ಕೃಷಿ ಜೊತೆಗೆ ಆಹಾರ ಸಂಸ್ಕರಣಾ ಘಟಕ ಉದ್ದಿಮೆ ಸ್ಥಾಪಿಸಿ

Date:

ಬಾಗೇಪಲ್ಲಿ:-ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ (ಪಿಎಂಎಫ್‌ಎಂಇ) ಯೋಜನೆಯಡಿ ರೈತ ಉತ್ಪಾದಕ ಸಂಸ್ಥೆಗಳಿಗೆ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲು ನೀಡುವ ಸಹಾಯಧನವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.

ಪಟ್ಟಣದ ಹೊರವಲಯದ ಗಾಯತ್ರಿ ಸಭಾಂಗಣ ಗಡಿದಂ ನಲ್ಲಿ ಜಿಲ್ಲಾ ಪಂಚಾಯತಿ,ಜಿಲ್ಲಾಡಳಿತ, ಕೃಷಿ ಇಲಾಖೆ ಚಿಕ್ಕಬಳ್ಳಾಪುರ,ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ವತಿಯಿಂದ ಮಂಗಳವಾರ ಆಯೋಜಿಸಿದ್ದ ‘ರೈತ ಉತ್ಪಾದಕ ಸಂಸ್ಥೆಗಳ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ (PMFME) ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯದಲ್ಲಿ ಮಾತನಾಡಿದರು.

ಕೃಷಿ ಜೊತೆಗೆ ಆಹಾರ ಸಂಸ್ಕರಣಾ ಘಟಕ ಉದ್ದಿಮೆ ಸ್ಥಾಪಿಸಿ, ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಕೃಷಿ ಉತ್ಪಾದಕ ಸಂಸ್ಥೆಗಳು, ಸ್ವ-ಸಹಾಯ ಸಂಘ ಹಾಗೂ ಸರ್ಕಾರೇತರ ಸಂಸ್ಥೆಗಳಿಗೆ ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಗರಿಷ್ಠ ₹3 ಕೋಟಿವರೆಗೆ ಸಹಾಯಧನ ಸಿಗಲಿದೆ. ಈ ಕಾರ್ಯಕ್ರಮದಡಿ ಸಂಸ್ಕರಣೆ, ಮೌಲ್ಯವರ್ಧನೆ, ಪ್ಯಾಕೇಜಿಂಗ್, ಪ್ರಯೋಗಾಲಯ ಸ್ಥಾಪನೆಯಂತಹ ಚಟುವಟಿಕೆಗಳನ್ನು ಕೈಗೊಳ್ಳಬಹುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರದ ಪಿಎಂಎಫ್‌ಎಂಇ ಯೋಜನೆಯಡಿ ರಾಜ್ಯದಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ ಸಹಾಯಧನ (ಸಬ್ಸಿಡಿ) ನೀಡಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ ಎಂದರು. ಈ ಪಿಎಂಎಫ್‌ಎಂಇ ಯೋಜನೆಯಡಿ ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಆರಂಭಿಸಲು ಮತ್ತು ಚಾಲ್ತಿಯಲ್ಲಿರುವ ಉದ್ದಿಮೆಗಳನ್ನು ವಿಸ್ತರಿಸಲು ಶೇ.50 ಅಥವಾ ಗರಿಷ್ಠ 15 ಲಕ್ಷ ರು. ಸಹಾಯಧನ ನೀಡಲಾಗುತ್ತಿದೆ. ಅಂದರೆ, ಕೇಂದ್ರ ಸರ್ಕಾರವು 6 ಲಕ್ಷ ರು. ಹಾಗೂ ರಾಜ್ಯ ಸರ್ಕಾರ 9 ಲಕ್ಷ ರು. (ಶೇ.15ರಷ್ಟು ಟಾಪ್‌ ಅಪ್‌ ಸಬ್ಸಿಡಿ ಸೇರಿ) ಸಹಾಯಧನ ನೀಡುತ್ತಿದೆ ಎಂದು ಹೇಳಿದರು.

ಎಸ್. ಎಸ್.ಅಬಿದ್ ಮಾನ್ಯ ಜಂಟಿ ಕೃಷಿ ನಿರ್ದೇಶಕ ಚಿಕ್ಕಬಳ್ಳಾಪುರ ಪ್ರಾಸ್ತಾವಿಕವಾಗಿ ಮಾತನಾಡಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ (PMFME) ಈ ಯೋಜನೆಯಡಿಯಲ್ಲಿ ಶೇ.50 ರಷ್ಟು ಅಥವಾ ಗರಿಷ್ಠ 15 ಲಕ್ಷ ರೂ. ಸಹಾಯಧನ ನೀಡಲಾಗುತ್ತಿದೆ. (ಕೇಂದ್ರ ಸರ್ಕಾರದ 6 ಲಕ್ಷ ರೂ. ಸಹಾಯಧನ ಹಾಗೂ ರಾಜ್ಯ ಸರ್ಕಾರದ 9 ಲಕ್ಷ ರೂ. ಸಹಾಯಧನ ಸೇರಿದೆ). ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ (ಕೆಪೆಕ್) ಗ್ರಾಮೀಣ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳ ಸೃಷ್ಟಿ, ಗ್ರಾಮೀಣ ಯುವಕರಿಗೆ ಉದ್ಯೋಗಾವಕಾಶ ಹಾಗೂ ರಾಜ್ಯದ ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮಬೆಲೆ ದೊರಕಿಸಿಕೊಡುವ ಧ್ಯೇಯೋದ್ದೇಶಗಳೊಂದಿಗೆ ಕರ್ತವ್ಯ ನಿರ್ವಹಿಸುತ್ತಿದೆ.
ಈ ಸಂದರ್ಭದಲ್ಲಿ ಮಾನ್ಯ ವ್ಯವಸ್ಥಾಪಕ ನಿರ್ದೇಶಕರು ಕೆಪೆಕ್ ಲಿಮಿಟೆಡ್ ಬೆಂಗಳೂರು ಸಿ.ಎನ್.ಶಿವಪ್ರಕಾಶ್ ಅವರು ಮಾರಾಟದ ಮಳಿಗೆಗಳನ್ನು ಉದ್ಘಾಟಿಸಿದರು.

ಇದನ್ನು ಓದಿದ್ದೀರಾ..? ಸಿಎಂ ಗೊಂದಲ ನಿವಾರಣೆ | ಹೈಕಮಾಂಡ್ ನಿರ್ಧಾರಕ್ಕೆ ನಾವು ಎಲ್ಲರೂ ಬದ್ಧ: ಸಚಿವ ಕೆ.ಎಚ್‌. ಮುನಿಯಪ್ಪ

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಪಿ.ಮಂಜುನಾಥ್ ರೆಡ್ಡಿ, ಶ್ರೀನಿವಾಸ್, ಪೂಜಪ್ಪ,ನರೇಂದ್ರ,ನರಸಿಂಹಪ್ಪ, ಸೋಮಶೇಖರ್,ಶಿವರಾಮ ರೆಡ್ಡಿ, ರೈತರು ಮಹಿಳಾ ಸ್ವಸಹಾಯ ಗುಂಪುಗಳು, ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...