ಕಲೆ ಮತ್ತು ವಾಸ್ತುಶಿಲ್ಪದಿಂದ ಇತಿಹಾಸವನ್ನು ಶ್ರೀಮಂತಗೊಳಿಸಿದ ಅಮರ ಶಿಲ್ಪಿ ಜಕಣಾಚಾರಿ

Date:

ಬಾಗೇಪಲ್ಲಿ: ಅಮರಶಿಲ್ಪಿ ಜಕಣಾಚಾರಿ ಅವರು ತಮ್ಮ ಕೈಚಳಕದ ಮೂಲಕ ಕೆತ್ತನೆ ಮಾಡಿದ ಶಿಲ್ಪ ಕಲಾಕೃತಿಗಳು ಇಂದು ಇಡೀ ವಿಶ್ವದ ಪ್ರವಾಸಿಗರ ಗಮನ ಸೆಳೆಯುತ್ತಿದ್ದು, ದೇಶದ ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರ ಕಲೆ ಮತ್ತು ವಾಸ್ತುಶಿಲ್ಪದಿಂದ ಇತಿಹಾಸವನ್ನು ಶ್ರೀಮಂತಗೊಳಿಸಿದರು ಎಂದು ತಹಶಿಲ್ದಾರ್ ಮನೀಷಾ ಎನ್ ಪತ್ರಿ ಹೇಳಿದರು.

ಅವರು ಇಂದು ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ , ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ತಾಲ್ಲೂಕು ಪಂಚಾಯತಿ ಜಿಲ್ಲಾ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ,ದೀಪಾ ಬೆಳಗಿಸಿ ಮಾತನಾಡುತ್ತಿದ್ದರು. ಅಮರ ಶಿಲ್ಪಿ ಜಕಣಾಚಾರಿ ರೂಪಿಸಿದ ಅದ್ಭುತ ಕಲಾಕೃತಿಗಳು ಇಂದಿಗೂ ನಮ್ಮನ್ನು ಬೆರಗುಗೊಳಿಸುತ್ತವೆ. ಇಂತಹ ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಜಗತ್ತಿನ ಅದ್ಭುತ ಶಿಲ್ಪಿಗಳ ಸಾಲಿನಲ್ಲಿ ನಿಲ್ಲುವ ಜಕಣಾಚಾರಿ ಅವರು ಬೇಲೂರು ಮತ್ತು ಹಳೆಬೀಡು ಸೇರಿ ಇತರ ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತಿದ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ ಎಂದು ಹೇಳಿದರು.

