ಎನ್‌ಸಿಸಿ ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ

Date:

ದೊಡ್ಡಬಳ್ಳಾಪುರ: ಎನ್‌.ಸಿ.ಸಿ ದಿನಾಚರಣೆಯ ಅಂಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ಎನ್‌.ಸಿ.ಸಿ ವಿದ್ಯಾರ್ಥಿಗಳು ಐದು ಕರ್ನಾಟಕ ಎನ್‌ಸಿಸಿ ಬೆಟಾಲಿಯನ್‌ರ ಸಂಯುಕ್ತ ಆಶ್ರಯದಲ್ಲಿ ಸೈಕಲ್ ಜಾಥಾವನ್ನು ಆಯೋಜಿಸಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸದಾಶಿವ ರಾಮಚಂದ್ರ ಗೌಡ ಅವರು ಸೈಕಲ್ ಜಾಥಾಗೆ ಚಾಲನೆ ನೀಡಿ ಮಾತನಾಡಿ, “ಎನ್‌ಸಿಸಿ ಕೇವಲ ಶಿಸ್ತುಮಯ ಬದುಕಿಗೆ ಮಾತ್ರ ಸೀಮಿತವಲ್ಲ, ಇದು ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ. ಇಂತಹ ಸೈಕಲ್ ಜಾಥಾಗಳು ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ ಆರೋಗ್ಯದ ಮಹತ್ವವನ್ನು ಸಮಾಜದ ಮುಂದಿಡುತ್ತವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆರೋಗ್ಯವಂತ ಯುವಶಕ್ತಿ ರಾಷ್ಟ್ರದ ದೊಡ್ಡ ಬಲವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಅಗತ್ಯ” ಎಂದು ತಿಳಿಸಿದರು.

ಆರೋಗ್ಯ ಜಾಗೃತಿ ಹಾಗೂ ಸದೃಢ ಜೀವನಶೈಲಿಯ ಸಂದೇಶವನ್ನು ಸಾರುವ ಉದ್ದೇಶದಿಂದ ಶ್ರೀ ಕೊಂಗದಿಯಪ್ಪ ಕಾಲೇಜಿನಿಂದ ಆರಂಭವಾದ ಸೈಕಲ್ ಜಾಥಾ ಮಾದಗೊಂಡನಹಳ್ಳಿ ವರೆಗೆ ಸಾಗಿತ್ತು. ಈ ಸೈಕಲ್ ಜಾಥಾದಲ್ಲಿ ಸುಮಾರು 100ಕ್ಕೂ ಹೆಚ್ಚು ಎನ್‌.ಸಿ.ಸಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು, ಆರೋಗ್ಯ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಇದನ್ನು ಓದಿದ್ದೀರಾ..? ಡಿಸೆಂಬರ್.‌1ರಿಂದ ಆಶಾ ಕಾರ್ಯಕರ್ತೆಯರು, ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಕೊಂಗಾಡಿಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ್, ಐದು ಕರ್ನಾಟಕ ಎನ್‌.ಸಿ.ಸಿ ಬೆಟಾಲಿಯನ್ ಅಧಿಕಾರಿ ಬೊದಿ, ಸರ್ಕಾರಿ ಕಾಲೇಜಿನ ಎನ್‌.ಸಿ.ಸಿ ಅಧಿಕಾರಿ ಡಾ.ರಾಜಕುಮಾರ್, ಕೊಂಗಾಡಿಯಪ್ಪ ಕಾಲೇಜಿನ ಎನ್‌.ಸಿ.ಸಿ ಅಧಿಕಾರಿ ಶ್ರೀಕಾಂತ್, ಕಾಲೇಜಿನ ಐಕ್ಯೂಎಸಿ ಘಟಕದ ಸಂಚಾಲಕರಾದ ಡಾ.ಬಿ.ಆರ್. ಗಂಗಾಧರಯ್ಯ, ಪ್ರಾಧ್ಯಾಪಕರಾದ ಉಮೇಶ್.ವೈ, ಮಧುಸೂಧನ್,ಗವಿಗಂಗಾಧರಯ್ಯ, ಪಾಪಣ್ಣ, ಮುನಿರಾಜ್, ಸತೀಶ್ ಕುಮಾರ್, ವಿನೋದ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...