ಕ್ರೀಡಾಕೂಟದಲ್ಲಿ ಸೋಲು ಗೆಲುವು ಸಮಾನವಾಗಿ ಸ್ವೀಕರಿಸಿ: ಬಿಇಒ ಮಧುಮಾಲತಿ

Date:

ಕೋಲಾರ: ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪ್ರಶಸ್ತಿ ಗಳಿಸುವುದು ಮುಖ್ಯವಲ್ಲ ಭಾಗವಹಿಸಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಪರಿಶ್ರಮ ಮತ್ತು ಉತ್ಸಾಹದಿಂದ ಪಾಲ್ಗೊಂಡು ಯಶಸ್ಸು ಗಳಿಸುವಂತಾಗಬೇಕು ಎಂದು ಕ್ಷೇತ್ರ ಶಿಕ್ಷಾಧಿಕಾರಿ ಹಾಗೂ ತಾಲೂಕು ಮಟ್ಟದ ಕ್ರೀಡಾ ಸಮಿತಿ ಅಧ್ಯಕ್ಷೆ ಮಧುಮಾಲತಿ ಪಡುವಣೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಗರದ ಮಿನಿ ಕ್ರೀಡಾಂಗಣದ ಬಾಸ್ಕೆಟ್ ಬಾಲ್ ಆಟದ ಮೈದಾನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಹಯೋಗದೊಂದಿಗೆ 2025-26 ನೇ ಸಾಲಿನ 14 ಮತ್ತು17 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಮತ್ತು ಫ್ರೌಢಶಾಲಾ ವಿಧ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕ್ರೀಡೆಯಲ್ಲಿ ಪ್ರತಿಯೊಬ್ಬರಿಗೂ ಗುರಿ ಮುಖ್ಯ ಎಲ್ಲರೂ ಸ್ಪರ್ಧಾತ್ಮಕ ಮನೋಭಾವದಿಂದ ಆಡಿದಾಗ ಕ್ರೀಡಾಕೂಟಗಳು ಯಶಸ್ವಿಯಾಗುತ್ತವೆ.

ಪ್ರತಿಯೊಂದು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ದಿಯಾಗುತ್ತದೆ ಕ್ರೀಡಾಕೂಟದಲ್ಲಿ ಯಶಸ್ಸು ಗಳಿಸಿದರೆ ವಿಧ್ಯಾಭ್ಯಾಸ ಮತ್ತು ಉದ್ಯೋಗ ಅಂತಹ ಮೀಸಲಾತಿಯ ಮೂಲಕ ಅವಕಾಶಗಳನ್ನು ಪಡೆಯಬಹುದಾಗಿದೆ ಹೋಬಳಿಯಿಂದ ತಾಲೂಕು ಜಿಲ್ಲೆ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಲಿ ಎಂದು ಶುಭಾಶಯ ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ತಾಲೂಕು ದೈಹಿಕ ಶಿಕ್ಷಣದ ಪರಿವೀಕ್ಷಕ ಹಾಗೂ ತಾಲೂಕು ಮಟ್ಟದ ಕ್ರೀಡಾ ಸಮಿತಿ ಕಾರ್ಯದರ್ಶಿ ಎಸ್ ಚೌಡಪ್ಪ ಸ್ವಾಗತಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ಕ್ರೀಡಾಕೂಟವು ಮುಖ್ಯವಾಗುತ್ತದೆ ಕ್ರೀಡಾಕೂಟಗಳಲ್ಲಿ ಭಾಗವಹಿಸುವಾಗ ತೀರ್ಪುಗಾರರ ತೀರ್ಪಿಗೆ ಎಲ್ಲರೂ ಒಪ್ಪಿ ಕಲಿಕೆಯಿಂದ ಸಿಗುವ ಶಿಕ್ಷಣ ಎಲ್ಲರಿಗೂ ಮಾದರಿಯಾಗಬೇಕು ಎಂದರು.

ಇದನ್ನು ಓದಿದ್ದೀರಾ..?ಮಿಟ್ಟೇಮರಿ ಪುವಾಡಮ್ಮ ಕೆರೆ ಕೋಡಿ:ಗ್ರಾಮ ಪಂಚಾಯತಿ ವತಿಯಿಂದ ಗಂಗೆ ಪೂಜೆ ಹಾಗೂ ಬಾಗಿನ ಸಮರ್ಪಣೆ

ಕ್ರೀಡಾಕೂಟದಲ್ಲಿ ಮುಖ್ಯ ಅಥಿತಿಗಳಾಗಿ ಪ್ರಭಾರಿ ಕ್ಷೇತ್ರ ಸಮನ್ವಯಾಧಿಕಾರಿ ಬಿ.ಆರ್.ಸಿ ಕೇಂದ್ರ ರಾಧಮ್ಮ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೆ.ಎಸ್ ಶಿವಕುಮಾರ್, ದೈಹಿಕ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ವಿ.ಮುರಳಿ ಮೋಹನ್, ತಾಲೂಕು ಅಧ್ಯಕ್ಷ ಆರ್.ನಾಗರಾಜ್, ವಿವಿಧ ಶಿಕ್ಷಣ ಸಂಘಟನೆಗಳ ಮುಖಂಡರಾದ ರಮೇಶ್ ಗೌಡ, ಎ.ಸದಾನಂದ, ಹೆಚ್ ಶಿವಕುಮಾರ್, ಸತೀಶ್ ಕುಮಾರ್, ಸಂತೋಷ್ ಕುಮಾರ್, ಮುನಿಸ್ವಾಮಿ, ನಾರಾಯಣಸ್ವಾಮಿ, ಅಂಜನೇಯ, ಜಾವೀದ್, ಶ್ರೀನಿವಾಸ್ ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...