ಬಾಗೇಪಲ್ಲಿ : ಕಾಂಗ್ರೆಸ್ ಪಕ್ಷದಲ್ಲಿ ಸತತವಾಗಿ 3 ದಶಕಗಳಿಂದ,ನಿಷ್ಠಾವಂತ ಕಾರ್ಯಕರ್ತರಗಿ ಸೇವೆ ಸಲ್ಲಿಸಿ,10 ವರ್ಷಗಳು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಗಿ ತಮ್ಮ ಅಮೂಲ್ಯವಾದ ಕೊಡುಗೆಯನ್ನು ನೀಡಿ, ಜನ ಮೆಚ್ಚಿದ ನಾಯಕರಾಗಿರುವಂತಹ ಎನ್ ಸಂಪಂಗಿ ರವರು ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಬೆಂಗಳೂರಿನ ರಾಜ್ಯ ಉಗ್ರಾಣ ನಿಗಮ ಕೇಂದ್ರ ಕಚೇರಿಯಲ್ಲಿ ಪದಗ್ರಹಣ ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.ಕಾರ್ಯಕ್ರಮಕ್ಕೆ ನೂರಾರು ಎನ್ ಸಂಪಂಗಿ ರವರ ಅಭಿಮಾನಿಗಳು ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಭಾಗವಹಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಪಂಗಿ ರವರು ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಎಲ್ಲಾ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಷ್ಠೆಯಿಂದ ನಿರ್ವಹಿಸಿರುವ ಕಾರಣ ಒಳ್ಳೇಯ ಸ್ಥಾನಮಾನ ಸಿಕ್ಕಿದೆ,ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿದ್ದೇವೆ,ಕೆಪಿಸಿಸಿ ಉಪಾಧ್ಯಕ್ಷ ಸ್ಥಾನ ನೀಡಿ ಇಂದು ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿ ನನ್ನ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ.ಸರ್ಕಾರ ನನ್ನನ್ನು ನಿಗಮದ ಅಧ್ಯಕ್ಷರಾಗಿ ಆಯ್ಕೆ ಮಾಡಿದನ್ನು ನಾನು ಎಂದಿಗೂ ಮರಿಯುದಿಲ್ಲ, ಬಾಗೇಪಲ್ಲಿ, ಚಿಕ್ಕಬಳ್ಳಾಪುರಜಿಲ್ಲೆ ಹಾಗೂ ಇಡೀ ರಾಜ್ಯದ ಅಭಿರುದ್ಧಿಗಾಗಿ ಶ್ರಮಿಸುವೆ, ಹಾಗೂ ರಾಜ್ಯ ಮುಖ್ಯಮಂತ್ರಿಗಳು
ಹಾಗೂ ಉಪ ಮುಖ್ಯಮಂತ್ರಿ ಗಳೊಂದಿಗೆ ಚರ್ಚೆ ಮಾಡಿ ಈ ನಿಗಮವನ್ನು ಒಳ್ಳೆಯ ರೀತಿಯಲ್ಲಿ ತೆಗೆದುಕೊಂಡು ಹೋಗುವಂತ ಪ್ರಯತ್ನ ಮಾಡುತ್ತೇನೆ ಎಂದರು.
ಇದನ್ನು ಓದಿದ್ದೀರಾ..? ಸರ್ಕಾರಿ ಗೋಮಾಳದಲ್ಲಿ ಅಕ್ರಮ ಸೋಲಾರ್ ಪ್ಲಾಟ್ ವಿರುದ್ಧ ಕ್ರಮಕ್ಕೆ ಒತ್ತಾಯ: ಸಂದಾ ಮುನಿಸ್ವಾಮಿ
ಈ ಸಂದರ್ಭದಲ್ಲಿ ಮಾಜಿ ಸಚಿವ ಶಿವಶಂಕರರೆಡ್ಡಿ, ಮನಸ್ಸಪಲ್ಲಿ ನಾರಾಯಣ ಸ್ವಾಮಿ,ಎಸ್ಟಿಡಿ ಮೂರ್ತಿ, ನರಸಿಂಹ ನಾಯ್ಡು, ವಕೀಲರದಾ ಎ ನಂಜುಂಡ,ಗಂಗಿರೆಡ್ಡಿ. ಇನ್ನು ಮುಂತಾದ ಅಭಿಮಾನಿಗಳು, ಕಾರ್ಯಕರ್ತರು ಹಾಜರಿದ್ದರು.
ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಾಜಿ ಶಾಸಕರು ಎನ್ ಸಂಪಂಗಿ
ಪೋಸ್ಟ್ ಹಂಚಿಕೊಳ್ಳಿ:




