ಕಾರ್ಮಿಕರು ಜೀತದಾಳುಗಳಾಗಿದ್ದಾರೆ ದುಡಿಯುವ ವರ್ಗ ಒಗ್ಗಟ್ಟಿನಿಂದ ಹೋರಾಟಕ್ಕೆ ಮುಂದಾಗಬೇಕಾಗಿದೆ: ಮೀನಾಕ್ಷಿ ಸುಂದರಂ

Date:

ಕೋಲಾರ: ಪ್ರಮುಖವಾಗಿ ಜಿಲ್ಲೆ ಸೇರಿದಂತೆ ದೇಶಾದ್ಯಂತ ಕೃಷಿಯು ಬಿಕ್ಕಟ್ಟಿಗೆ ಸಿಲುಕಿದ್ದು ಅವೈಜ್ಞಾನಿಕ ಭೂಸ್ವಾಧೀನದಿಂದಾಗಿ ಕೃಷಿ ನಂಬಿರುವ ರೈತರು ಮತ್ತು ಕೃಷಿ ಕೂಲಿಕಾರರನ್ನು ಗ್ರಾಮೀಣ ಪ್ರದೇಶದಿಂದ ಒಕ್ಕಲೆಬ್ಬಿಸಲಾಗುತ್ತಿದೆ ಉದ್ಯೋಗಗಳು ಸೃಷ್ಟಿಯಾಗುತ್ತಿಲ್ಲ ಇರುವ ಉದ್ಯೋಗದಲ್ಲಿಯೇ ಜೀತದಾಳುಗಳಾಗಿ ದುಡಿಯುವಂತಾಗಿದೆ ಇದರ ಅಪಾಯಕಾರಿ ನೀತಿಗಳ ವಿರುದ್ದ ಕಾರ್ಮಿಕರು ಹೋರಾಟಕ್ಕೆ ಮುಂದಾಗಬೇಕು ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ತಿಳಿಸಿದರು

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಭಾನುವಾರ ಸಿಐಟಿಯು7 ನೆಯ ಜಿಲ್ಲಾ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಜಿಲ್ಲೆಯ ಅಭಿವೃದ್ಧಿಗೆ ಸೂಕ್ತ ಗಮನ ಕೊಡಲು ಸರ್ಕಾರ ಮುಂದಾಗಬೇಕು ರಾಜಧಾನಿ ಸುತ್ತಮುತ್ತಲು ನಡೆಸುತ್ತಿರುವ ವ್ಯಾಪಕ ಭೂಸ್ವಾಧೀನ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಕೃಷಿ ಭೂಮಿಯನ್ನು ಇಲ್ಲದಂತೆ ಮಾಡುತ್ತದೆ. ಕೈಗಾರಿಕೆ ಸ್ಥಾಪಿಸಲು ಕೃಷಿ ಯೋಗ್ಯ ಫಲವತ್ತಾದ ಭೂಮಿಯನ್ನು ಯಾವುದೇ ಕಾರಣಕ್ಕೂ ಬಳಕೆ ಮಾಡಬಾರದು ಎಂದರು.

ಮೋದಿ ದೇಶದಲ್ಲಿ ಅಧಿಕಾರಕ್ಕೆ ಬಂದ 11 ವರ್ಷಗಳ ಅವಧಿಯಲ್ಲಿ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ ಸರ್ಕಾರಿ ಖನಿಜ ಸಂಪತ್ತನ್ನು ಖಾಸಗೀಕರಣ ಮಾಡುವುದು, ಸರ್ಕಾರಿ ಸಾರ್ವಜನಿಕ ಉದ್ಯಮಗಳನ್ನು ಖಾಸಗೀಕರಿಸುತ್ತಿದೆ. ಬಂಡವಾಳದಾರರಿಗೆ ಸ್ವಾಗತ ಕೋರಿದ್ದಾರೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದಲ್ಲಿ ಹೈನುಗಾರಿಕೆ ಸೇರಿದಂತೆ ಇತರೆ ಕೃಷಿ ಉತ್ಪನ್ನಗಳ ಮೇಲೆ ತೀವ್ರತರ ದಾಳಿ ಆರಂಭವಾಗಿ, ಇವುಗಳ ಮೇಲೆ ಅವಲಂಬಿತವಾಗಿರುವ ಗ್ರಾಮೀಣ ಉದ್ಯೋಗ ಕುಸಿದು, ನಿರುದ್ಯೋಗ ಪ್ರಮಾಣ ತೀವ್ರವಾಗಿ ಹೆಚ್ಚಳವಾಗುತ್ತಿದೆ ಎಲ್ಲಾ ಇಲಾಖೆಗಳಲ್ಲೂ ಗುತ್ತಿಗೆ ಕಾರ್ಮಿಕರ ಪ್ರಮಾಣ ಹೆಚ್ಚಳವಾಗುತ್ತಿದೆ ಕಾರ್ಪೊರೇಟ್ ಕಂಪನಿಗಳಿಗೆ ಲಾಭಹೆಚ್ಚಾಗುತ್ತಿದೆ ಇದರ ಆರ್ಥಿಕ ನೀತಿಯನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಬೇಕು ಎಂದರು

ವೇದಿಕೆಯಲ್ಲಿ ನೂತನ ಸಮಿತಿ ಪದಾಧಿಕಾರಿಗಳು ಇದ್ದರು.

