ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರಿಂದ ನಗರಸಭೆ ಆಯುಕ್ತೆಗೆ ಬೆದರಿಕೆ ದೂರು ದಾಖಲು.

Date:

ಶಿಡ್ಲಘಟ್ಟ: ಶಿಡ್ಲಘಟ್ಟ ನಗರದಲ್ಲಿ ಚಲನಚಿತ್ರವೊಂದರ ಪ್ರಚಾರಕ್ಕಾಗಿ ಕಟ್ಟಿದ್ದ ಪ್ಲೆಕ್ಸ್ ಗಳನ್ನು ತೆರವುಗೊಳಿಸಿರುವ ವಿಚಾರಕ್ಕಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ಅವರು ನಗರಸಭೆಯ ಆಯುಕ್ತೆ ಅಮೃತಾ ಗೌಡ ಅವರಿಗೆ ದೂರವಾಣಿಯ ಮೂಲಕ ಅಶ್ಲೀಲವಾಗಿ ನಿಂದನೆ ಮಾಡಿ ಬೆದರಿಕೆ ಹಾಕಿರುವ ಘಟನೆಯ ಹಿನ್ನೆಲೆಯಲ್ಲಿ ನಗರಸಭೆಯ ಪೌರಕಾರ್ಮಿಕರೂ ಸೇರಿದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸದೆ ಪ್ರತಿಭಟನೆ ನಡೆಸಿದರು.

ಶಿಡ್ಲಘಟ್ಟ ನಗರದಲ್ಲಿ ಟಿ.ಬಿ.ರಸ್ತೆಯಲ್ಲಿ ಕಲ್ಟ್ ಸುನಿಮಾ ಕುರಿತು ಶುಭಾಶಯ ಕೋರಲು ಕಟ್ಟಿದ್ದ ಬ್ಯಾನರ್ ತೆರವುಗೊಳಿಸಲಾಗಿದೆ ಎನ್ನುವ ಕಾರಣಕ್ಕೆ, ನಗರಸಭೆ ಆಯುಕ್ತೆ ಅಮೃತಾಗೌಡ ಅವರಿಗೆ ಕರೆ ಮಾಡಿರುವ ಕಾಂಗ್ರೆಸ್ ಪಕ್ಷದ ಪರಾಜಿತ ಅಭ್ಯರ್ಥಿ ರಾಜೀವ್ ಗೌಡ ಅವರು ಆಯುಕ್ತೆಯೊಂದಿಗೆ ಅಶ್ಲೀಲ ಶಬ್ದಗಳು ಬಳಕೆ ಮಾಡಿ ಮಾತನಾಡಿರುವುದರ ಜೊತೆಗೆ ಪ್ರತಿಯೊಂದು ವಾರ್ಡಿನಿಂದ ಜನರನ್ನು ರೊಚ್ಚಿಗೆಬ್ಬಿಸಿ ಕಳುಹಿಸಿ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ಬೆಂಕಿ ಹಚ್ಚಿಸುತ್ತೇನೆ. ಎಂದೆಲ್ಲಾ ಮಾತನಾಡಿರುವುದು ಮೊಬೈಲ್ ನಲ್ಲಿ ರೆಕಾರ್ಡ್ ಆಗಿದ್ದು ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದರ ಜೊತೆಗೆ ಬೆದರಿಕೆ ಹಾಕಿದ್ದಾರೆ ಎಂದು ನಗರಸಭೆಯ ಅಧಿಕಾರಿಗಳು ಪೌರಕಾರ್ಮಿಕರೆಲ್ಲರೂ ಕೆಲಸ ಬಿಟ್ಟು ನಗರಸಭೆಯ ಮುಂದೆ ಪ್ರತಿಭಟಿಸಿದರು.

