ಕೆಜಿಎಫ್ ಕ್ಷೇತ್ರದ ಸರ್ವಾಂಗಿನ ಅಭಿವೃದ್ಧಿಗೆ ಒತ್ತು, ಅಭಿವೃದ್ಧಿಯಿಂದ ಕಮಿಷನ್ ಆರೋಪಕ್ಕೆ ಟಾಂಗ್

Date:

ಬೇತಮಂಗಲ: ಜಿಲ್ಲೆಯ ಅತಿ ದೊಡ್ಡ ಕೆರೆಯಾದ ರಾಮಸಾಗರ ಪಾಲಾರ್ ಕೆರೆ ಅಭಿವೃದ್ಧಿಗಾಗಿ 1 ಕೋಟಿ 45 ಲಕ್ಷ ರೂಗಳ ಅನುದಾನದಲ್ಲಿ ಕೆರೆ ಮತ್ತು ಕಟ್ಟೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಪ್ರವಾಸಿ ತಾಣವಾಗಿ ಕೆರೆಯನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕಿ ಎಂ ರೂಪಕಲಾ ಹೇಳಿದರು.

ಪಟ್ಟಣದ ರಾಮಸಾಗರ ಪಾಲಾರ್ ಕೆರೆಗೆ ಬಾಗೀನ ಅರ್ಪಿಸುವ ಮುನ್ನ ಕೆರೆಯ ಮುಂಭಾಗದಲ್ಲಿರುವ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಿ ನಂತರ ಸಂಪ್ರದಾಯದಂತೆ ಕೆರೆಯಲ್ಲಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ನಂತರ ಮಾತನಾಡಿದ ಅವರು ಕೆಜಿಎಫ್ ತಾಲೂಕಿನ ಬೇತಮಂಗಲ ಹಾಗೂ ರಾಮಸಾಗರ ಪಾಲಾರ್ ಕೆರೆಗಳು ಸತತವಾರದಿಂದ ಕೂಡಿ ಹರಿಯುತ್ತಿದ್ದು ತಾಲೂಕಿನ ಜನತೆಗೆ ಕುಡಿಯುವ ನೀರು ಹಾಗೂ ರೈತರ ಕೊಳವೆಬಾವಿಗಳ ರಿಚಾರ್ಜ್ ಗೆ ಸಹಕಾರಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆರೆಗಳು ಮೈದುಂಬಿ ಹರಿಯುತ್ತಿರುವ ಹಿನ್ನೆಲೆ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ ಇಂತಹ ಪ್ರಕೃತಿ ವಾತಾವರಣ ವನ್ನು ಆಸ್ವಾದಿಸಲು ರಾಜ್ಯವಲ್ಲದೆ ಹೊರರಾಜ್ಯದ ಆಂಧ್ರ ತಮಿಳ್ ನಾಡುಗಳಿಂದ ಸಹ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ. ಆದ್ದರಿಂದ ಬೇತಮಂಗಲ ಹಾಗೂ ರಾಮಸಾಗರ ಕೆರೆಗಳ ಅಭಿವೃದ್ಧಿ ಜೊತೆಗೆ ಪ್ರವಾಸಿತಾಣವಾಗಿ ರೂಪಿಸಲು ಬೋಟ್ಗಳನ್ನು ಅಳವಡಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೆಯೂ ಅನೇಕ ಶಾಸಕರು ಪ್ರತಿನಿಧಿಸಿದ್ದಾರೆ ನಾನು ಸಹ ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾನೆ.

ನನ್ನ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಯ ಜೊತೆಗೆ , ಕೆಜಿಎಫ್ ನಲ್ಲೇ ಸಾವಿರಾರು ಮಂದಿಗೆ ಉದ್ಯೋಗ ಸೃಷ್ಟಿಸಲು ಜಮೀನು ಗುರುತಿಸಿ ಕೈಗಾರಿಕೆಗಳನ್ನು ಆರಂಭಿಸಲು ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ.

