಾರುಗಳಿಗೆ ಮೀಸಲಿಟ್ಟು ದಲಿತರಿಗೆ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಕ್ರಮವಹಿಸುವಂತೆ ತಾಪಂ ಇಒ ಮಂಜುನಾಥ್ ಅವರನ್ನು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿ ಸ್ವೀಕರಿಸಿ ಮಾತನಾಡಿದ ತಾಪಂ ಇಒ ಮಂಜುನಾಥ್ ಮನವಿಯನ್ನು ಸಂಬಂಧಿಸಿದ ಅಧಿಕಾರಿಗಳಿಗೆ ವರ್ಗಾವಣೆ ಮಾಡಿ ಆದಷ್ಟು ಬೇಗ ಸರ್ವೆ ಮಾಡಿಸಲಾಗುತ್ತದೆ ಪಿಡಿಒ ಹರೀಶ್ ಅವರನ್ನು ವರ್ಗಾವಣೆ ಮಾಡುವುದು ನನಗೆ ಅಧಿಕಾರವಿಲ್ಲ ಜಿಪಂ ಸಿಇಒ ಗಮನಕ್ಕೆ ತರಲಾಗುತ್ತದೆ ಎಂದರು.

ಇದನ್ನು ಓದಿದ್ದೀರಾ..? 2028ರಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ: ಜಮೀರ್ ಅಹಮದ್ ಖಾನ್

ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಮಿಕ ಘಟಕದ ಅಧ್ಯಕ್ಷ ಜಿ ರಾಮಚಂದ್ರ, ಪ್ರಧಾನ ಕಾರ್ಯದರ್ಶಿ ಪಿ‌.ನಾರಾಯಣ್, ರಾಜ್ಯ ಸಂಚಾಲಕ ವಿ.ಮಂಜುನಾಥ್, ಜಿಲ್ಲಾ ಅಧ್ಯಕ್ಷ ವಿ.ಅಮರೇಶದ, ಬಂಗಾರಪೇಟೆ ತಾ ಅಧ್ಯಕ್ಷ ತಿಪ್ಪಣ್ಣ, ಸಂಘಟನಾ ಕಾರ್ಯದರ್ಶಿ ಕೃಷ್ಣಮೂರ್ತಿ, ಉಮಾರಾಣಿ ಮುಂತಾದವರು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...