ಶಾಸಕ ಬಿ.ಎನ್.ರವಿಕುಮಾರ್ ವಿರುದ್ಧವೂ ಅಶ್ಲೀಲ ಪದ ಬಳಕೆ: ಶಿಡ್ಲಘಟ್ಟದ ಶಾಸಕ ಬಿ.ಎನ್.ರವಿಕುಮಾರ್ ಅವರ ಬಗ್ಗೆಯೂ ಅಶ್ಲೀಲ ಪದಗಳಿಂದ ನಿಂದಿಸಿರುವ ರಾಜೀವ್ ಗೌಡ ಅವರು ಶಾಸಕ ಬಿ.ಎನ್.ರವಿಕುಮಾರ್ ಅವರ ಅಣತಿಯಂತೆ ಕೆಲಸ ಮಾಡುತ್ತಿದ್ದೀರಿ ಎಂದು ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು, ನಗರಸಭೆ ಆಯುಕ್ತೆ ಅಮೃತಾಗೌಡ ಅವರು ನಗರ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಪಟ್ಟಣದಲ್ಲಿ ಕಟ್ಟಿದ್ದ ಬ್ಯಾನರ್ ನಿಂದಾಗಿ ಸಾರ್ವಜನಿಕರಿಗೆ ಅಪಾಯವಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಬ್ಯಾನರ್ ಬಿಚ್ಚಿ ಕಚೇರಿಯ ಬಳಿಯಲ್ಲಿ ಇದ್ದೇವೆ. ರಾಜೀವ್ ಗೌಡ ಅವರು ಕರೆ ಮಾಡಿದಾಗಲೂ ಸಮಾಧಾನದಿಂದಲೇ ಉತ್ತರಿಸುತ್ತಿದ್ದೆ ಆದರೆ ಅವರು ಅವ್ಯಾಚವಾಗಿ ಅಶ್ಲೀಲವಾಗಿ ಮಾತನಾಡುವಾಗಲೂ ಹಾಗೆಲ್ಲಾ ಮಾತನಾಡಬೇಡಿ ಸರ್ ಅಧಿಕೃತವಾಗಿ ಅನುಮತಿ ಪಡೆದುಕೊಂಡಿಲ್ಲ ಎಂದು ಹೇಳುತ್ತಿದ್ದರೂ ಅವರು ಕೇಳಿಸಿಕೊಳ್ಳಲಿಲ್ಲ. ನಾನು ಗೊಂದಲದಲ್ಲೆ ಇದ್ದೆ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ಬೆಂಕಿ ಹಚ್ಚಿಸುತ್ತೇನೆ ಎಂದೆಲ್ಲಾ ಬೆದರಿಕೆ ಹಾಕಿದರು. ಆದ್ದರಿಂದ ಪೌರಕಾರ್ಮಿಕರು ಸಿಬ್ಬಂದಿಯೆಲ್ಲರೂ ಸೇರಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಆಯುಕ್ತೆ ಅಮೃತಾಗೌಡ ಹೇಳಿದರು.

ಸಾರ್ವಜನಿಕರ ಆಕ್ರೋಶ: 2023 ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ವಿರುದ್ಧವಾಗಿ ಪರಾಜಿತರಾಗಿರುವ ರಾಜೀವ್ ಗೌಡ ಅವರು, ಹತಾಶರಾಗಿದ್ದಾರೆ. ಒಬ್ಬ ಮಹಿಳಾ ಅಧಿಕಾರಿಯೊಂದಿಗೆ ಹೇಗೆ ಮಾತನಾಡಬೇಕು ಎನ್ನುವ ಸಭ್ಯತೆಯಿಲ್ಲದ ವ್ಯಕ್ತಿ ಶಿಡ್ಲಘಟ್ಟಕ್ಕೆ ಬರಬಾರದು. ಅವರು ಬೆಂಗಳೂರಿನಿಂದ ಶಿಡ್ಲಘಟ್ಟಕ್ಕೆ ಬಂದು, ಈಗ ನಮ್ಮ ಶಿಡ್ಲಘಟ್ಟದ ಗೌರವ ಕಳೆಯುವಂತಹ ಕೆಲಸ ಮಾಡಿದ್ದಾರೆ. ಶಿಡ್ಲಘಟ್ಟದ ರಾಜಕೀಯ ಇತಿಹಾಸದಲ್ಲಿ ಯಾವೊಬ್ಬ ರಾಜಕಾರಣಿಯೂ ಇಷ್ಟು ಕೀಳು ಮಟ್ಟದ ರಾಜಕಾರಣ ಮಾಡಲಿಲ್ಲ. ಇವರು ಎಲ್ಲಿಂದಲೂ ಬಂದು ಇಲ್ಲಿನ ಜನರ ಸ್ವಾಭಿಮಾನಕ್ಕೆ ದಕ್ಕೆಯುಂಟು ಮಾಡಿದ್ದಾರೆ ಎಂದು ಸ್ಥಳೀಯ ಸಾರ್ವಜನಿಕರು, ಅವರ ಭಾವಚಿತ್ರಕ್ಕೆ ಮಸಿ ಬಳಿ ಪ್ರತಿಭಟನಾ ಮೆರವಣಿಗೆ ಮಾಡಿದರು.

ಇದನ್ನು ಓದಿದ್ದೀರಾ..? ಭೋವಿ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರಬೇಕು: ಸಂಸದ ಎಂ.ಮಲ್ಲೇಶ್ ಬಾಬು

ಬಿಜೆಪಿ ಮುಖಂಡರಿಂದ ದೂರು: ಮಹಿಳಾ ಅಧಿಕಾರಿಗೆ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡನನ್ನು ಕೂಡಲೇ ಬಂಧಿಸಬೇಕು. ಸರಕಾರದ ರಕ್ಷಣೆಯಿದೆ ಎನ್ನುವ ಕಾರಣಕ್ಕೆ ಈ ರೀತಿಯಾಗಿ ನಡೆದುಕೊಳ್ಳುವುದು ಸರಿಯಲ್ಲ.ತಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮಾದರಿಯಾಗಬೇಕಾಗಿದ್ದ ಮುಖಂಡ ಜನಪ್ರತಿನಿಧಿಯ ಬಗ್ಗೆಯೂ ಇಂತಹ ಕೀಳು ಭಾಷೆಯನ್ನು ಮಾತನಾಡುವ ಮೂಲಕ ಅಸಂವಿಧಾನಿಕವಾಗಿ ನಡೆದುಕೊಂಡಿದ್ದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಮಾಜಿ ಶಾಸಕ ಎಂ.ರಾಜಣ್ಣ ಅವರು ಸೇರಿದಂತೆ ಮುಖಂಡರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...