ಆಗ್ನೇಯ ಪದವೀಧರರ ಕ್ಷೇತ್ರ ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಪೂರ್ವಭಾವಿ ಸಭೆ

Date:

ಕೋಲಾರ: ಆಗ್ನೇಯ ಪದವೀಧರರ ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ‌ ಕನಿಷ್ಠ ಐದು ಸಾವಿರ ಮತದಾರರನ್ನು ನೋಂದಣಿ ಮಾಡಿಸಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠ ಗೊಳಿಸುವಂತೆ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ ತಿಳಿಸಿದರು

ನಗರದ ಹೊರವಲಯದ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಗೃಹ ಕಛೇರಿಯಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯ ಸಂಬಂಧಿಸಿದಂತೆ ಪೂರ್ವ ತಯಾರಿ ಸಭೆಯಲ್ಲಿ ಮಾತನಾಡಿದ ಅವರು ವಿಧಾನಸಭೆ ಅಷ್ಟೇ ಪ್ರಾಮುಖ್ಯತೆಯನ್ನು ವಿಧಾನ ಪರಿಷತ್ತಿಗೂ ನೀಡಬೇಕು ಪಕ್ಷದಿಂದ ಮತದಾರರನ್ನು ನೋಂದಣಿ ಮಾಡಿಸಿ ಮುಂದಿನ ಚುನಾವಣೆಯಲ್ಲಿ ಗೆಲ್ಲಬೇಕು ಅದಕ್ಕೆ ಕಾರ್ಯಕರ್ತರು ಮುಖಂಡರು ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಮುಂದಿನ ವರ್ಷ ನಡೆಯಲಿರುವ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಮತದಾರರನ್ನು ನೋಂದಣಿಯನ್ನು ಮಾಡಿಸಿ ಕಾಂಗ್ರೆಸ್ ಪಕ್ಷವನ್ನು ಗಟ್ಟಿಮಾಡಕೊಳ್ಳಬೇಕು ಪ್ರತಿ ಗ್ರಾಮ ಪಂಚಾಯತಿಯ ಹಂತದಲ್ಲಿ ಆಂದೋಲನ ಮಾಡಬೇಕು ನಗರದಲ್ಲಿ ವಾರ್ಡ್ ವಾರು ಮಾಡಿಸಬೇಕು ಈ ಭಾಗದಲ್ಲಿ ನಾಲ್ಕು ಜನ ಎಂಎಲ್ಸಿಗಳನ್ನು ಮಾಡಬೇಕು ಅವಾಗ ಮಾತ್ರವೇ ಅಭಿವೃದ್ಧಿಗೆ ಸಹಾಯವಾಗುತ್ತದೆ ಅದಕ್ಕಾಗಿ ಎಲ್ಲರೂ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್ ಮಾತನಾಡಿ ಪಕ್ಷ ಸಂಘಟನೆಗೆ ಇದು ಸಹಕಾರಿಯಾಗಿದೆ ಯಾವುದೇ ಪ್ರಮುಖ ಮಸೂದೆ ಜಾರಿ ಮಾಡಲು ವಿಧಾನ ಪರಿಷತ್ ಸಂಖ್ಯೆಯು ಮುಖ್ಯವಾಗಿದೆ ಹಿಂದೆ ಈ ಚುನಾವಣೆಗಳನ್ನು ಕಾಂಗ್ರೆಸ್ ಪಕ್ಷವು ಗಂಭೀರವಾಗಿ ಪರಿಗಣಿಸಿಲ್ಲ ಇವತ್ತು ಗೆಲ್ಲುವ ಸ್ಥಿತಿಗೆ ಬಂದಿದ್ದೇವೆ ಐದು ಜಿಲ್ಲೆಗಳ ವ್ಯಾಪ್ತಿಯಲ್ಲಿ ಈ ಕ್ಷೇತ್ರವಿದ್ದು ಶಿಕ್ಷಣ ಸಂಸ್ಥೆಗಳು ಕಾಂಗ್ರೆಸ್ ಪಕ್ಷದ ಅಧೀನದಲ್ಲಿ ಇದ್ದು ಹಿಂದೆ ತ್ರಿಕೋನ ಸ್ಪರ್ಧೆ ಇತ್ತು ಮುಂದೆ ಮೈತ್ರಿಯಾಗಿ ಸ್ಪರ್ಧೆಯಲ್ಲಿ ಇದ್ದು ಕಾಂಗ್ರೆಸ್ ಪಕ್ಷದಿಂದ ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಳ್ಳಬೇಕು ಈ ವ್ಯಾಪ್ತಿಯ 33 ವಿಧಾನಸಭಾ ಕ್ಷೇತ್ರದಲ್ಲಿ ಮುಂದೆ ಕನಿಷ್ಠ 33 ಸಾವಿರ ಮತದಾರರನ್ನು ಕಾಂಗ್ರೆಸ್ ಪಕ್ಷವು ಮಾಡಿಸಬೇಕು ಎಂದರು.

ಇದನ್ನು ಓದಿದ್ದೀರಾ…? 24ರಂದು 200 ಕೋಟಿ ರೂಪಾಯಿ ವೆಚ್ಚದ ಹೈಟೆಕ್ ರೇಷ್ಮೆಗೋಡು ಮಾರುಕಟ್ಟೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಈ ಸಂದರ್ಭದಲ್ಲಿ ಮಾಲೂರು ಶಾಸಕ ಕೆ.ವೈ ನಂಜೇಗೌಡ, ಮಾಜಿ ಎಂಎಲ್ಸಿ ನಾರಾಯಣಸ್ವಾಮಿ, ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ವಿ ಗೌತಮ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಸೈಯದ್ ಅಫ್ಸರ್, ಸೀಸಂದ್ರ ಗೋಪಾಲಗೌಡ, ಎಸ್ಟಿ ಘಟಕದ ಜಿಲ್ಲಾ ಅಧ್ಯಕ್ಷ ಅಂಬರೀಷ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಮುಂತಾದವರು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...