ಮುಖ್ಯ ಭಾಷಣಕಾರ ಜಿ..ವಿ.ಚಂದ್ರಶೇಖರ ಮಾತನಾಡಿ ನಾಡಿನ ಐತಿಹಾಸಿಕ ವಾಸ್ತು ಶಿಲ್ಪ ಪರಂಪರೆಗೆ ಶಿಲ್ಪಗಳ ಕೊಡುಗೆ ಅಪಾರ ವಾದುದು. ಅಂತಹ ಅಪರೂಪದ ಕೊಡುಗೆ ಯನ್ನು ನಾಡಿಗೆ ನೀಡಿ ತನ್ನ ಕಲಾ ಕೌಶಲ್ಯ ಕೊಡುಗೆಯನ್ನು ನಾಡಿಗೆ ನೀಡಿ ಅಜರಾಮರನಾದವನು ಅಮರಶಿಲ್ಪಿ ಜಕಣಾಚಾರಿ. ಜಕಣಾಚಾರಿ ಹುಟ್ಟಿದ್ದು ತುಮಕೂರಿನ ಕ್ರೀಡಾ ಪುರ ಎಂಬ ಹಳ್ಳಿಯಲ್ಲಿ . ಸೌಂದರ್ಯ ಮತ್ತು ಕಲಾ ಆರಾಧಕನಾಗಿದ್ದ ಜಕಣಾಚಾರಿ ವೈಯಕ್ತಿಕ ಬದುಕಿನಲ್ಲಿ ನಡೆದ ಘಟನೆಗಳಿಂದ ಬೇಸತ್ತು ಹೆಂಡತಿ ಮನೆ, ಊರನ್ನು ತೊರೆದು ಲೋಕಸಂಚಾರಿಯಾಗಿ ಅಲೆಯುತ್ತಿರುವಾಗ ರಾಮಾನುಜಾಚಾರ್ಯರು ಮಾರ್ಗದರ್ಶನ ದಿಂದ ತನ್ನ ವೃತ್ತಿಯಲ್ಲಿ ಏಕಾಗ್ರತೆನ್ನು ಸಾಧಿಸಿದ. ಹೊಯ್ಸಳ ಅರಸ ವಿಷ್ಣುವರ್ಧನ ಮತ್ತು ರಾಣಿ ಶಕುಂತಲಾ ದೇವಿಯರ ಆಶಯದಂತೆ ಬೇಲೂರು ಚನ್ನಕೇಶವ ದೇವಾಲಯದ ನಿರ್ಮಾಣ ಜವಾಬ್ದಾರಿಯನ್ನು ವಹಿಸಿಕೊಂಡ. ಅದು ದೇವಾಲಯವಾಗದೆ ಅಪರೂಪದ ಕಲಾಕೃತಿಯಾಗಿ ನಿರ್ಮಿಸಿಲು ತನ್ನ ಜೀವನವನ್ನೇ ಮುಡುಪಾಗಿಟ್ಟ. ಶಿಲೆಯನ್ನು ಕಲೆಯಾಗಿ ಅರಳಿಸಿದ.
ಇಂದಿಗೂ ಶಿಲ್ಪ ಕಲೆ ಜೀವಂತವಾಗಿದೆ ಎಂಬುದಕ್ಕೆ ಬೇಲೂರು, ಹಳೇಬೀಡು, ಸೋಮನಾಥಪುರ ಶಿಲ್ಪಗಳೇ ಸಾಕ್ಷಿಯಾಗಿವೆ. ಅಮರ ಶಿಲ್ಪಿ ಜಕಣಾಚಾರಿಯಂತೆ ಈಗಿನ ಕಾಲದ ಶಿಲ್ಪಿ ಅರುಣ್ ಯೋಗಿರಾಜ್ ಅವರು ವಿಶ್ವ ಕರ್ಮ ಸಮಾಜದ ಆಸ್ತಿಯಾಗಿದ್ದಾರೆ. ಸರ್ಕಾರವು ವಿಶ್ವ ಕರ್ಮ ಸಮಾಜದ ಶಿಲ್ಪಿಗಳನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕು’ ಎಂದರು.

ಈ ಸಂದರ್ಭದಲ್ಲಿ ಸಮಾಜದ ಕುಲ ಕಸುಬುನಲ್ಲಿ ಸಾಧನೆ ಮಾಡಿದ ಮಹಿಳೆಯರು ಹಾಗೂ ಶಿಲ್ಪಗಳನ್ನು ತಹಶಿಲ್ದಾರ್ ಹಾಗೂ ಇತರೆ ಅಧಿಕಾರಿಗಳು ಆತ್ಮೀಯವಾಗಿ ಸನ್ಮಾನಿಸಿದರು.

ಇದನ್ನು ಓದಿದ್ದೀರಾ..? ಒಂದುವರೆ ವರ್ಷದಲ್ಲಿ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಬಂದೆ ಬರುತ್ತೆ : ಕೆ.ಹೆಚ್.ಮುನಿಯಪ್ಪ

ಈ ಸಂದರ್ಭದಲ್ಲಿ ಬಿಇಓ ಎನ್. ವೆಂಕಟೇಶಪ್ಪ ಇಸಿಓ ಪದ್ಮಾವತಿ, ಆರ್.ಹನುಮಂತ ರೆಡ್ಡಿ ಸಾಕ್ಷರತೆ ಶಿವಪ್ಪ ಸುಕನ್ಯಾ ,ವಿನಾಯಕ ಮೂರ್ತಿ, ವೀರಾಚಾರಿ ಅದ್ಯಕ್ಷ ಶ್ರೀನಿವಾಸ್ ಆಚಾರಿ ಹಾಗೂ ಸಮುದಾಯದವರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...