ಬಾಗೇಪಲ್ಲಿ:ತಾಲ್ಲೂಕು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಶಿಕ್ಷಕರು ಹಲವು ರೀತಿಯ ಕಸರತ್ತು ಆರಂಭಿಸಿದ್ದಾರೆ.
ಎಸ್. ಎಸ್. ಎಲ್.ಸಿ ಮಕ್ಕಳ ಮನೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಪರೀಕ್ಷೆ ಮುಗಿಯುವವರೆಗೆ ಮೊಬೈಲ್ ಮತ್ತು ಟಿವಿ ಉಪವಾಸ ಕೈಗೊಳ್ಳುವಂತೆ ಪಾಲಕರಲ್ಲಿ ಮನವಿ ಮಾಡುತ್ತಿದ್ದಾರೆ.
ಮುಖ್ಯ ಶಿಕ್ಷಕಿ ರಾಮಸುಬ್ಬಮ್ಮ. ಜಿ.ಮಾತನಾಡಿ ಎಸ್. ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಇನ್ನೂ 118 ದಿನಗಳು ಬಾಕಿ ಉಳಿದಿದ್ದು ಡಿಸೆಂಬರ್ ವೇಳೆಗೆ ಎಲ್ಲಾ ವಿಷಯದಲ್ಲಿ ಪಾಠಗಳು ಮುಗಿದಿದ್ಸು ಈವರೆಗೆ ಗುಂಪು ಅಧ್ಯಯನ, ಮಕ್ಕಳ ಮನೆ ಭೇಟಿ, ಪ್ರತಿದಿನ ಪರೀಕ್ಷಾ ದಿನ, ವೇಕ್ ಅಪ್ ಕಾಲ್, ವಾರದ ಮಿತ್ರ, ನಿತ್ಯನೋಟ, ಚೀಟಿ ಎತ್ತು ಚಿತ್ರ ಬಿಡಿಸು,ಎರಡು, ಮೂರು, ನಾಲ್ಕು ಅಂಕಗಳ ಪ್ರಶ್ನೆಗಳನ್ನು ಪ್ರತಿ ದಿನ ಬರೆದು ತೋರಿಸುವುದು, ಸರಳ ಪ್ರಶ್ನೆಗಳನ್ನು ಆಯ್ಕೆ ಮಾಡಿ ಅವುಗಳನ್ನು ಉತ್ತರಿಸುವ ಮೂಲಕ ತೇರ್ಗಡೆ ಹೊಂದುವಷ್ಟು ಅಂಕಗಳನ್ನು ಗಳಿಸುವ ಮಾರ್ಗವನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳುವ ಕೆಲಸವನ್ನು ಮಾಡಲಾಗುತ್ತಿದೆ. ಸೇರಿ ವಿವಿಧ ಕಾರ್ಯಕ್ರಮಗಳ ಮೂಲಕ ಮಕ್ಕಳನ್ನು ಪರೀಕ್ಷೆಗೆ ಸನ್ನದ್ಧಗೊಳಿಸಲಾಗಿತ್ತು.
ಕಲಿಕೆಯಲ್ಲಿ ಹಿಂದಿರುವ ಮಕ್ಕಳಿಗೆ ಗಮನ’
‘ಬೆಳಿಗ್ಗೆ ಮತ್ತು ಸಂಜೆಯ ವೇಳೆ ವಿಶೇಷ ತರಗತಿ ತೆಗೆದುಕೊಳ್ಳುತ್ತಿದ್ದೇವೆ. ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಪ್ರತ್ಯೇಕವಾಗಿ ಅಭ್ಯಾಸ ಮಾಡಿಸಲಾಗುತ್ತಿದೆ. ಸಂಜೆ ಗುಂಪು ರಚನೆ ಮಾಡಿ ಅಭ್ಯಾಸಕ್ಕೆ ತೊಡಗಿಸುವುದು. ಗಣಿತ, ಇಂಗ್ಲಿಷ್, ವಿಜ್ಞಾನ ಶಿಕ್ಷಕರನ್ನು ಗುಂಪುಗಳಿಗೆ ನಿಯೋಜನೆ ಮಾಡಿ ಮಕ್ಕಳ ಓದಿನ ಸಾಮರ್ಥ್ಯ ಹೆಚ್ಚಿಸುವ ಪ್ರಯೋಗ ನಡೆಸಲಾಗುತ್ತಿದೆ. ಈಗಾಗಲೇ ರಾತ್ರಿ ಸಮಯದಲ್ಲಿ ಎಸ್. ಎಸ್.ಎಲ್.ಸಿ ಮಕ್ಕಳ ಮನೆಗಳಿಗೆ ತೆರಳಿ ಪೋಷಕರನ್ನು ಭೇಟಿ ಮಾಡಿ ಸಲಹೆ ನೀಡಲಾಗುತ್ತಿದೆ’ ಎಂದು ಘಂಟಂವಾರಿಪಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಜಿ.ರಾಮಸುಬ್ಬಮ್ಮ ಪತ್ರಕೆ’ಗೆ ತಿಳಿಸಿದರು.
ಇದನ್ನು ಓದಿದ್ದೀರಾ..? ಹೊನ್ನೇನಹಳ್ಳಿ, ವಡಗೂರು ಗ್ರಾಪಂ ಪಿಡಿಒಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ
ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ಈ ಸಲ ವೈವಿಧ್ಯಮಯ ಹಾಕಿಕೊಳ್ಳಲಾಗಿದೆ.ರಾತ್ರಿ ಸಮಯದಲ್ಲಿ
ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಓದಿನ ಪ್ರಗತಿ ಪರಿಶೀಲಿಸಲಾಗುತ್ತಿದೆ. ಮಕ್ಕಳಿಗೆ ಧೈರ್ಯ ಹೇಳಿ, ಪಾಲಕರಿಗೂ ಮಕ್ಕಳ ಅಭ್ಯಾಸದ ಬಗ್ಗೆ ಕಾಳಜಿ ವಹಿಸುವಂತೆ ಹೇಳಲಾಗುತ್ತಿದೆ. ಕೆಲವು ಕಡೆ ಶಿಕ್ಷಕರೇ ಕಾಳಜಿ ವಹಿಸಿ ವಿನೂತನ ಕ್ರಮ ಅನುಸರಿಸುತ್ತಿದ್ದಾರೆ.





