ಕೊಪ್ಪಳ | ಮುಳ್ಳಿನ ಪೊದೆಯಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆ

Date:

ಕೊಪ್ಪಳದ ಕಾರಟಗಿ ತಾಲೂಕಿನ ಉಳೆನೂರು ಗ್ರಾಮದಲ್ಲಿ ಮುಳ್ಳಿನ ಪೊದೆಯಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ. ಪ್ಲಾಸ್ಟಿಕ್ ಚೀಲದಲ್ಲಿಟ್ಟು ಬಿಸಾಡಲಾಗಿದೆ.

ಗ್ರಾಮದ ಹೊರಹೊಲಯಲ್ಲಿ ಕಂಟಿ ಸ್ವಚ್ಚಗೊಳಿಸಲೆಂದು ತೆರಳಿದ್ದ ಜಾಗದ ಮಾಲಿಕ ಕೆಟ್ಟ ವಾಸನೆ ಹಿನ್ನೆಲೆ ಗಮನಿಸಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.ಶಿಶುವನ್ನು ಜನಿಸಿದ ತಕ್ಷಣವೇ ದುಷ್ಕರ್ಮಿಗಳು ಚೀಲಕ್ಕೆ ಹಾಕಿ ಮುಳ್ಳಿನ ಪೊದೆಯಲ್ಲಿ ಎಸೆದಿರುವ ಆತಂಕ ವ್ಯಕ್ತವಾಗಿದೆ. ವಿಷಯ ತಿಳಿದ ಗ್ರಾಮಸ್ಥರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಕಾರಟಗಿ ಪಿಎಸ್‌ಐ ಕಾಮಣ್ಣ, ಎಎಸ್‌ಐ ವೆಂಕಟರಡ್ಡಿ ಹಾಗೂ ತಂಡ ವೈದ್ಯಾಧಿಕಾರಿ ಡಾ. ಸತೀಶ್ ಕುಮಾ‌ರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮದ ಕೆಲವರ ಡಿಎನ್ಎ ಟೆಸ್ಟ್ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...