ಕೋಲಾರ: ನಿಗದಿತ ಸಮಯ ಮುಗಿದರು ಮಾಹಿತಿ ನೀಡದೆ ಇರೋದಕ್ಕೆ ಕರ್ನಾಟಕ ಮಾಹಿತಿ ಆಯೋಗವು ಶ್ರೀನಿವಾಸಪುರ ತಾಲೂಕಿನ ಅರಿಕುಂಟೆ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ 25 ಸಾವಿರ ರೂ.ದಂಡ ವಿಧಿಸಿದೆ.
ತಾಲೂಕಿನ ಅರಾಭಿಕೊತ್ತನೂರು ಗ್ರಾಮದ ಆರ್ಟಿಐ ಕಾರ್ಯಕರ್ತ ಹಾಗೂ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಕೋಲಾರ ಜಿಲ್ಲಾಧ್ಯಕ್ಷ ಸಿ.ಮೋಹನ್ ಕುಮಾರ್ ಅವರಿಗೆ ಮಾಹಿತಿ ನಿಗದಿತ ಸಮಯಕ್ಕೆ ನೀಡದ ಹಿನ್ನೆಲೆಯಲ್ಲಿ ಅವರು ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಇದನ್ನು ಓದಿದ್ದೀರಾ..? ಕಲೆ ಮತ್ತು ವಾಸ್ತುಶಿಲ್ಪದಿಂದ ಇತಿಹಾಸವನ್ನು ಶ್ರೀಮಂತಗೊಳಿಸಿದ ಅಮರ ಶಿಲ್ಪಿ ಜಕಣಾಚಾರಿ
ಈ ಹಿನ್ನೆಲೆಯಲ್ಲಿ ಮೇಲ್ವಿಚಾರಣೆ ನಡೆಸಿದ ಆಯೋಗವು, ಈ ಬಗ್ಗೆ ನೋಟಿಸ್ ಕೂಡ ಜಾರಿ ಮಾಡಿದ್ದರು ಮಾಹಿತಿ ನೀಡದ ಹಿನ್ನೆಲೆಯಲ್ಲಿ ಎಲ್ಲಾ ಅಂಶಗಳನ್ನು ಗಂಭೀರವನ್ನಾಗಿ ಪರಿಗಣಿಸಿ ಅರಿಕುಂಟೆ ಗ್ರಾಪಂ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗರ 25 ಸಾವಿರ ರೂ. ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ.





