ಅಂಬೇಡ್ಕರ್ ಸಮತಾ ದಳ ಸಂಘಟನೆಯಿಂದ ನ.23ಕ್ಕೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

ಬೇತಮಂಗಲ: ಇಲ್ಲಿನ ಅಶ್ವಿನಿ ಕಲ್ಯಾಣ ಮಂಟಪದಲ್ಲಿ ಇದೇ ತಿಂಗಳ 23 ಭಾನುವಾರ ರಂದು ಡಾ. ಬಿಆರ್ ಅಂಬೇಡ್ಕರ್ ಸಮತಾ ದಳ ಸಂಘಟನೆಯಿಂದ ಪಿ ಎಸ್ ಮೆಡಿಕಲ್ ಕಾಲೇಜು ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸನ ಶಿಬಿರ ಹಮ್ಮಿಕೊಂಡಿದ್ದು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ರಾಜ್ಯಾಧ್ಯಕ್ಷ ಸಂದಾ ಮುನಿಸ್ವಾಮಿ ತಿಳಿಸಿದರು.

ಪಟ್ಟಣದಲ್ಲಿ ಪತ್ರಿಕ ಹೇಳಿಕೆ ನೀಡಿದ ಅವರು, ನವಂಬರ್ 23 ಭಾನುವಾರ ಬೆಳಗ್ಗೆ 9 ಗಂಟೆಯಿಂದ ಸಂಜೆವರೆಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದು ಕೆಜಿಎಫ್ ಹಾಗೂ ವಿವಿಧ ತಾಲೂಕುಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನುರಿತ ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳಲು ಮನವಿ ಮಾಡಿದ್ದಾರೆ.

ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡ ರೋಗಿಗಳಿಗೆ ಯಾವುದೇ ಹೆಚ್ಚಿನ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ ಅವಶ್ಯಕತೆ ಇದ್ದಲ್ಲಿ ತಕ್ಷಣ ಪಿಇಎಸ್ ಮೆಡಿಕಲ್ ಆಸ್ಪತ್ರೆ ಮೂಲಕವೇ ಚಿಕಿತ್ಸೆ ನೀಡಲಾಗುವುದು ಇದಕ್ಕೆ ತಪಾಸಣೆ ನಡೆದ ಎರಡು ದಿನಗಳಲ್ಲಿ ದಿನಾಂಕ ನಿಗದಿಪಡಿಸಿ ವಾಹನಗಳ ವ್ಯವಸ್ಥೆ ಮಾಡಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಯೊಬ್ಬರಿಗೂ ಆರೋಗ್ಯವೇ ಬಹುಮುಖ್ಯವಾಗಿದ್ದು, ಇಂತಹ ಶಿಭಿರಗಳಿಂದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಹಾಗೂ ವೈದ್ಯಕೀಯ ಚಿಕಿತ್ಸೆ ದೊರೆಯಲಿದೆ, ಬಡ ಕೂಲಿ ಕಾರ್ಮಿಕರಿಗೆ ನೆರವಾಗುತ್ತದೆ ಎಂಬ ಉದ್ದೇಶದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದೇವೆ ಎಂದರು.

ಇದನ್ನು ಓದಿದ್ದೀರಾ..? ಕೋಲಾರ | ಜಿಲ್ಲೆಯ ಆರು ಸ್ಥಳದಲ್ಲಿ ಲೋಕಾಯುಕ್ತ ದಾಳಿ

ಈ ಪತ್ರಿಕಾಗೋಷ್ಠಿಯಲ್ಲಿ ಅಂಬೇಡ್ಕರ್ ಸಮತಾದಳ ಸಂಘಟನೆಯ ರಾಜ್ಯಾಧ್ಯಕ್ಷ ಸಂದಾ ಮುನಿಸ್ವಾಮಿ, ಕೆಜಿಎಫ್ ತಾಲೂಕು ಅಧ್ಯಕ್ಷ ಕವರಗಾನಹಳ್ಳಿ ಬಾಲ ಸುಭ್ರಮಣಿ, ಬಂಗಾರಪೇಟೆ ತಾಲೂಕು ಅಧ್ಯಕ್ಷ ಬಾರ್ಲಿ ಮುನಿವೆಂಕಟಸ್ವಾಮಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...