ನೂತನ ಸಮಿತಿ ಆಯ್ಕೆ, ಅಧ್ಯಕ್ಷರಾಗಿ ಪಿ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿಯಾಗಿ ಎಂ ವಿಜಯಕೃಷ್ಣ, ಖಜಾಂಚಿಯಾಗಿ ಹೆಚ್.ಬಿ.ಕೃಷ್ಣಪ್ಪ, ಉಪಾಧ್ಯಕ್ಷರಾಗಿ ಗಾಂಧಿನಗರ ನಾರಾಯಣಸ್ವಾಮಿ, ಅಮರನಾರಾಯಣಪ್ಪ, ಎ.ಆರ್.ಬಾಬು, ಪಿ.ಆನಂದರಾಜ್, ಅಂಜಲಮ್ಮ, ಪಿ.ತಂಗರಾಜ್, ಕಾರ್ಯದರ್ಶಿಗಳಾಗಿ ಬಿ.ಎಲ್.ಕೇಶವರಾವ್, ಎಂ.ಜಯಲಕ್ಷ್ಮಿ, ಎಂ.ಭೀಮರಾಜ್ , ಶಿವಾನಂದ್ಎಸ್.ಡಿ.ಆನಂದ್, ಲಿಯೋರಾಜ, ಐ.ಸಿ.ವೀರಭದ್ರ, ಎನ್.ಕಲ್ಪನಾ, ವಿ.ಹರೀಶ್ ಸೇರಿದಂತೆ ಸಮಿತಿ ಸದಸ್ಯರು ಆಯ್ಕೆ ಮಾಡಲಾಯಿತು.