ಆದರೆ ಸಹಿಸದ ವಿರೋಧಿಗಳು ಅಭಿವೃದ್ಧಿಯ ನೆಪದಲ್ಲಿ ಕಮಿಷನ್ ವಸುಲಿ ಮಾಡಲಾಗುತ್ತದೆ ಎಂಬ ಆರೋಪಗಳನ್ನು ಮಾಡುತ್ತಿರುವುದು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ ಆದರೆ ನಾನು ಯಾವುದೇ ಕಮಿಷನ್ ವಸೂಲಿ ಅಲ್ಲಿ ಇಳಿದಿಲ್ಲ ಸಿಕ್ಕ ಅವಕಾಶವನ್ನ ಪ್ರಾಮಾಣಿಕವಾಗಿ ಸದ್ಬಳಕೆ ಮಾಡಿಕೊಂಡು ಜವಾಬ್ದಾರಿಯಿಂದ ಕ್ಷೇತ್ರದ ಅಭಿವೃದ್ಧಿಯತ್ತ ಗಮನಹರಿಸುತ್ತಿದ್ದೇನೆ ಎಂದು ವಿರೋಧಿಗಳಿಗೆ ಟಾಂಗ್ ನೀಡಿದರು.

ಬೇತಮಂಗಲ ಕೆರೆಗೆ ನೀರು ಹರಿಯುತ್ತಿರುವುದು ನಿಂತ ನಂತರ ಶುದ್ಧೀಕರಿಸಿ ಕೆಜಿಎಫ್ ಗೆ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು. ಬೇಸಿಗೆ ದಿನಗಳಲ್ಲಿ ಈಗಾಗಲೇ ಅಮೃತ್ ಸಿಟಿ ಯೋಜನೆ ಅಡಿಯಲ್ಲಿ ಪೈಪ್ ಲೈನ್ ಅಳವಡಿಸಿದ್ದು ನುರಿತ ಅಧಿಕಾರಿಗಳಿಂದ ಮತ್ತೊಮ್ಮೆ ಶುದ್ಧೀಕರಣ ಘಟಕ ಪರಿಶೀಲಿಸಿ ನವೀಕರಣಗೊಳಿಸಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದನ್ನು ಓದಿದ್ದೀರಾ..?ಕಾರ್ಮಿಕರು ಜೀತದಾಳುಗಳಾಗಿದ್ದಾರೆ ದುಡಿಯುವ ವರ್ಗ ಒಗ್ಗಟ್ಟಿನಿಂದ ಹೋರಾಟಕ್ಕೆ ಮುಂದಾಗಬೇಕಾಗಿದೆ: ಮೀನಾಕ್ಷಿ ಸುಂದರಂ

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಪ್ಪ ಉಪಾಧ್ಯಕ್ಷ ಶಶಿಕಲಾ ಮಾಜಿ ಅಧ್ಯಕ್ಷ ರಮಾ ಮುರಳಿ, ಮಾಜಿ ಉಪಾಧ್ಯಕ್ಷೆ ಲಕ್ಷ್ಮಮ್ಮ, ಚನ್ನಕೇಶವ ರೆಡ್ಡಿ, ರಾಮಸಾಗರ ಮುರಳಿ, ಕಮಸಂದ್ರ ನಾಗರಾಜ್, ಸರೋಜಮ್ಮ, ವೆಂಗಸಂದ್ರ ಸುನಿತಾ ಚಂದ್ರಶೇಖರ್, ಶಂಕರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅ.ಮು ಲಕ್ಷ್ಮೀನಾರಾಯಣ, ವೃತ್ತ ನಿರೀಕ್ಷಕ ರಂಗಶಾಮಯ್ಯ ಆರಕ್ಷಕ ಉಪ ನಿರೀಕ್ಷಕ ಗುರುರಾಜ್,ಮುಖಂಡರಾದ ಕಾರಿ ಪ್ರಸನ್ನ,‌ ಹಂಗಳ ರಮೇಶ್, ರಾಮ್ ಬಾಬು ಗುತ್ತಿಗೆದಾರ ಕೋದಂಡ ರೆಡ್ಡಿ ,ಮುನಿರೆಡ್ಡಿ, ಆಂಜಪ್ಪ, ಚಂದ್ರಕಾಂತ್, ಸೀನಪ್ಪ, ಗೋಪೇನಲ್ಲಿ ಮುರಳಿ, ಪೆಂಡಾಲ್ ನಾರಾಯಣಸ್ವಾಮಿ, ಅನೇಕ ಗ್ರಾಮ ಪಂಚಾಯಿತಿ ಸದಸ್ಯರು ಮುಖಂಡರು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...