ಕೋಲಾರ: ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಸಚಿವ ಸಂಪುಟದ ಪುನಃರಚನೆಯ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಹುತ್ತೂರು ಹೋಬಳಿಯ ಕಾಂಗ್ರೆಸ್ ಮುಖಂಡರು ನಗರದ ಕೋಲಾರಮ್ಮ ದೇವಸ್ಥಾನದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿದರು,
ಈ ಸಂದರ್ಭದಲ್ಲಿ ಹುತ್ತೂರು ಗ್ರಾಪಂ ಮಾಜಿ ಅಧ್ಯಕ್ಷ ವಿಟ್ಟಪ್ಪನಹಳ್ಳಿ ಕೋಟೆ ನಾರಾಯಣಸ್ವಾಮಿ ಮಾತನಾಡಿ ಎಸ್.ಎನ್ ನಾರಾಯಣಸ್ವಾಮಿ ಅವರು ಬಂಗಾರಪೇಟೆ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಸತತವಾಗಿ ಮೂರನೇ ಬಾರಿಗೆ ಶಾಸಕರಾಗಿ ಜಿಲ್ಲೆಯಲ್ಲಿ ಗೆದ್ದಿರುವ ನಾಲ್ಕು ಶಾಸಕರಲ್ಲಿ ಹಿರಿಯ ಶಾಸಕರಾಗಿದ್ದಾರೆ ಈ ಹಿಂದೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಪ್ರಸ್ತುತ ಹಣಕಾಸು ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಅನುಭವವಿರುವ ರಾಜಕಾರಣಿಯಾಗಿದ್ದು ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಗೆ ಅವಕಾಶ ದೊರಕಿಸಿ ಕೊಡಬೇಕೆಂದು ಮನವಿ ಮಾಡಿದರು.
ಹರಟಿ ಗ್ರಾಪಂ ಮಾಜಿ ಅಧ್ಯಕ್ಷ ಮಲ್ಲಂಡಹಳ್ಳಿ ನಾಗಭೂಷಣ ಬಾಬು ಮಾತನಾಡಿ ಕೋಲಾರ ಜಿಲ್ಲೆಯಲ್ಲಿ ಎಲ್ಲಾ ಶಾಸಕರನ್ನು ಹಾಗೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಮಾಡುವಂತಹ ಅನುಭವಿಗೆ ಅವಕಾಶ ಕೊಟ್ಟರೆ ಜಿಲ್ಲೆಯಲ್ಲಿನ ಹಿಂದುಳಿದ ವರ್ಗ, ಶೋಷಿತ ಸಮುದಾಯಗಳು, ಬಡವರ ಜನಾನುರಾಗಿ ಕೆಲಸ ಮಾಡಲಿದ್ದಾರೆ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಖಂಡ ಹೊಳಲಿ ಚಲಪತಿ ಮಾತನಾಡಿ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜನ ಮೆಚ್ಚುವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರಿಂದಾಗಿ ಸತತವಾಗಿ ಮೂರನೇ ಬಾರಿಗೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದ ಮಟ್ಟದಲ್ಲಿ ಒತ್ತಡ ತಂದು ಜಿಲ್ಲೆಯಲ್ಲಿ ಅಭಿವೃದ್ಧಿ ಹರಿಕಾರ ಎನಿಸಿಕೊಂಡಿದ್ದಾರೆ ಯಾವುದೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಾ ಮುಖಂಡರು ಹಾಗೂ ಕಾರ್ಯಕರ್ತರಿಗೆ ದೊಡ್ಡ ಶಕ್ತಿಯಾಗಿ ನಿಂತಿದ್ದು ಪಕ್ಷದ ಹೈಕಮಾಂಡ್ ರಾಜ್ಯ ಸಿಎಮನ.ಡಿಸಿಎಂ ಅವರು ಜನಪರ ಸೇವೆ ಗುರುತಿಸಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಇದನ್ನು ಓದಿದ್ದೀರಾ..? ಹಳ್ಳಿಗಳ ಸಂಪರ್ಕ ರಸ್ತೆಗಳಿಗೆ 200 ಕೋಟಿ ಅನುದಾನದಲ್ಲಿ ಅಭಿವೃದ್ಧಿ: ಕೊತ್ತೂರು ಮಂಜುನಾಥ್
ಈ ಸಂದರ್ಭದಲ್ಲಿ ಹುತ್ತೂರು ಗ್ರಾಪಂ ಅಧ್ಯಕ್ಷ ವರಲಕ್ಷ್ಮೀ ಚಂದ್ರಪ್ಪ, ಮುಖಂಡರಾದ ಬೆಳಗಾನಹಳ್ಳಿ ಬಿಎಂಟಿಸಿ ಮಂಜುನಾಥ್, ಶ್ರೀರಾಮ್, ಅರಳಕುಂಟೆ ವೆಂಕಟೇಶ್, ಅಬ್ಬಣಿ ನಾಗರಾಜ್, ಯಾರಂಗಟ್ಟ ಮುನಿರಾಜು, ಪಟ್ನ ನಾರಾಯಣಸ್ವಾಮಿ, ಸಿರೇಸಂದ್ರ ಜ್ಯೋತಿಕುಮಾರ್, ಮೇಡತಂಬಿಹಳ್ಳಿ ರಮೇಶ್, ಬೆಳಗಾನಹಳ್ಳಿ ಬಿ ಪಿ ವೆಂಕಟೇಶ್, ಮುಂತಾದವರು ಇದ್ದರು.





