ಕನ್ನಡ ನೆಲ, ಜಲ, ಸಂಸ್ಕೃತಿ ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ: ಎಂಎಲ್ಸಿ ಅನಿಲ್ ಕುಮಾರ್

Date:

ಕೋಲಾರ: ಕರ್ನಾಟಕದ ನೆಲ, ಜಲ, ಕನ್ನಡ ಭಾಷೆ ಹಾಗೂ ಸಂಸ್ಕೃತಿಯ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಕಾರಣ ಮಾಡಬಾರದು ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು

ತಾಲೂಕಿನ ವಕ್ಕಲೇರಿ ಹೋಬಳಿಯ ಗಂಗಾಪುರ ಗ್ರಾಮದಲ್ಲಿ ಭಾನುವಾರ ೭೦ನೇ ಕನ್ನಡ ರಾಜ್ಯೋತ್ಸವ ಹಾಗೂ ಸಂಘದ 24 ನೆಯ ವರ್ಷದ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹನೀಯರ ಕನ್ನಡ ಬೆಳೆವಣಿಗೆಗೆ ತನ್ನದೇ ಆದ ಕೊಡುಗೆಯನ್ನು ನೀಡಿದ್ದಾರೆ ಗಡಿ ಜಿಲ್ಲೆಯಲ್ಲಿ ಕನ್ನಡ ಹೋರಾಟಗಳಲ್ಲಿ ಮುಂಚೂಣಿಯಲ್ಲಿದೆ ರಾಜ್ಯ ಸರ್ಕಾರವು ನಾಡು ನುಡಿಯ ರಕ್ಷಣೆಗೆ ಹಾಗೂ ಕಲೆ, ಸಾಹಿತ್ಯ, ಸಂಸ್ಕೃತಿ ಉಳಿಸಿ ಬೆಳೆಸಲು ಕನ್ನಡಿಗರ ಏಳ್ಗೆಗಾಗಿ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದರು.

ಇಂದು ನಾವೆಲ್ಲ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ನಮಗೆಲ್ಲ ತಿಳಿದಿರುವಂತೆ ಭಾರತ ಸ್ವತಂತ್ರಗೊಂಡು ಗಣರಾಜ್ಯ ಉದಯವಾದ ಸಂದರ್ಭದಲ್ಲಿ ಈಗಿನ ಕರ್ನಾಟಕವು ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿ ಹೋಗಿತ್ತು ಹರಿದು ಹಂಚಿಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಂದುಗೂಡಿಸಿ ಮೈಸೂರು ರಾಜ್ಯವನ್ನು ರಚಿಸಲಾಯಿತು .ಅದಾದ ೧೭ ವರ್ಷಗಳ ನಂತರ ಅಂದರೆ ೧೯೭೩ ನವೆಂಬರ್ ೧ ರಂದು ದೇವರಾಜ್ ಅರಸುರವರು ಕರ್ನಾಟಕ ಎಂದು ನಾಮಕರಣ ಮಾಡಿದರು ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಂಗಾಪುರ ಗ್ರಾಮದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ 5 ಲಕ್ಷ ವೆಚ್ಚದ ಹೈಮಾಸ್ಕ್ ಲೈಟ್, 9 ಲಕ್ಷ ವೆಚ್ಚದ ಶುದ್ದನೀರಿನ ಘಟಕ, ರಸ್ತೆ ಮತ್ತು ಚರಂಡಿಗೆ 12 ಲಕ್ಷ, ಗಂಗಾಪುರ ಗೇಟ್ ನಿಂದ ಊರು ತನಕ 50 ಲಕ್ಷ ವೆಚ್ಚದ ಡಾಂಬರೀಕರಣ, ಆಂಜನೇಯ ದೇವಾಲಯದ ಅಭಿವೃದ್ಧಿಗೆ 4 ಲಕ್ಷ ಸೇರಿದಂತೆ ಒಟ್ಟು 80 ಲಕ್ಷ ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ಅಭಿವೃದ್ಧಿಗೆ ಆಧ್ಯತೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಬೆಂಗಳೂರು ಪೂರ್ವ ವಲಯ ಡಿಸಿಪಿ ಡಿ.ದೇವರಾಜ್ ಮಾತನಾಡಿ ದೇಶದ ಭಾಷೆ ಮತ್ತು ಸಾಹಿತ್ಯ ಪರಂಪರೆಯಲ್ಲಿ ಕನ್ನಡ ನಾಡು ಮತ್ತು ನುಡಿಗೆ ಉನ್ನತವಾದ ಸ್ಥಾನವಿದೆ ಮತ್ತು ಸುಮಾರು 2500 ವರ್ಷಗಳಿಗೂ ಮೀರಿದ ಇತಿಹಾಸವಿದೆ ಕನ್ನಡದ ಮೇಲೆ ಪ್ರೀತಿ ಮತ್ತು ಅಭಿಮಾನವನ್ನು ತೋರಿಸಬೇಕಾದದ್ದು ಕನ್ನಡಿಗರಾದ ನಮ್ಮೆಲ್ಲರ ಕರ್ತವ್ಯವಾಗಿದೆ ಯುವಕರಲ್ಲಿನ ಒಗ್ಗಟ್ಟು ಇದೇ ರೀತಿಯಲ್ಲಿ ಇರಬೇಕು ಎಂದರು.

ಇದನ್ನು ಓದಿದ್ದೀರಾ..? ಆಗ್ನೇಯ ಪದವೀಧರರ ಕ್ಷೇತ್ರ ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಪೂರ್ವಭಾವಿ ಸಭೆ

ಈ ಸಂದರ್ಭದಲ್ಲಿ ಕೋಮುಲ್ ನಿರ್ದೇಶಕ ಚೆಲುವನಹಳ್ಳಿ ಡಿ.ನಾಗರಾಜ್, ವಕ್ಕಲೇರಿ ಸೊಸೈಟಿ ಅಧ್ಯಕ್ಷ ಪಾಲಾಕ್ಷಗೌಡ, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ಗ್ರಾಪಂ ಅಧ್ಯಕ್ಷ ರಾಧಿಕಾ ಮಂಜುನಾಥ್, ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಉಪಾಧ್ಯಕ್ಷ ಎಂ. ಆನಂದ್ ಕುಮಾರ್, ಸದಸ್ಯ ಶ್ರೀನಿವಾಸ್, ಕನ್ನಡ ಉಪನ್ಯಾಸಕ ಹನೀಫ್ ಸಾಬ್, ಮುಖಂಡರಾದ ಚಿದಾನಂದ್, ರಮೇಶ್, ಜನಪನಹಳ್ಳಿ ನವೀನ್ ಕುಮಾರ್ ಪ್ರಕಾಶ್, ಯಳಚಪ್ಪ, ಭುವನೇಶ್ವರಿ ಕನ್ನಡ ಯುವಕರ ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ ನಾಗರಾಜ್, ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ಮುನಿಯಪ್ಪ, ಕಾರ್ಯದರ್ಶಿ ಮೋಹಿತ್ ಗೌಡ, ಖಜಾಂಚಿ ಸುರೇಶ್, ನರಸಿಂಹ ಮುಂತಾದವರು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...