ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

Date:

ಕೋಲಾರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2024-25 ಸಾಲಿನ ಸ್ವಾವಲಂಬಿ ಸಾರಥಿ ಹಾಗೂ ಗಂಗಾ ಕಲ್ಯಾಣ ಯೋಜನೆಯ ಮೂಲಕ ಫಲಾನುಭವಿಗಳಿಗೆ ಟ್ಯಾಕ್ಸಿ, ‌ಆಟೋ, ಕೊಳವೆಬಾವಿಗೆ ಯಂತ್ರೋಪಕರಣಗಳು ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ನಗರದ ಶಾಸಕರ ಕಛೇರಿ ಮುಂದೆ ಸೋಮವಾರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಪ್ಸರ್ ಮಾತನಾಡಿ, ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆ ಹಾಗೂ ಅಭಿವೃದ್ಧಿ ‌ನಿಗಮದಿಂದ ಶಾಸಕ ಕೊತ್ತೂರು ಮಂಜುನಾಥ್ ಮುಂದಾಳತ್ವದಲ್ಲಿ ಸೌಲಭ್ಯ ವಿತರಿಸಲಾಗಿದೆ ಎಂದರು

ಕೋಲಾರ ತಾಲ್ಲೂಕಿನ ನಿರುದ್ಯೋಗಿ ನಾಲ್ವರು ಯುವಕರಿಗೆ ಟ್ಯಾಕ್ಸಿ, ಒಂದು ಆಟೋ ರಿಕ್ಷಾ,‌ ಗಂಗಾ ಕಲ್ಯಾಣ ಯೋಜನೆಯಡಿ ಐದು ಮಂದಿ ಬಡ ರೈತರಿಗೆ ಕೊಳವೆ ಬಾವಿಗೆ ಯಂತ್ರೋಪಕರಣಗಳ ‌ಸಾಮಗ್ರಿಗಳು ಹಾಗೂ ಅರಿವು ಸಾಲ ಯೋಜನೆಯ ೧ ಕೋಟಿ ಸಾಲ ಸೌಲಭ್ಯ ನೀಡಲಾಗಿದೆ ಜೊತೆಗೆ ಬಡವರು ಶಿಕ್ಷಣ ಮುಂದುವರಿಸಲು ಸಹಾಯ ಮಾಡಲಾಗಿದೆ ಎಂದು ತಿಳಿಸಿ ಇದರ ಸದುಪಯೋಗವನ್ನು ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು.

ಇದನ್ನು ಓದಿದ್ದೀರಾ..? ರಾಜ್ಯ ಸರಕಾರದ ಕೈಗಾರಿಕೆಗಾಗಿ ಬಲವಂತದ ಭೂ ಸ್ವಾಧೀನದ ಸಿಪಿಐಎಂ ಪಕ್ಷ ಖಂಡನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಅಲ್ಪಸಂಖ್ಯಾರ ‌ಅಭಿವೃದ್ಧಿ ನಿಗಮದ ರಾಜ್ಯ ನಿರ್ದೇಶಕ ಅಬ್ದುಲ್ ಖಯ್ಯಾಮ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಮುಲ್ ನಿರ್ದೇಶಕ ಷಂಷೀರ್, ಗ್ಯಾರಂಟಿ ಸಮಿತಿ ಜಿಲ್ಲಾ ಅಧ್ಯಕ್ಷ ವೈ ಶಿವಕುಮಾರ್, ಟ್ಯಾಕ್ಟರ್ ಮುಸ್ತಫಾ, ಇಮ್ರಾನ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ,‌ ಕಾರ್ಯದರ್ಶಿ ವೀರೇಂದ್ರ ಪಾಟೀಲ್, ಮುಖಂಡರಾದ ಸೈಫ್ ಉಲ್ಲಾ ಷರೀಫ್, ಸಾಧೀಕ್, ಚಿನ್ನಾಪುರ ನಾರಾಯಣಸ್ವಾಮಿ, ನದೀಂ, ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...