ಇದನ್ನು ಓದಿದ್ದೀರಾ..? ಡಿಸೆಂಬರ್ 1 ರಿಂದ ಕೇಂದ್ರ ಸಚಿವರ ಮನೆ ಮುಂದೆ ಅನಿರ್ದಿಷ್ಟ ಧರಣಿ

ನಿರ್ಣಯಗಳು
*ಕಾರ್ಪೋರೇಟ್ ಬಂಡವಾಳಪರ ರೂಪಿಸಿರುವ ಕಾರ್ಮಿಕ ಸಂಹಿತೆಗಳನ್ನು ರಾಜ್ಯದಲ್ಲಿ ಜಾರಿ ಮಾಡದಿರಲು ಒತ್ತಾಯ
*ಇಪಿಎಪ್ ನಿವೃತ್ತಿ ವೇತನವನ್ನು ಕನಿಷ್ಟ 10 ಸಾವಿರಕ್ಕೆ ಏರಿಸಲು ಒತ್ತಾಯ
*ಚಿನ್ನದ ಗಣಿಯನ್ನು ಪುನರ್ ಆರಂಭಿಸಬೇಕು ಮತ್ತು ಪರಿಹಾರ ಹಾಗೂ ಗಣಿ ಕಾರ್ಮಿಕರು ವಾಸ ಮಾಡುವ ಮನೆಗಳನ್ನು ಗಣಿ ಕಾರ್ಮಿಕರಿಗೆ ನೀಡಲು ಒತ್ತಾಯ
*ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಮಾಡುವುದನ್ನು ಕೈಬಿಡಲು ಒತ್ತಾಯ
*ಕನಿಷ್ಟ ರೂ 36 ಸಾವಿರ ಸಮಾನ ಕನಿಷ್ಟ ವೇತನಕ್ಕೆ ಒತ್ತಾಯ
*ಗುತ್ತಿಗೆ ಪದ್ದತಿ ನಿಯಂತ್ರಣಕ್ಕಾಗಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಕಾನೂನಿಗೆ ಒತ್ತಾಯ
*ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಕಾರ್ಮಿಕ ಕಾನೂನುಗಳನ್ನು ಕಡ್ಡಾಯವಾಗಿ ಜಾರಿ ಮಾಡಲು ಒತ್ತಾಯ
*ಜಿಲ್ಲೆಯ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಖಾಯಂ ಉದ್ಯೋಗ ನೀಡಲು ಒತ್ತಾಯ
*ಎಲ್ಲಾ ಸ್ಕೀಂ ನೌಕರರನ್ನು ಖಾಯಂ ಮಾಡು, ಕೋರ್ಟ್ ತೀರ್ಪುಗಳನ್ನು ಜಾರಿ ಮಾಡಲು ಒತ್ತಾಯ
*ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆಯುತ್ತಿರುವ ನಿಧಿ ದುರುಪಯೋಗ ನಿಲ್ಲಿಸಲು ಒತ್ತಾಯ
*ಬೆಮೆಲ್ ಖಾಯಂಯೇತರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯ
*ಕೋಲಾರ ಜಿಲ್ಲೆಯಲ್ಲಿ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಜಾರಿಗೊಳಿಸಲು ಒತ್ತಾಯ
*ಮಾಲೂರಿನ ವೆರ್ಗಾ ಆಟ್ಯಾಚ್ ಮಿಂಟ್ ಕಾರ್ಮಿಕರ ಬೇಡಿಕೆಗಳನ್ನು ತಕ್ಷಣ ಈಡೇರಿಸಲು ಸಮ್ಮೇಳನ ತೀರ್ಮಾನಿಸಲಾಯಿತು.ಡಿಸೆಂಬರ್ 1 ರಿಂದ ಕೇಂದ್ರ ಸಚಿವರ ಮನೆ ಮುಂದೆ ಅನಿರ್ದಿಷ್ಟ ಧರಣಿನಿರ್ಣಯಗಳು
*ಕಾರ್ಪೋರೇಟ್ ಬಂಡವಾಳಪರ ರೂಪಿಸಿರುವ ಕಾರ್ಮಿಕ ಸಂಹಿತೆಗಳನ್ನು ರಾಜ್ಯದಲ್ಲಿ ಜಾರಿ ಮಾಡದಿರಲು ಒತ್ತಾಯ
*ಇಪಿಎಪ್ ನಿವೃತ್ತಿ ವೇತನವನ್ನು ಕನಿಷ್ಟ 10 ಸಾವಿರಕ್ಕೆ ಏರಿಸಲು ಒತ್ತಾಯ
*ಚಿನ್ನದ ಗಣಿಯನ್ನು ಪುನರ್ ಆರಂಭಿಸಬೇಕು ಮತ್ತು ಪರಿಹಾರ ಹಾಗೂ ಗಣಿ ಕಾರ್ಮಿಕರು ವಾಸ ಮಾಡುವ ಮನೆಗಳನ್ನು ಗಣಿ ಕಾರ್ಮಿಕರಿಗೆ ನೀಡಲು ಒತ್ತಾಯ
*ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಮಾಡುವುದನ್ನು ಕೈಬಿಡಲು ಒತ್ತಾಯ
*ಕನಿಷ್ಟ ರೂ 36 ಸಾವಿರ ಸಮಾನ ಕನಿಷ್ಟ ವೇತನಕ್ಕೆ ಒತ್ತಾಯ
*ಗುತ್ತಿಗೆ ಪದ್ದತಿ ನಿಯಂತ್ರಣಕ್ಕಾಗಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಕಾನೂನಿಗೆ ಒತ್ತಾಯ
*ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಕಾರ್ಮಿಕ ಕಾನೂನುಗಳನ್ನು ಕಡ್ಡಾಯವಾಗಿ ಜಾರಿ ಮಾಡಲು ಒತ್ತಾಯ
*ಜಿಲ್ಲೆಯ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಖಾಯಂ ಉದ್ಯೋಗ ನೀಡಲು ಒತ್ತಾಯ
*ಎಲ್ಲಾ ಸ್ಕೀಂ ನೌಕರರನ್ನು ಖಾಯಂ ಮಾಡು, ಕೋರ್ಟ್ ತೀರ್ಪುಗಳನ್ನು ಜಾರಿ ಮಾಡಲು ಒತ್ತಾಯ
*ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆಯುತ್ತಿರುವ ನಿಧಿ ದುರುಪಯೋಗ ನಿಲ್ಲಿಸಲು ಒತ್ತಾಯ
*ಬೆಮೆಲ್ ಖಾಯಂಯೇತರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯ
*ಕೋಲಾರ ಜಿಲ್ಲೆಯಲ್ಲಿ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಜಾರಿಗೊಳಿಸಲು ಒತ್ತಾಯ
*ಮಾಲೂರಿನ ವೆರ್ಗಾ ಆಟ್ಯಾಚ್ ಮಿಂಟ್ ಕಾರ್ಮಿಕರ ಬೇಡಿಕೆಗಳನ್ನು ತಕ್ಷಣ ಈಡೇರಿಸಲು ಸಮ್ಮೇಳನ ತೀರ್ಮಾನಿಸಲಾಯಿತು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...