ಕಿಸಾನ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಿ ಸೀತಿಹೊಸೂರು ಮುರಳಿಗೌಡ ನೇಮಕ

Date:

ಕೋಲಾರ: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರ ಆದೇಶದ ಮೇರೆಗೆ ಕೋಲಾರ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾಗಿ ಈ ತಕ್ಷಣದಿಂದ ಜಾರಿಗೆ ಬರುವಂತೆ ತಾಲೂಕಿನ ಸೀತಿಹೊಸೂರು ಗ್ರಾಮದ ಮುರಳಿಗೌಡ ಎನ್ ಅವರನ್ನು ಶನಿವಾರ ನೇಮಿಸಿ ಆದೇಶ ಹೊರಡಿಸಲಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಪಕ್ಷದ ಸಂಘಟನೆ, ಹೋರಾಟದಲ್ಲಿ ತೊಡಗಿಸಿಕೊಂಡ ಹಿನ್ನೆಲೆಯಲ್ಲಿ ಹಾಗೂ ಕೋಲಾರ ಜಿಲ್ಲೆಯ ಪಕ್ಷದ ಮುಖಂಡರುಗಳ ಶಿಫಾರಸ್ಸಿನೊಂದಿಗೆ ಈ ನೇಮಕಾತಿ ಮಾಡಲಾಗಿದ್ದು ತಮಗೆ ನೀಡಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಹಾಗೂ ಕಿಸಾನ್ ಕಾಂಗ್ರೆಸ್ ಮೂಲಕ ರೈತರನ್ನು ಪಕ್ಷದಲ್ಲಿ ಸಂಘಟಿಸಲು ಶ್ರಮಿಸಬೇಕು ಎಂದು ಈ ಮೂಲಕ ಸೂಚಿಸಲಾಗಿದೆ.

ಇದನ್ನು ಓದಿದ್ದೀರಾ..? ಅಕ್ರಮವಾಗಿ ಒಂಟೆ ಸಾಗಾಣಿಕೆ-ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೋಲಾರ ಜಿಲ್ಲೆಯ ಮುಖಂಡರುಗಳ ಸಹಕಾರ ದೊಂದಿಗೆ ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸುವಂತೆ ಡಿ.ಕೆ ಶಿವಕುಮಾರ್ ಆದೇಶದಂತೆ ಕಿಸಾನ್ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಸಚಿನ್ ಮೀಗಾ ಅನುಮೋದನೆ ನೀಡಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...